
ಬೆಂಗಳೂರು, ಸೆ. ೨೦- ವಿಧಾನಮಂಡಲದ ಮೂರು ದಿನದ ವಿಶೇಷ ಅಧಿವೇಶನ ನಾಳೆಯಿಂದ ಆರಂಭವಾಗುತ್ತಿದ್ದು ಈ ಅಧಿವೇಶನದಲ್ಲಿ ಪಶ್ಚಿಮ ಘಟ್ಟಕ್ಕೆ ಸಂಬಂಧಿಸಿದ ಕಸ್ತೂರಿ ರಂಗನ್ ವರದಿ ಹಾಗೂ ರಾಜ್ಯದ ಭೀಕರ ಬರ ಪರಿಸ್ಥಿತಿಯ ಬಗ್ಗೆ ಚರ್ಚೆ ಆಗಲಿದೆ .
ಕಳೆದ ತಿಂಗಳು ನಡೆದಿದ್ದ ೧೧ ದಿನಗಳ ಮುಂಗಾರು ಅಧಿವೇಶನದಲ್ಲಿ ಪ್ರತಿಪಕ್ಷಗಳು ಆಗ ಸಚಿವರಾಗಿದ್ದ ನಾಗೇಂದ್ರ ಅವರ ರಾಜೀನಾಮೆಗೆ ಆಗ್ರಹಿಸಿ ಸದನದ ಒಳಗೆ ಹೋರಾಟ ನಡೆಸಿದ್ದವು ಆಡಳಿತರೂಢ ಕಾಂಗ್ರೆಸ್ ಪಕ್ಷ ಸಹ ಪ್ರತಿಪಕ್ಷಗಳ ಪಟ್ಟಿಗೆ ಮಣಿಯದ ಕಾರಣ ಮುಂಗಾರು ಅಧಿವೇಶನದಲ್ಲಿ ಸುಗಮ ಕಲಾಪ ಕಲಾಪ ಸಾಧ್ಯವಾಗಿರಲಿಲ್ಲ ಹಾಗಾಗಿ ರಾಜ್ಯದ ಜ್ವಲಂತ ಸಮಸ್ಯೆಗಳ ವಿಚಾರಗಳ ಚರ್ಚೆ ಮೂಲೆಗುಂಪಾಗಿತ್ತು ಸದನದಲ್ಲಿ ಯಾವುದೇ ಜ್ವಲಂತ ಸಮಸ್ಯೆಗಳ ಬಗ್ಗೆ ಚರ್ಚೆಗಳನ್ನು ನಡೆಸಲು ಅವಕಾಶವಾಗಿರಲಿಲ್ಲ ಮುಂಗಾರು ಅದಿವೇಶನ ಗದ್ದಲ ವಾಕ್ಸಮರ ಆರೋಪ ಪ್ರತ್ಯಾರೋಪ ಗೊಂದಲದಲ್ಲಿ ಮುಗಿದಿತ್ತು.
ಪಶ್ಚಿಮ ಘಟ್ಟಕ್ಕೆ ಸಂಬಂಧಿಸಿದಂತೆ ಕಸ್ತೂರಿರಂಗನ್ ವರದಿ ಸಂಬಂಧ ಕೇಂದ್ರ ಸರ್ಕಾರ ಅಧಿ ಸೂಚನೆ ಪ್ರಕಟಿಸಿ ಪ್ರಕಟಿಸಿದ ಬೆನ್ನಲ್ಲೇ ಈ ವರದಿಗೆ ರಾಜ್ಯದಲ್ಲಿ ವ್ಯಾಪಕ ವಿರೋಧ ವ್ಯಕ್ತವಾಗಿತ್ತು. ಅದರಲ್ಲೂ ಮಲೆನಾಡು ಭಾಗದ ಜನರಿಗೆ ಈ ವರದಿ ಮಾರಕವಾಗಲಿದೆ ಈ ವರದಿಯನ್ನ ರಾಜ್ಯ ಸರ್ಕಾರ ಯಾವುದೇ ಕಾರಣಕ್ಕೂ ಒಪ್ಪಬಾರದು ಎಂಬ ಆಗ್ರಹಗಳು ಕೇಳಿ ಬಂದಿದ್ದವು ಜೊತೆಗೆ ರಾಜ್ಯದಲ್ಲಿ ಬರ ಪರಿಹಾರ ಕಾರ್ಯಗಳು ಸಮರ್ಪಕವಾಗಿ ನಡೆದಿಲ್ಲ ಎಂದು ಪ್ರತಿಪಕ್ಷಗಳು ಹಾಗೆಯೇ ಆಡಳಿತರೂಢ ಕಾಂಗ್ರೆಸ್ ಪಕ್ಷದ ಮೇಲೆ ಹರಿಹಾಯಿದಿದ್ದವು ಬರಕ್ಕೆ ಸಂಬಂಧಿಸಿದಂತೆ ಕೇಂದ್ರದಿಂದ ಹೆಚ್ಚಿನ ನೆರವಿಗೆ ಪ್ರತಿಪಕ್ಷಗಳು ಸಹಕಾರ ನೀಡಬೇಕು ಎಂದು ಕಾಂಗ್ರೆಸ್ ಪಕ್ಷ ತಿರು ಗೇಟು ನೀಡಿತು.
ಈ ಎಲ್ಲಾ ಬೆಳವಣಿಗೆಗಳ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಎಲ್ಲಾ ವಿಚಾರಗಳ ಚರ್ಚೆಗೆ ಮೂರು ದಿನಗಳ ವಿಶೇಷ ಅಧಿವೇಶನ ನಡೆಸುವ ತೀರ್ಮಾನವನ್ನ ಕೈಗೊಳ್ಳಲಾಗಿತ್ತು ಅದರಂತೆ ನಾಳೆಯಿಂದ ವಿಧಾನ ಮಂಡಲದ ಮೂರು ದಿನಗಳ ವಿಶೇಷ ಅಧಿವೇಶನ ಆರಂಭವಾಗಲಿದೆ ಈ ಅಧಿವೇಶನದಲ್ಲಿ ಪಶ್ಚಿಮ ಘಟ್ಟದ ಕಸ್ತೂರಿರಂಗನ್ ವರದಿ ಹಾಗೂ ಬರ ಪರಿಸ್ಥಿತಿಯ ಬಗ್ಗೆ ಮಾತ್ರ ಚರ್ಚೆಗಳು ನಡೆಯಲಿದ್ದು ಈ ಕಾರ್ಯಸೂಚಿಬಿಟ್ಟರೆ ಬೇರೆ ಯಾವುದೇ ಕಾರ್ಯಸೂಚಿ ಇರುವುದಿಲ್ಲ ಎಂದು ಸರ್ಕಾರ ಸ್ಪಷ್ಟಪಡಿಸಿದೆ ಹಾಗಾಗಿ ನಾಳೆಯಿಂದ ಆರಂಭವಾಗಲಿರುವ ವಿಧಾನ ಮಂಡಲದ ವಿಶೇಷ ಅಧಿವೇಶನದಲ್ಲಿ ಕಸ್ತೂರಿ ರಂಗನ ವರದಿ ಹಾಗೂ ಬರ ಪರಿಸ್ಥಿತಿಯ ಬಗ್ಗೆ ಮಾತ್ರ ಚರ್ಚೆಗಳು ನಡೆಯಲಿದೆ ಬೇರೆ ಯಾವುದೇ ವಿಚಾರಗಳ ಚರ್ಚೆ ವಿಧಾನಸಭೆ ಹಾಗೂ ವಿಧಾನ ಪರಿಷತ್ತಿನ ಕಲಾಪದ ಕಾರ್ಯಸೂಚಿಯಲ್ಲಿ ಇಲ್ಲ.
ವಿಪಕ್ಷ ಆಡಳಿತ ಪಕ್ಷ ಸಜ್ಜು ನಾಳೆಯಿಂದ ನಡೆಯಲಿರುವ ವಿಧಾನ ಮಂಡಳದ ವಿಶೇಷ ಅಧಿವೇಶನದಲ್ಲಿ ರಾಜ್ಯದಲ್ಲಿ ಬರ ಪರಿಸ್ಥಿತಿಯನ್ನ ನಿಭಾಯಿಸುವಲ್ಲಿ ರಾಜ್ಯ ಸರ್ಕಾರದ ವೈಫಲ್ಯ ಕುಡಿಯುವ ನೀರಿನ ಕೊರತೆ ವಿದ್ಯುತ್ ಸಮಸ್ಯೆ ಸೇರಿದಂತೆ ಹಲವು ವಿಚಾರಗಳನ್ನು ಮುಂದಿಟ್ಟುಕೊಂಡು ಸರ್ಕಾರವನ್ನು ತರಾಟೆಗೆ ತೆಗೆದುಕೊಳ್ಳಲು ಪ್ರತಿಪಕ್ಷಗಳು ಸಂಪೂರ್ಣ ಸಜ್ಜಾಗಿವೆ.
ರಾಜ್ಯದಲ್ಲಿ ಬರ ಘೋಷಣೆಯಲ್ಲಿನ ತಾರತಮ್ಯ ಬರನಿರ್ವಹಣೆಯಲ್ಲಿ ಆಗಿರುವ ಲೋಪ ಬರ ಪರಿಹಾರ ಕಾರ್ಯಗಳು ಇನ್ನು ಆರಂಭವಾಗದಿರುವ ಎಲ್ಲಾ ವಿಚಾರಗಳನ್ನು ಸದನದಲ್ಲಿ ಪ್ರಸ್ತಾಪಿಸಿ ಸರ್ಕಾರವನ್ನ ಇಕ್ಕಟ್ಟಿಗೆ ಸಿಲುಕಿಸಲು ಪ್ರತಿಪಕ್ಷಗಳು ತುದಿಗಾಲ ಮೇಲೆ ನಿಂತಿವೆ ಪ್ರತಿಪಕ್ಷಗಳ ಟೀಕಾಸ್ತ್ರಗಳಿಗೆ ಆಡಳಿತರೂಢ ಕಾಂಗ್ರೆಸ್ ಪಕ್ಷ ಸಹ ತನ್ನದೇ ಆದ ಪ್ರತ್ಯಾಸ್ತ್ರಗಳನ್ನು ಸಿದ್ಧಪಡಿಸಿಕೊಂಡಿದ್ದು ಕಸ್ತೂರಿರಂಗನ್ ವರದಿಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ಅಧಿಸೂಚನೆ ಹೊರಡಿಸಿರುವ ವಿಚಾರವನ್ನು ಮುಂದಿಟ್ಟುಕೊಂಡು ಪ್ರತಿಪಕ್ಷಗಳನ್ನ ಪ್ರತಿ ಪಕ್ಷಗಳ ಬಾಯಿಗೆ ಬೀಗ ಹಾಕುವ ತಯಾರಿಯನ್ನು ಕಾಂಗ್ರೆಸ್ ಪಕ್ಷ ನಡೆಸಿದೆ ಹಾಗಾಗಿ ಸದನದಲ್ಲಿ ಬರ ಪರಿಸ್ಥಿತಿಯ ಬಗ್ಗೆ ಕಾವೇರಿದ ಚರ್ಚೆ ವಾಕ್ಸಮರ ನಡೆಯುವುದು ನಿಶ್ಚಿತ.
































