
ವಿಜಯಪುರ, .ಸೆ. 1: ವಿದ್ಯಾರ್ಥಿಗಳ ಸಮಗ್ರ ವ್ಯಕ್ತಿತ್ವ ವಿಕಸನದಲ್ಲಿ ಶಿಕ್ಷಣದಷ್ಟೇ ಕ್ರೀಡೆಗೂ ಮಹತ್ವವಿದೆ. ಸದೃಢ ದೇಹ ಹೊಂದಿದ್ದಾಗ ಮಾತ್ರ ಸದೃಢ ಮನಸ್ಸು ರೂಪುಗೊಳ್ಳಲು ಸಾಧ್ಯ ಎಂದು ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ದೈಹಿಕ ಶಿಕ್ಷಣ ವಿಭಾಗದ ಸಹಾಯಕ ಪ್ರಾಧ್ಯಾಪಕ ಡಾ. ಕಿರಣ್ ಜಿ.ಎನ್. ಹೇಳಿದರು.
ನಗರದ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನಲ್ಲಿ ಆಯೋಜಿಸಿದ್ದ ರಾಷ್ಟ್ರೀಯ ಕ್ರೀಡಾ ದಿನಾಚರಣೆ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಅವರು ಮಾತನಾಡಿದರು.
ಕ್ರೀಡೆಯಿಂದ ಮಾನಸಿಕ ಒತ್ತಡ ಕಡಿಮೆಯಾಗುವುದರ ಜೊತೆಗೆ ಧೈರ್ಯ, ಪ್ರೇರಣೆ, ಸಹಕಾರ ಮನೋಭಾವ, ದೇಶಪ್ರೇಮ, ಸಮಯ ಪಾಲನೆ ಹಾಗೂ ನಾಯಕತ್ವದಂತಹ ಗುಣಗಳು ಬೆಳೆಯುತ್ತವೆ. ಆದ್ದರಿಂದ ವಿದ್ಯಾರ್ಥಿಗಳು ಪ್ರತಿದಿನ ಕನಿಷ್ಠ ಒಂದರಿಂದ ಎರಡು ಗಂಟೆ ಮೈದಾನದಲ್ಲಿ ಕ್ರೀಡಾ ಚಟುವಟಿಕೆಯಲ್ಲಿ ತೊಡಗಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.
ಹಾಕಿ ಕ್ರೀಡೆಯ ದಿಗ್ಗಜ ಹಾಗೂ ಭಾರತದ ಹೆಮ್ಮೆಯ ಕ್ರೀಡಾಪಟು ಮೇಜರ್ ಧ್ಯಾನ್‍ಚಂದ್ ಅವರ 122ನೇ ಜನ್ಮದಿನದ ಅಂಗವಾಗಿ ರಾಷ್ಟ್ರೀಯ ಕ್ರೀಡಾ ದಿನ ಆಚರಿಸಲಾಗುತ್ತಿದೆ. ಅವರ ಜೀವನ, ಕ್ರೀಡಾ ಸಾಧನೆಗಳು ಹಾಗೂ ವಿದ್ಯಾರ್ಥಿಗಳ ಬದುಕಿನಲ್ಲಿ ಕ್ರೀಡೆಯ ಮಹತ್ವದ ಕುರಿತು ಅವರು ವಿವರಿಸಿದರು.
ಕಾಲೇಜಿನ ದೈಹಿಕ ಶಿಕ್ಷಣ ವಿಭಾಗದ ಮುಖ್ಯಸ್ಥ ಡಾ. ಸುನೀಲ ನಡಕಟ್ಟಿ ಮಾತನಾಡಿ, ಮೇಜರ್ ಧ್ಯಾನ್‍ಚಂದ್ ಅವರ ಅದ್ಭುತ ಆಟದ ಕೌಶಲ್ಯ, ದೇಶಪ್ರೇಮ ಮತ್ತು ಕ್ರೀಡಾ ಸಾಧನೆಗಳು ಇಂದಿನ ಯುವ ಕ್ರೀಡಾಪಟುಗಳಿಗೆ ಸದಾ ಪ್ರೇರಣೆಯಾಗಿವೆ. ವಿದ್ಯಾರ್ಥಿಗಳು ಕ್ರೀಡೆಯಲ್ಲಿ ಸಕ್ರಿಯವಾಗಿ ಪಾಲ್ಗೊಂಡು ದೈಹಿಕ ಸಾಮಥ್ರ್ಯ, ಆತ್ಮವಿಶ್ವಾಸ, ನಾಯಕತ್ವ, ತಂಡದ ಮನೋಭಾವ ಹಾಗೂ ಶಿಸ್ತನ್ನು ಬೆಳೆಸಿಕೊಳ್ಳಬೇಕು ಎಂದರು.
ಮುಖ್ಯ ಅತಿಥಿಯಾಗಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಅಶೋಕ ಯಡಹಳ್ಳಿ ಮಾತನಾಡಿ, ವಿದ್ಯುನ್ಮಾನ ಮಾಧ್ಯಮ ಹಾಗೂ ಮೊಬೈಲ್ ಬಳಕೆ ಹೆಚ್ಚಾದಂತೆ ವಿದ್ಯಾರ್ಥಿಗಳಲ್ಲಿ ಕ್ರೀಡಾ ಚಟುವಟಿಕೆಗಳು ಕಡಿಮೆಯಾಗುತ್ತಿವೆ. ಮೊಬೈಲ್ ಜಗತ್ತು ವಿದ್ಯಾರ್ಥಿಗಳನ್ನು ಮೈದಾನದಿಂದ ದೂರ ಮಾಡುತ್ತಿದ್ದು, ಕ್ರೀಡೆಯಿಂದ ದೈಹಿಕ ಮತ್ತು ಮಾನಸಿಕ ಆರೋಗ್ಯಕ್ಕೆ ಅನೇಕ ಪ್ರಯೋಜನಗಳಿವೆ. ಹೀಗಾಗಿ ವಿದ್ಯಾರ್ಥಿಗಳು ಸದೃಢ ದೇಹವನ್ನು ಬೆಳೆಸಿಕೊಳ್ಳಲು ಕ್ರೀಡೆಗೆ ಹೆಚ್ಚಿನ ಆದ್ಯತೆ ನೀಡಬೇಕು ಎಂದು ಹೇಳಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಚಾರ್ಯ ಡಾ. ಎಸ್.ಎಸ್. ರಾಜಮಾನ್ಯ ಮಾತನಾಡಿ, ವಿದ್ಯಾರ್ಥಿಗಳ ಜೀವನದಲ್ಲಿ ಅಧ್ಯಯನ ಮತ್ತು ಕ್ರೀಡೆ ಎರಡೂ ಸಮಾನವಾಗಿ ಸಾಗಬೇಕು. ಕಾಲೇಜಿನಲ್ಲಿ ಲಭ್ಯವಿರುವ ಕ್ರೀಡಾ ಸೌಲಭ್ಯಗಳನ್ನು ಸದ್ಬಳಕೆ ಮಾಡಿಕೊಂಡು ತಮ್ಮ ಪ್ರತಿಭೆಯನ್ನು ಬೆಳೆಸಿಕೊಳ್ಳಬೇಕು ಎಂದು ಕರೆ ನೀಡಿದರು.
ಕ್ರೀಡಾ ಸಾಧಕರಿಗೆ ಸನ್ಮಾನ;
ಟೆನಿಕ್ವಾಯಿಟ್ ಮೈದಾನ ಉದ್ಘಾಟನೆ
ಕಾರ್ಯಕ್ರಮದ ಆರಂಭದಲ್ಲಿ ಕುಮಾರಿ ಐಶ್ವರ್ಯ ಇಂದಿ ಪ್ರಾರ್ಥಿಸಿದರು. ಪೆÇ್ರ. ಎ.ಸಿ. ಪೂಜೇರಿ ಸ್ವಾಗತಿಸಿದರು. ಡಾ. ಆನಂದ ಕುಲಕರ್ಣಿ ಅತಿಥಿಗಳನ್ನು ಪರಿಚಯಿಸಿದರು. ಭಾರತಿ ಇನಾಮದಾರ ವಂದಿಸಿದರು. ಡಾ. ನಾಥೂರಾಮ ಜಾಧವ ಕಾರ್ಯಕ್ರಮ ನಿರೂಪಿಸಿದರು.
ಕಾರ್ಯಕ್ರಮದಲ್ಲಿ ಡಾ. ಅನಂತ ಪದ್ಮನಾಭ ಸರವಂದಿ, ಪೆÇ್ರ. ಲಕ್ಷ್ಮೀ ಮೋರೆ, ಪೆÇ್ರ. ಪಿ.ಬಿ. ಬಿರಾದಾರ, ಡಾ. ಎಂ.ಆರ್. ಕೆಂಭಾವಿ, ವಿಶ್ರಾಂತ ಪ್ರಾಧ್ಯಾಪಕ ಪೆÇ್ರ. ಸಿದ್ದಣ್ಣ ಬಿಡಗೊಂದಿ ಹಾಗೂ ಶ್ರೀ ಶಿವಾನಂದ ಸಾಂಗೋಳಿ ಸೇರಿದಂತೆ ಗಣ್ಯರು ಉಪಸ್ಥಿತರಿದ್ದರು.
ನೂರಾರು ವಿದ್ಯಾರ್ಥಿನಿಯರು, ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಕ್ರೀಡಾ ಕ್ಷೇತ್ರದಲ್ಲಿ ಉತ್ತಮ ಸಾಧನೆ ಮಾಡಿದ ವಿದ್ಯಾರ್ಥಿನಿಯರನ್ನು ಈ ಸಂದರ್ಭದಲ್ಲಿ ಸನ್ಮಾನಿಸಲಾಯಿತು.
ದೈನಂದಿನ ಯೋಗ ತರಬೇತಿ ಪಡೆಯುತ್ತಿರುವ ವಿದ್ಯಾರ್ಥಿನಿಯರಿಗೆ ಉಚಿತ ಟಿ-ಶರ್ಟ್‍ಗಳನ್ನು ವಿತರಿಸಲಾಯಿತು. ನೂತನವಾಗಿ ನಿರ್ಮಿಸಲಾದ ಟೆನಿಕ್ವಾಯಿಟ್ ಮೈದಾನವನ್ನು ಉದ್ಘಾಟಿಸಿ, ಆಟವಾಡುವ ಮೂಲಕ ಮೈದಾನಕ್ಕೆ ಚಾಲನೆ ನೀಡಲಾಯಿತು. ಇದೇ ಸಂದರ್ಭದಲ್ಲಿ ಕ್ರೀಡಾ ಕೊಠಡಿಯನ್ನು ಅನಾವರಣಗೊಳಿಸಲಾಯಿತು.
ವಿದ್ಯಾರ್ಥಿನಿಯರಿಗೆ ಕ್ರೀಡಾ ಸೌಲಭ್ಯಗಳನ್ನು ಕಲ್ಪಿಸುವ ಮೂಲಕ ಅವರಲ್ಲಿನ ಪ್ರತಿಭೆಯನ್ನು ಗುರುತಿಸಿ ಪೆÇ್ರೀತ್ಸಾಹಿಸುವ ಕಾರ್ಯಕ್ಕೆ ಕಾರ್ಯಕ್ರಮ ಸಾಕ್ಷಿಯಾಯಿತು.





























