ದಕ್ಷಿಣಭಾರತ ಕರಾಟೆ ಚಾಂಪಿಯನ್‌ಶಿಪ್:ಎಸ್‌ಆರ್‌ಎನ್ ಮೆಹತಾ ಶಾಲೆಯ ಸಾಧನೆ

ಕಲಬುರಗಿ,ಸೆ.೩:ದಕ್ಷಿಣ ಭಾರತ ಕರಾಟೆ ಅಸೋಸಿಯೇಶನ್‌ರವರು ಬೆಂಗಳೂರಿನ ಕೋರಮಂಗಲ ಇಂಡೋರ್ ಸ್ಟೇಡಿಯಂನಲ್ಲಿ ಆಯೋಜಿಸಿದ್ದ ೪ನೇ ದಕ್ಷಿಣಭಾರತ ಕರಾಟೆ ಚಾಂಪಿಯನ್‌ಶಿಪ್ ಪಂದ್ಯದಲ್ಲಿ ನಗರದ ಎಸ್. ಆರ್. ಎನ್. ಮೆಹತಾ ಶಾಲೆಯ ವಿದ್ಯಾರ್ಥಿಗಳು ಭಾಗವಹಿಸಿ ವಿಜೇತರಾಗಿದ್ದಾರೆ.
೧೦ ವರ್ಷದ ಬಾಲಕರ ಸ್ಪರ್ಧೆಯಲ್ಲಿ ಅಮರ ಗಣೇಶ – ಕಟಾ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ,೧೨ ವರ್ಷದ ಬಾಲಕಿಯರ ಸ್ಪರ್ಧೆಯಲ್ಲಿ ಎಸ್ತರ್‌ರಾಣಿ -೩೦ ಕೆ.ಜಿ. ಕುಮತೆ ಸ್ಪರ್ಧೆಯಲ್ಲಿ ದ್ವೀತಿಯ ಸ್ಥಾನ, ಜಾನ್ಹವಿ -೫೦ ಕೆ.ಜಿ. ಕುಮತೆ ಸ್ಪರ್ಧೆಯಲ್ಲಿ ದ್ವೀತಿಯ ಸ್ಥಾನ ಮತ್ತು ಆಯಿಷಾ – ಕಟಾ ಸ್ಫರ್ಧೆಯಲ್ಲಿ ದ್ವೀತಿಯ ಸ್ಥಾನ ಪಡೆದಿದ್ದಾರೆ.
ವಿದ್ಯಾರ್ಥಿಗಳ ಸಾಧನೆಗೆ ಶಾಲೆಯ ಆಡಳಿತ ಮಂಡಳಿಯ ಟ್ರಸ್ಟಿಗಳಾದ ಚಕೋರ ಮೆಹತಾ, ಪ್ರಾಚಾರ್ಯರಾದ ಪ್ರೀತಿ ಮೆಹತಾ, ದೈಹಿಕ ಶಿಕ್ಷಣದ ವಿಭಾಗ ಮುಖ್ಯಸ್ಥ ಬಸವರಾಜ ತಳಕೇರಿ,ಕರಾಟೆ ತರಬೇತಿದಾರ ಕೃಷ್ಣಾ ಗೌಳಿ ಹಾಗೂ ಶಿಕ್ಷಕ ವರ್ಗದವರು ಹರ್ಷ ವ್ಯಕ್ತಪಡಿಸಿದ್ದಾರೆ.