
ಬೀದರ್: ಏ.4:ಗ್ಲೋಬಲ್ ಸೈನಿಕ್ ಅಕಾಡೆಮಿಯಲ್ಲಿ ದಿನಾಂಕ 06-04-2026 ರಿಂದ 19 ಏಪ್ರಿಲ್ ವರೆಗೆ ಮಕ್ಕಳಿಗಾಗಿ ವಿಶೇಷ ಬೇಸಿಗೆ ಶಿಬಿರವನ್ನು ಪ್ರಾರಂಭಿಸಲಾಗುತ್ತಿದೆ. ಈ ದಿನ ವೇಗದ ಜೀವನಶೈಲಿಯಲ್ಲಿ ಮಕ್ಕಳಿಗೆ ಶಿಕ್ಷಣದ ಜೊತೆಗೆ ಮನರಂಜನೆ ಹಾಗೂ ಕೌಶಲ್ಯಾಭಿವೃದ್ಧಿ ಅತ್ಯಂತ ಅಗತ್ಯವಾಗಿದೆ. ಈ ಅಗತ್ಯವನ್ನು ಮನಗಂಡು, ಅಕಾಡೆಮಿಯು ಈ ಶಿಬಿರವನ್ನು ಆಯೋಜಿಸಿದ್ದು, ಮಕ್ಕಳ ಸವಾರ್ಂಗೀಣ ಬೆಳವಣಿಗೆಯನ್ನು ಗುರಿಯಾಗಿಸಿಕೊಂಡಿದೆ.
ಈ ಶಿಬಿರದಲ್ಲಿ ಗ್ಲೋಬಲ್ ಸೈನಿಕ್ ಅಕಾಡೆಮಿಯ ವಿದ್ಯಾರ್ಥಿಗಳಷ್ಟೇ ಅಲ್ಲದೆ, ಇತರೆ ಶಾಲೆಗಳ ವಿದ್ಯಾರ್ಥಿಗಳಿಗೂ ಭಾಗವಹಿಸುವ ಅವಕಾಶವನ್ನು ಕಲ್ಪಿಸಲಾಗಿದೆ. ವಿವಿಧ ವಯೋಮಾನದ ಮಕ್ಕಳಿಗೆ ಅನುಗುಣವಾಗಿ ತರಬೇತಿಗಳನ್ನು ವಿನ್ಯಾಸಗೊಳಿಸಲಾಗಿದ್ದು, ಅನುಭವಸಂಪನ್ನ ತರಬೇತಿದಾರರಿಂದ ಮಾರ್ಗದರ್ಶನ ನೀಡಲಾಗುತ್ತದೆ.
ಶಿಬಿರದಲ್ಲಿ ಧ್ಯಾನ ಮತ್ತು ಯೋಗದ ಮೂಲಕ ದೈಹಿಕ ಮತ್ತು ಮಾನಸಿಕ ಆರೋಗ್ಯವನ್ನು ಸುಧಾರಿಸುವುದು, ನೃತ್ಯ ಮತ್ತು ಸಂಗೀತದ ಮೂಲಕ ಸೃಜನಾತ್ಮಕತೆಯನ್ನು ಉತ್ತೇಜಿಸುವುದು, ಒಬ್ಬಟಾಕಲ್ ಕೋರ್ಸ್, ಕುದುರೆ ಸವಾರಿ ಮತ್ತು ಟ್ರೆಕ್ಕಿಂಗ್ ಮೂಲಕ ಧೈರ್ಯ ಮತ್ತು ಸಾಹಸ ಮನೋಭಾವವನ್ನು ಬೆಳೆಸುವುದು, ಈಜು, ಶೂಟಿಂಗ್ ಹಾಗೂ ಆರ್ಚರಿ ಮೂಲಕ ಕ್ರೀಡಾ ಕೌಶಲ್ಯಗಳನ್ನು ವೃದ್ಧಿಸುವುದು ಸೇರಿದಂತೆ ಹಲವು ಚಟುವಟಿಕೆಗಳನ್ನು ಒಳಗೊಂಡಿದೆ. ಜೊತೆಗೆ ಹಾಗೂ ಜೀವನ ಕೌಶಲ್ಯಗಳ ಮೂಲಕ ಮಕ್ಕಳಲ್ಲಿ ತಾರ್ಕಿಕ ಚಿಂತನೆ, ನಿರ್ಧಾರ ಸಾಮಥ್ರ್ಯ ಮತ್ತು ಸ್ವಾವಲಂಬನೆಯನ್ನು ಬೆಳೆಸುವ ವಿಶೇಷ ತರಗತಿಗಳನ್ನೂ ಏರ್ಪಡಿಸಲಾಗಿದೆ.
ಇದರೊಂದಿಗೆ, ಮಕ್ಕಳಿಗೆ ಸುರಕ್ಷಿತ ಹಾಗೂ ಸುಲಭ ಸಾರಿಗೆ ವ್ಯವಸ್ಥೆ, ಸ್ವಚ್ಛ ಹಾಗೂ ರುಚಿಕರ ತಿಂಡಿ ವ್ಯವಸ್ಥೆಯನ್ನು ಒದಗಿಸಲಾಗಿದ್ದು, ಪೆÇೀಷಕರು ಯಾವುದೇ ಆತಂಕವಿಲ್ಲದೆ ತಮ್ಮ ಮಕ್ಕಳನ್ನು ಶಿಬಿರಕ್ಕೆ ಕಳುಹಿಸಬಹುದಾಗಿದೆ.
ಈ ಶಿಬಿರದ ಮುಖ್ಯ ಉದ್ದೇಶ ಮಕ್ಕಳಲ್ಲಿರುವ ಹುದುಗಿರುವ ಪ್ರತಿಭೆಯನ್ನು ಗುರುತಿಸಿ, ಅದನ್ನು ಹೊರತೆಗೆದು, ಅವರಲ್ಲಿ ಆತ್ಮವಿಶ್ವಾಸವನ್ನು ಹೆಚ್ಚಿಸುವುದಾಗಿದೆ. ಮಕ್ಕಳು ತಮ್ಮ ಬಿಡುವಿನ ಸಮಯವನ್ನು ಸದುಪಯೋಗಪಡಿಸಿಕೊಂಡು, ತಮ್ಮ ಆಸಕ್ತಿ ಮತ್ತು ಪ್ರತಿಭೆಗಳ ಅಭಿವೃದ್ಧಿಗೆ ಇದು ಉತ್ತಮ ವೇದಿಕೆಯಾಗಲಿದೆ. ಇಂತಹ ಶಿಬಿರಗಳು ಮಕ್ಕಳ ವ್ಯಕ್ತಿತ್ವ ವಿಕಾಸದಲ್ಲಿ ಮಹತ್ತರ ಪಾತ್ರ ವಹಿಸುತ್ತವೆ. ನಮ್ಮ ಶಾಲೆಯ ಮಕ್ಕಳು ಶೋಟಿಂಗ್ ನಲ್ಲಿ ರಾಷ್ಟ್ರ ಮಟ್ಟದಲ್ಲಿ ಆಯ್ಕೆ ಆಗಿದ್ದಾರೆ. ರಾಜ್ಯ ಮಟ್ಟದ ಶೋಟಿಂಗ್ ಸ್ಪರ್ಧೆಯಲ್ಲಿ 14 ಪದಕಗನ್ನು ತಮ್ಮ ಮೂಡಿಗೆರಿಸಿಕೊಂಡಿದ್ದಾರೆ ಮತ್ತು ರಾಜ್ಯದಲ್ಲಿ ಎರಡನೆಯ ಸ್ಥಾನ ಪಡೆದಿದ್ದಾರೆ.
ಪ್ರತಿ ವರ್ಷ ಬೀದರ್ ನಗರದ ಅನೇಕ ಮಕ್ಕಳು ಈ ಶಿಬಿರದಿಂದ ಪ್ರಯೋಜನ ಪಡೆದುಕೊಂಡಿದ್ದು, ಅವರಲ್ಲಿ ಉತ್ತಮ ಬದಲಾವಣೆ ಕಂಡುಬಂದಿದೆ. ಈ ಹಿನ್ನೆಲೆಯಲ್ಲಿ, ಈ ವರ್ಷವೂ ಹೆಚ್ಚಿನ ಸಂಖ್ಯೆಯಲ್ಲಿ ಮಕ್ಕಳು ಈ ಅವಕಾಶವನ್ನು ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಸಂಸ್ಥೆಯ ಅಧ್ಯಕ್ಷರಾದ ಕರ್ನಲ್ ಶರಣಪ್ಪಾ ಸಿಕೇನಪುರೆ ಅವರು ಈ ಪತ್ರಿಕಾ ಪ್ರಕಟಣೆ ಮುಖಾಂತರ ತಿಳಿಸಿದ್ದಾರೆ.


















