Home ಜಿಲ್ಲೆ ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ ಕಾರ್ಯಕ್ರಮಕ್ಕೆ ಚಾಲನೆ

ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ ಕಾರ್ಯಕ್ರಮಕ್ಕೆ ಚಾಲನೆ

ಜಮಖಂಡಿ, ಜೂ 30: ಜಮಖಂಡಿ ನಗರದಲ್ಲಿ ವಿಶೇಷ ಮತದಾರರ ಪಟ್ಟಿಯ ಪರಿಷ್ಕರಣೆ ಕಾರ್ಯಕ್ರಮಕ್ಕೆ ಮಂಗಳವಾರ ಚಾಲನೆ ನೀಡಲಾಯಿತು.
ಉಪವಿಭಾಗಾಧಿಕಾರಿ ಶ್ವೇತಾ ಬೀಡಿಕರ್, ತಹಶೀಲ್ದಾರ್ ಅನೀಲ ಬಡಗೇರ ಹಾಗೂ ಪೌರಾಯುಕ್ತ ಜ್ಯೋತಿ ಗಿರೀಶ ಅವರ ನೇತೃತ್ವದಲ್ಲಿ ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ ಕಾರ್ಯಕ್ಕೆ ಚಾಲನೆ ನೀಡಲಾಯಿತು.
ಈ ಸಂದರ್ಭದಲ್ಲಿ ಅಧಿಕಾರಿಗಳು ಮಾತನಾಡಿ, ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆ, ತಿದ್ದುಪಡಿ ಹಾಗೂ ಹೆಸರು ತೆಗೆದುಹಾಕುವ ಪ್ರಕ್ರಿಯೆಯಲ್ಲಿ ಸಾರ್ವಜನಿಕರು ಸಕ್ರಿಯವಾಗಿ ಭಾಗವಹಿಸಿ, ತಮ್ಮ ಮಾಹಿತಿಯನ್ನು ಸರಿಯಾಗಿ ದಾಖಲಿಸಿಕೊಳ್ಳುವಂತೆ ಮನವಿ ಮಾಡಿದರು.
ಮತದಾರರ ಪಟ್ಟಿಯು ಸಮರ್ಪಕ ಹಾಗೂ ನಿಖರವಾಗಿರಲು ಸಾರ್ವಜನಿಕರ ಸಹಕಾರ ಅಗತ್ಯವಾಗಿದ್ದು, ಅರ್ಹ ಮತದಾರರು ತಪ್ಪದೇ ತಮ್ಮ ಹೆಸರುಗಳನ್ನು ಪರಿಶೀಲಿಸಿಕೊಳ್ಳಬೇಕು ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ನಗರಸಭೆ ಅಧಿಕಾರಿ ಯಲ್ಲಪ್ಪ ಬಿದರಿ, ಸೋಮೇಶ ದೇವರಮನಿ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು, ಸಿಬ್ಬಂದಿ ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.