Home ಜಿಲ್ಲೆ ರಾಜ್ಯದಲ್ಲಿ ಬರಗಾಲದ ಛಾಯೆ: ರೈತರ ಸಾಲಮನ್ನಾ ಮಾಡಿ : ಶಾಸಕ ಶರಣಗೌಡ ಕಂದಕೂರು ಆಗ್ರಹ

ರಾಜ್ಯದಲ್ಲಿ ಬರಗಾಲದ ಛಾಯೆ: ರೈತರ ಸಾಲಮನ್ನಾ ಮಾಡಿ : ಶಾಸಕ ಶರಣಗೌಡ ಕಂದಕೂರು ಆಗ್ರಹ

ಯಾದಗಿರಿ:ಜು.೧೦: ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರಗಾಲದ ಛಾಯೆ ಆವರಿಸಿದ್ದು, ರೈತರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ. ರೈತರನ್ನು ಆರ್ಥಿಕ ಸಂಕಷ್ಟದಿAದ ಪಾರು ಮಾಡಲು ರಾಷ್ಟ್ರೀಯ ಬ್ಯಾಂಕ್‌ಗಳು ಹಾಗೂ ಸಹಕಾರ ಸಂಘಗಳಲ್ಲಿ ಪಡೆದಿರುವ ಸಾಲವನ್ನು ರಾಜ್ಯ ಸರ್ಕಾರ ಕೂಡಲೇ ಮನ್ನಾ ಮಾಡಬೇಕು ಎಂದು ಗುರುಮಠಕಲ್ ಕ್ಷೇತ್ರದ ಜೆಡಿಎಸ್ ಶಾಸಕ ಶರಣಗೌಡ ಕಂದಕೂರು ಆಗ್ರಹಿಸಿದರು.
ಯಾದಗಿರಿ ತಾಲೂಕಿನ ಹೊನಗೇರಾ ಗ್ರಾಮದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿ ಮಾತನಾಡಿದ ಅವರು, ರಾಜ್ಯದ ಬಹುತೇಕ ಪ್ರದೇಶಗಳಲ್ಲಿ ಸಮರ್ಪಕ ಮಳೆಯಾಗದೆ ಬೆಳೆಗಳು ಹಾನಿಗೊಳಗಾಗಿವೆ. ಕೃಷಿ ಚಟುವಟಿಕೆ ಕುಂಠಿತಗೊAಡ ಪರಿಣಾಮ ರೈತರು ಜೀವನ ನಿರ್ವಹಣೆಗೆ ಪರದಾಡುವಂತಾಗಿದೆ. ಹಲವರು ಉದ್ಯೋಗ ಅರಸಿ ವಲಸೆ ಹೋಗುವ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಆತಂಕ ವ್ಯಕ್ತಪಡಿಸಿದರು.
ರಾಜ್ಯದ ಎಲ್ಲಾ ರೈತರ ಸಾಲವನ್ನು ಮನ್ನಾ ಮಾಡುವಂತೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದ ಸರ್ಕಾರಕ್ಕೆ ಒತ್ತಾಯಿಸಿದ ಅವರು, ಇದಕ್ಕಾಗಿ ಸುಮಾರು ?೩೦ರಿಂದ ?೪೦ ಸಾವಿರ ಕೋಟಿ ವೆಚ್ಚವಾಗಬಹುದು. ಅಗತ್ಯವಿದ್ದರೆ ಒಂದು ವರ್ಷದ ಗ್ಯಾರಂಟಿ ಯೋಜನೆಗಳನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿ ರೈತರ ಹಿತಕ್ಕಾಗಿ ಸಾಲಮನ್ನಾ ಜಾರಿಗೊಳಿಸಬೇಕು ಎಂದು ಒತ್ತಾಯಿಸಿದರು.
ರೈತರು ಆರ್ಥಿಕ ಸಂಕಷ್ಟದಿAದ ಆತ್ಮಹತ್ಯೆಯಂತಹ ದುರ್ಘಟನೆಯ ಮಾರ್ಗವನ್ನು ಹಿಡಿಯದಂತೆ ಸರ್ಕಾರ ತುರ್ತು ಕ್ರಮ ಕೈಗೊಳ್ಳಬೇಕು. ರೈತರ ಬದುಕು ಉಳಿಸುವುದು ಸರ್ಕಾರದ ಮೊದಲ ಆದ್ಯತೆಯಾಗಬೇಕು ಎಂದು ಅವರು ಹೇಳಿದರು.
ಈ ಹಿಂದೆ ಎಚ್.ಡಿ. ಕುಮಾರಸ್ವಾಮಿ ಅವರು ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ರೈತರ ಸಾಲಮನ್ನಾ ಜಾರಿಗೊಳಿಸಿ ಲಕ್ಷಾಂತರ ರೈತರಿಗೆ ನೆರವಾಗಿದ್ದರು. ಅದೇ ಮಾದರಿಯಲ್ಲಿ ಈಗಿನ ಸರ್ಕಾರವೂ ರೈತರ ಹಿತದೃಷ್ಟಿಯಿಂದ ಸಾಲಮನ್ನಾ ಘೋಷಿಸಬೇಕು ಎಂದು ಶಾಸಕ ಶರಣಗೌಡ ಕಂದಕೂರು ಆಗ್ರಹಿಸಿದರು.