
ಮುದ್ದೇಬಿಹಾಳ: ಸಂಕಷ್ಟಿ ಚತುರ್ಥಿ ನಿಮಿತ್ತ ಶುಕ್ರವಾರರಂದು ಪಟ್ಟಣದ ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ಶ್ರದ್ಧಾಭಕ್ತಿಯಿಂದ ವಿಶೇಷ ಪೂಜಾ ಕಾರ್ಯಕ್ರಮಗಳು ಜರುಗಿದವು.
ಬೆಳಿಗ್ಗೆ ಶ್ರೀ ಮಹಾಗಣಪತಿ ಮಹಾಮೂರ್ತಿಗೆ ವಿಶೇಷ ಪಂಚಾಮೃತ ಅಭಿಷೇಕ, ಅಲಂಕಾರ ಹಾಗೂ ಮಹಾಮಂಗಳಾರತಿ ಕಾರ್ಯಕ್ರಮವನ್ನು ವೇ|| ಗುರುರಾಜ ರಾಜಪುರೋಹಿತ ಆಚಾರ್ಯ ಅವರು ನೆರವೇರಿಸಿದರು.
ಸಾಯಂಕಾಲ ಕಾರ್ತಿಕ ಮಾಸದ ನಿಮಿತ್ತ ದೇವಸ್ಥಾನದ ಆವರಣದಲ್ಲಿ ಭಕ್ತಾದಿಗಳಿಂದ ಭಕ್ತಿಭಾವದಿಂದ ದೀಪೋತ್ಸವ ಕಾರ್ಯಕ್ರಮ ಜರುಗಿತು. ನಂತರ ಮಹಾಮಂಗಳಾರತಿ ನೆರವೇರಿಸಲಾಯಿತು.
ನಂತರ ಸಮಸ್ತ ಭಕ್ತಾದಿಗಳಿಗೆ ಮಹಾಪ್ರಸಾದ ವಿತರಿಸಲಾಯಿತು.
ಈ ಕಾರ್ಯಕ್ರಮದಲ್ಲಿ ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಶ್ರೀ ಮಹಾಗಣಪತಿಯ ದರ್ಶನ ಪಡೆದು ಪುನೀತರಾದರು.




















