Home ಜಿಲ್ಲೆ ಕಲಬುರಗಿ ವಂದೇ ಮಾತರಂ ಗೀತೆಗೆ ಅಗೌರವ ತೋರಿದ ಸೋನಿಯಾ ಗಾಂಧಿ ಕ್ಷಮೆಯಾಚಿಸಬೇಕು ; ಅಶೋಕ ಬಗಲಿ

ವಂದೇ ಮಾತರಂ ಗೀತೆಗೆ ಅಗೌರವ ತೋರಿದ ಸೋನಿಯಾ ಗಾಂಧಿ ಕ್ಷಮೆಯಾಚಿಸಬೇಕು ; ಅಶೋಕ ಬಗಲಿ

ಅಫಜಲಪುರ :ವಂದೇ ಮಾತರಂ ಎಂಬುದು ಕೇವಲ ಒಂದು ಗೀತೆಯಲ್ಲ,ಅದು ಭಾರತದ ಸ್ವಾತಂತ್ರ್ಯ ಹೋರಾಟ,ದೇಶಭಕ್ತಿ ಮತ್ತು ರಾಷ್ಟ್ರೀಯ ಭಾವನೆಯೊಂದಿಗೆ ಬೆಸೆದುಕೊಂಡಿರುವ ಮಹತ್ವದ ಗೀತೆ.ರಾಷ್ಟ್ರೀಯ ಕಾಂಗ್ರೆಸ್ ರಾಷ್ಟ್ರೀಯ ಕಾರ್ಯಾಲಯದಲ್ಲಿ ಸ್ವಾತಂತ್ರೋತ್ಸದ ದ್ವಜಾ ರೋಹಣ ಸಂದರ್ಭದಲ್ಲಿ ವಂದೇ ಮಾತರಂ ಗೀತೆ ಹಾಡುವ ಸಮಯ ಕಾಂಗ್ರೆಸನ ರಾಷ್ಟ್ರೀಯ ಅಧಿನಾಯಕಿ ಸೋನಿಯಾ ಗಾಂಧಿ ಅವರು ಅಡ್ಡಿಪಡಿಸುತ್ತಿರುವದು ಸರಿಯಲ್ಲ ಎಂದು ಬಿಜೆಪಿ ಗ್ರಾಮಾಂತರ ಜಿಲ್ಲಾಧ್ಯಕ್ಷ ಅಶೋಕ ಬಗಲಿ ತಿಳಿಸಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಐಸಿಸಿ ಅಧ್ಯಕ್ಷ ಡಾ.ಮಲ್ಲಿಕಾರ್ಜುನ ಖರ್ಗೆ, ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಉಪಸ್ಥಿತಿರಿದ್ದರೂ ಘಟನೆಗೆ ಸಂಬಂಧಿಸಿದಂತೆ ಯಾವುದೇ ಸ್ಪಷ್ಟವಾದ ಖಂಡನೆ ಅಥವಾ ಕ್ಷಮೆಯಾಚನೆ ಮಾಡದಿರುವುದು ಅತ್ಯಂತ ಖೇದಕರ.ರಾಷ್ಟ್ರದ ಗೌರವಕ್ಕೆ ಸಂಬಂಧಿಸಿದ ವಿಚಾರದಲ್ಲಿ ರಾಜಕೀಯ ಭೀನ್ನಾಭಿಪ್ರಾಯಗಳನ್ನು ಬದಿಗಿಟ್ಟು ರಾಷ್ಟ್ರೀಯ ಗೀತೆಗಳು ಹಾಗೂ ದೇಶದ ಪ್ರತೀಕಗಳಿಗೆ ಗೌರವ ನೀಡುವುದು ಪ್ರತಿಯೊಬ್ಬರ ಕರ್ತವ್ಯವಾಗಿದೆ. ಆದ್ದರಿಂದವಂದೇ ಮಾತರಂ ಗೀತೆಗೆ ಅಗೌರವ ತೋರಿದ ಘಟನೆಗೆ ಕಾಂಗ್ರೆಸ್ ಪಕ್ಷದ ನಾಯಕರು ಸ್ಪಷ್ಟನೆ ನೀಡಬೇಕು.ಸೋನಿಯಾ ಗಾಂಧಿ ಅವರು ದೇಶದ ಜನತೆಯ ಭಾವನೆಗಳಿಗೆ ಗೌರವ ನೀಡಿ ಕ್ಷಮೆಯಾಚಿಸಬೇಕು.

ಡಾ.ಮಲ್ಲಿಕಾರ್ಜುನ ಖರ್ಗೆ ಹಾಗೂ ರಾಹುಲ್ ಗಾಂಧಿ ಅವರು ಸಹ ಈ ಘಟನೆ ಕುರಿತು ತಮ್ಮ ನಿಲುವನ್ನು ಸ್ಪಷ್ಟಪಡಿಸಬೇಕು. ದೇಶದ ಗೌರವ ಮತ್ತು ರಾಷ್ಟ್ರೀಯ ಭಾವನೆಗಳ ವಿಚಾರದಲ್ಲಿ ಯಾವುದೇ ರಾಜಕೀಯ ಪಕ್ಷಕ್ಕೂ ರಾಜಿ ಇರಬಾರದು ಎಂದು ತಿಳಿಸಿದರು.