ಶ್ರಾವಣದಂಗವಾಗಿ ಚಾಂಗಲೇರಾ ವೀರಭದ್ರೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ

ಬೀದರ:ಅ.11:ಕಲ್ಯಾಣ ಕರ್ನಾಟಕ ಭಾಗದ ಪ್ರಮುಖ ದೇವಾಲಯಗಳಲ್ಲಿ ಒಂದಾದ ಬೀದರ್ ದಕ್ಷಿಣ ಕ್ಷೇತ್ರದ ಸುಪ್ರಸಿದ್ಧ ಶ್ರೀ ವೀರಭದ್ರೇಶ್ವರ ದೇವಾಸ್ಥಾನವು ಒಂದಾಗಿದೆ. ಈ ದೇವಸ್ಥಾನ ಧಾರ್ಮಿಕ, ಐತಿಹಾಸಿಕ ಕ್ಷೇತ್ರವಾಗಿ ಭಕ್ತರನ್ನು ತನ್ನಡೆಗೆ ಸೆಳೆಯುತ್ತದೆ. ಜಿಲ್ಲೆಯ ಜನ ಸೇರಿದಂತೆ ರಾಜ್ಯ ಹೊರ ರಾಜ್ಯದ ಜನರ ಆರಾಧ್ಯ ದೈವ ಶ್ರೀ ವೀರಭದ್ರೇಶ್ವರಗಿದ್ದಾರೆ ಎಂದು ಬೀದರ್ ದಕ್ಷಿಣ ಕ್ಷೇತ್ರದ ಶಾಸಕರಾದ ಡಾ.ಶೈಲೇಂದ್ರ ಬೆಲ್ದಾಳೆ ಅವರು ಹೇಳಿದರು.
ಬೀದರ್ ದಕ್ಷಿಣ ಕ್ಷೇತ್ರದ ಸುಪ್ರಸಿದ್ಧ ಚಾಂಗಲೇರಾ ವೀರಭದ್ರೇಶ್ವರ ದೇವಸ್ಥಾನದಲ್ಲಿ ಶ್ರಾವಣ ಮಾಸದ ಪ್ರಯುಕ್ತ ಕುಟುಂಬದೊಂದಿಗೆ ಕ್ಷೇತ್ರದ ಹಾಗೂ ನಾಡಿನ ಜನರ ಒಳಿತಿಗಾಗಿ, ಉತ್ತಮ ಆರೋಗ್ಯಕ್ಕಾಗಿ ಹಾಗೂ ಮಳೆ ಬೆಳೆ ಉತ್ತಮವಾಗಿ ರೈತರಿಗೆ ದೇವರು ಲಾಭ ತರಲಿ ಎಂದು ವಿಶೇಷ ಪೂಜೆ ಸಲ್ಲಿಸಿ ಅವರು ಮಾತನಾಡಿದರು.
ಚಾಂಗಲೇರಾದಲ್ಲಿ ಬೇಡಿ ಬರುವ ಭಕ್ತಾದಿಗಳ ಕಷ್ಟಗಳನ್ನು ಪರಿಹರಿಸಿ ಇಷ್ಟಾರ್ಥಗಳನ್ನು ನೀಡಿ ಹರಸುವ ಜಾಗೃತ ಪೀಠವಾಗಿದೆ. ಕೋಟ್ಯಂತರ ಭಕ್ತರ ಆರಾಧ್ಯ ದೈವ ವೀರಭದ್ರೇಶ್ವರು. ಕನ್ನಡ ನಾಡಿನ ಮುಕುಟಮಣಿಯಾಗಿರುವ ಬೀದರ್ ಜಿಲ್ಲೆ ಸಾಧು ಸಂತರು, ಶರಣರು ಜನಿಸಿದ, ನಡೆದಾಡಿದ ಪುಣ್ಯಭೂಮಿಯಾಗಿದೆ ಸುಕ್ಷೇತ್ರ ಚಾಂಗಲೇರಾ ಗ್ರಾಮದ ವೀರಭದ್ರೇಶ್ವರರು ನಾಡಿನ ಹಾಗೂ ಆಂಧ್ರ, ತೆಲಂಗಾಣ, ಮಹಾರಾಷ್ಟ್ರ ಸೇರಿ ದೇಶ್ಯಾದಂತ ಅಪಾರ ಭಕ್ತವೃಂದವನ್ನು ಹೊಂದಿದೆ ಎಂದು ಬಣ್ಣಿಸಿದರು.
ವೀರಭದ್ರೇಶ್ವರನ ದರ್ಶನ ಪಡೆಯಲು ದಿನಾಲು ಸಾವಿರಾರು ಭಕ್ತರು ದೇವಸ್ಥಾನಕ್ಕೆ ಭೇಟಿ ನೀಡುತ್ತಾರೆ. ಶ್ರಾವಣ ಮಾಸದಲ್ಲಿ ಹಾಗೂ ಜಾತ್ರಾ ಮಹೋತ್ಸವದಲ್ಲಿ ಲಕ್ಷಾಂತರ ಭಕ್ತರ ದಂಡು ಇಲ್ಲಿ ಕಂಡುಬರುತ್ತದೆ. ದೇವಸ್ಥಾನಕ್ಕೆ ಬರುವ ಭಕ್ತರಿಗೆ ಯಾವುದೇ ರೀತಿಯ ತೊಂದರೆ ಉಂಟಾಗದಂತೆ ನೋಡಿಕೊಳ್ಳುವುದು ನಮ್ಮೆಲ್ಲರ ಜವಾಬ್ದಾರಿ ಹೀಗಾಗಿ ನಾನು ಶಾಸಕನಾದ ಬಳಿಕ ಯಾವುದೇ ಕಾರ್ಯಕ್ರಮ ಮುನ್ನ ಅಧಿಕಾರಿಗಳ, ಗ್ರಾಮಸ್ಥರ ಸಭೆಯಲ್ಲಿ ಪಾಲ್ಗೊಂಡು ಜಾತ್ರಾ ಮಹೋತ್ಸವ, ಶ್ರಾವಣ ಮಾಸದ ಪ್ರಯುಕ್ತ ನಡೆಯುವ ಕಾರ್ಯಕ್ರಮ ಅದ್ದೂರಿಯಾಗಿ ನಡೆಯುವಂತೆ ನೋಡಿಕೊಳ್ಳುತೇವೆ ಭಕ್ತರಿಗಾಗಿ ದೇವಸ್ಥಾನದಿಂದ ಉತ್ತಮ ಯಾತ್ರಿ ನಿವಾಸ, ಶೌಚಾಲಯಗಳು ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಲಾಗಿದೆ ಎಂದರು. ಶಾಸಕರು ಚಾಂಗಲೇರಾ ವೀರಭದ್ರೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿ ದೇವರ ಆಶೀರ್ವಾದ ಪಡೆದ ಬಳಿಕ ಗುರುಗಳ ಪಾದಪೂಜೆ ನೆರವೇರಿಸಿ. ದೇವಸ್ಥಾನಕ್ಕೆ ಬಂದ ಸದ್ಭಕ್ತರಿಗಾಗಿ ಏರ್ಪಡಿಸಿದ್ದ ಪ್ರಸಾದ ವಿತರಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡರು.
ಈ ಸಂದರ್ಭದಲ್ಲಿ ಪಕ್ಷದ ಮುಖಂಡರು, ಕಾರ್ಯಕರ್ತರು ಹಾಗೂ ಸಾರ್ವಜನಿಕ ಬಂಧುಗಳು ಮತ್ತಿತರರು ಉಪಸ್ಥಿತರಿದ್ದರು.