ಕಾಳಗಿ ಪಿಎಸ್‍ಐ ತಿಮ್ಮಯ್ಯ ಬಿ.ಕೆ ಅವರಿಗೆ ಎಸ್ ಪಿ ಪ್ರಶಂಸೆ

ಕಾಳಗಿ:ಜ.31:ಪಟ್ಟಣದ ಪೆÇಲೀಸ್ ಠಾಣೆಯ ಪಿಎಸ್‍ಐ ತಿಮ್ಮಯ್ಯ ಬಿ.ಕೆ ಅವರು ಡಿಸೆಂಬರ್ ತಿಂಗಳಲ್ಲಿ ಕಾಳಗಿ ಪೆÇಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ರಮ ಹಾಗೂ ಕಾನೂನುಬಾಹಿರ ಚಟುವಟಿಕೆಗಳಿಗೆ ಪರಿಣಾಮಕಾರಿಯಾಗಿ ಕಡಿವಾಣ ಹಾಕಿ, ಶಾಂತಿ-ಸುವ್ಯವಸ್ಥೆ ಕಾಪಾಡುವಲ್ಲಿ ತೋರಿದ ಕರ್ತವ್ಯನಿಷ್ಠ ಸೇವೆಯನ್ನು ಗುರುತಿಸಿ ಕಲಬುರಗಿ ಜಿಲ್ಲಾ ಪೆÇಲೀಸ್ ಅಧೀಕ್ಷಕ ಅಡ್ಡೂರ ಶ್ರೀನಿವಾಸುಲು ಅವರು ಅಧಿಕೃತವಾಗಿ ಪ್ರಶಂಸೆ ವ್ಯಕ್ತಪಡಿಸಿದ್ದಾರೆ.

ಕಾಳಗಿ ಪಟ್ಟಣ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ನಡೆಯುತ್ತಿದ್ದ ಅಕ್ರಮ ಚಟುವಟಿಕೆಗಳನ್ನು ನಿಯಂತ್ರಿಸಿ, ಕಾನೂನು ಸುವ್ಯವಸ್ಥೆಯನ್ನು ಬಲಪಡಿಸುವ ನಿಟ್ಟಿನಲ್ಲಿ ಪಿಎಸ್‍ಐ ತಿಮ್ಮಯ್ಯ ಬಿ.ಕೆ ಅವರು ಶ್ರಮಪಟ್ಟು ಕಾರ್ಯನಿರ್ವಹಿಸಿದ್ದಾರೆ. ಅವರ ನಿಷ್ಠಾವಂತ ಸೇವೆ, ಶಿಸ್ತಿನ ಕಾರ್ಯವೈಖರಿ ಹಾಗೂ ಸಾರ್ವಜನಿಕರೊಂದಿಗೆ ಹೊಂದಿರುವ ಉತ್ತಮ ಸಂವಹನದಿಂದಾಗಿ ಪೆÇಲೀಸ್ ಇಲಾಖೆಯ ಮೇಲೆ ಜನರಲ್ಲಿ ವಿಶ್ವಾಸ ಹೆಚ್ಚಾಗಿದೆ ಎಂದು ಜಿಲ್ಲಾ ಪೆÇಲೀಸ್ ಅಧೀಕ್ಷಕರು ಶ್ಲಾಘಿಸಿದರು.

ಈ ಹಿನ್ನೆಲೆಯಲ್ಲಿ ಪಿಎಸ್‍ಐ ತಿಮ್ಮಯ್ಯ ಬಿ.ಕೆ ಅವರಿಗೆ ಪ್ರಶಂಸಾ ಪತ್ರವನ್ನು ನೀಡಿ, ಮುಂದಿನ ದಿನಗಳಲ್ಲಿಯೂ ಇದೇ ರೀತಿಯಲ್ಲಿ ಇನ್ನಷ್ಟು ಉತ್ತಮ ಸೇವೆ ಸಲ್ಲಿಸಿ ಇಲಾಖೆಗೆ ಹಾಗೂ ಸಮಾಜಕ್ಕೆ ಹೆಮ್ಮೆ ತರುವಂತ ಕಾರ್ಯಗಳನ್ನು ಕೈಗೊಳ್ಳಲಿ ಎಂದು ಹಾರೈಸಿದರು.

ಪಿಎಸ್‍ಐ ತಿಮ್ಮಯ್ಯ ಬಿ.ಕೆ ಅವರಿಗೆ ಲಭಿಸಿದ ಈ ಗೌರವದಿಂದ ಕಾಳಗಿ ಪೆÇಲೀಸ್ ಠಾಣೆಯ ಸಿಬ್ಬಂದಿಯಲ್ಲಿ ಹೊಸ ಉತ್ಸಾಹ ಮೂಡಿದ್ದು, ಸಾರ್ವಜನಿಕ ವಲಯದಲ್ಲಿಯೂ ಸಂತಸ ವ್ಯಕ್ತವಾಗಿದೆ.