
ಬೆಂಗಳೂರು,ಸೆ ೩: ದಕ್ಷಿಣ ಆಫ್ರಿಕಾದ ಕೇಪ್ ಟೌನ್‌ನಲ್ಲಿ ಇದೇ ೧೩ರಿಂದ ೧೯ರವರೆಗೆ ನಡೆಯಲಿರುವ ೬೯ನೇ ಕಾಮನ್‌ವೆಲ್ತ್ ಸಂಸದೀಯ ಸಮ್ಮೇಳನಕ್ಕೆ (ಸಿಪಿಸಿ) ಕರ್ನಾಟಕದ ನಿಯೋಗವನ್ನು ಮುನ್ನಡೆಸಲಿರುವ ವಿಧಾನ ಸಭಾಧ್ಯಕ್ಷ ಜಿ.ಎಸ್. ಪಾಟೀಲ ಮತ್ತು ವಿಧಾನ ಪರಿಷತ್ ಸಭಾಪತಿ ಸಲೀಂ ಅಹಮದ್ ಅವರು, ಈ ಸಮ್ಮೇಳನದ ಕುರಿತಂತೆ ಲೋಕಸಭಾ ಸಭಾಧ್ಯಕ್ಷ ಓಂ ಬಿರ್ಲಾ ಜೊತೆ ನವದೆಹಲಿಯಲ್ಲಿ ಮಹತ್ವದ ಚರ್ಚೆ ನಡೆಸಿದರು.
ಓಂ ಬಿರ್ಲಾ, ರಾಜ್ಯಸಭೆಯ ಉಪ ಸಭಾಪತಿ ಹರಿವಂಶ್ ನಾರಾಯಣ್ ಸಿಂಗ್ ಅವರು ಆಯೋಜಿಸಿದ್ದ ಈ ಸಭೆಯಲ್ಲಿ, ಸಂಸದೀಯ ವ್ಯವಹಾರಗಳು ಮತ್ತು ಸಂಪ್ರದಾಯಗಳ ಕುರಿತು ಹಾಗೂ ಮುಂಬರುವ ಸಮ್ಮೇಳನದ ಸಿದ್ಧತೆಗಳ ಕುರಿತು ವಿಚಾರ ವಿನಿಮಯ ನಡೆಸಿದರು. ಸಮ್ಮೇಳನದ ಸಿದ್ಧತೆಗಳು, ವಿವಿಧ ವಿಷಯಗಳ ಕುರಿತು ತೆಗೆದುಕೊಳ್ಳಬೇಕಾದ ಕ್ರಮಗಳು ಹಾಗೂ ಸಮ್ಮೇಳನದಲ್ಲಿ ಪರಿಣಾಮಕಾರಿಯಾಗಿ ಭಾಗವಹಿಸುವ ಕುರಿತು ಚರ್ಚೆ ನಡೆಸಿದರು.
ಸಂಸದೀಯ ವ್ಯವಸ್ಥೆಯ ಬಲವರ್ಧನೆ, ಪ್ರಜಾಪ್ರಭುತ್ವದ ಮೌಲ್ಯಗಳ ಸಂರಕ್ಷಣೆ ಹಾಗೂ ಕಾಮನ್‌ವೆಲ್ತ್ ರಾಷ್ಟçಗಳ ನಡುವಿನ ಸಂಸದೀಯ ಸಹಕಾರವನ್ನು ಮತ್ತಷ್ಟು ಬಲಪಡಿಸುವ ನಿಟ್ಟಿನಲ್ಲಿ ಸಮ್ಮೇಳನದ ಮಹತ್ವದ ಕುರಿತು ಸಭೆಯಲ್ಲಿ ಅಭಿಪ್ರಾಯ ಹಂಚಿಕೊAಡರು.
ವಿವಿಧ ರಾಜ್ಯಗಳ ಸಭಾಧ್ಯಕ್ಷರು, ಸಭಾಪತಿಗಳು, ಕೇಂದ್ರ ಮತ್ತು ರಾಜ್ಯ ಸರ್ಕಾರದ ಅಧಿಕಾರಿಗಳು ಉಪಸ್ಥಿತರಿದ್ದರು.























