
ಬೀದರ್: ನ.14:ಸದೃಢ ದೈಹಿಕ ಆರೋಗ್ಯ ಕಾಯ್ದುಕೊಳ್ಳಲು ಕ್ರೀಡೆಗಳು ಸಹಕಾರಿಯಾಗುತ್ತವೆ ಎಂದು ಶ್ರೀ ದತ್ತಗಿರಿ ಮಹಾರಾಜ ಕನ್ನಡ ಮಾಧ್ಯಮ ಪಬ್ಲಿಕ್ ಶಾಲೆಯ ಪ್ರಾಚಾರ್ಯೆ ಜಯದೇವಿ ಯದಲಾಪುರೆ ಹೇಳಿದರು.
ನಗರದ ಋಷಿಕೇಶ ಶಿಕ್ಷಣ ಸಂಸ್ಥೆಯ ಸಂಚಾಲಿತ ಅರುಣೋದಯ ಪ್ರಾಥಮಿಕ ಹಾಗೂ ಪ್ರೌಢಶಾಲೆಯಲ್ಲಿ ಬುಧವಾರ ನಡೆದ ಮೂರು ದಿನಗಳ ವಾರ್ಷಿಕ ಕ್ರೀಡಾಕೂಟದ ಉದ್ಘಾಟನಾ ಸಮಾರಂಭದಲ್ಲಿ ಅವರು ಮಾತನಾಡಿದರು.
ಕ್ರೀಡೆಗಳು ಶಿಸ್ತು ಕಲಿಸುತ್ತವೆ. ಕ್ರೀಡೆಗಳಲ್ಲಿ ಪಾಲ್ಗೊಳ್ಳುವುದರಿಂದ ಇಡೀ ದಿನ ಲವಲವಿಕೆಯಿಂದ ಇರಲು ಸಾಧ್ಯವಾಗುತ್ತದೆ ಎಂದು ತಿಳಿಸಿದರು.
ಕರ್ನಾಟಕ ಲೇಖಕಿಯರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷೆ ಭಾರತಿ ವಸ್ತ್ರದ್ ಕ್ರೀಡಾಕೂಟಕ್ಕೆ ಚಾಲನೆ ನೀಡಿದರು. ಶಾಲೆಯ ಆಡಳಿತಾಧಿಕಾರಿ ಸಂತೋಷಕುಮಾರ ಮಂಗಳೂರೆ ಅಧ್ಯಕ್ಷತೆ ವಹಿಸಿದ್ದರು.
ಶ್ರೀಗುರು ಪಬ್ಲಿಕ್ ಶಾಲೆಯ ಕಾರ್ಯದರ್ಶಿ ಬಸವರಾಜೇಶ್ವರಿ, ಮಮತಾ ಮಂಗಳೂರೆ, ಅಲ್ಕಾವತಿ ಹೊಸದೊಡ್ಡೆ, ಸಂತೋಷ್ ಸೋಲಪುರೆ ಮತ್ತಿತರರು ಇದ್ದರು.
ವಿದ್ಯಾರ್ಥಿಗಳಿಗೆ ಕೊಕ್ಕೋ, ಕಬಡ್ಡಿ, ವಾಲಿಬಾಲ್, ಕುರ್ಚಿ ಆಟ, ಬಲೂನ್ ಕುರ್ಚಿ ಆಟ, ಉದ್ದ ಜಿಗಿತ, ಎತ್ತರ ಜಿಗಿತ ಮತ್ತಿತರ ಸ್ಪರ್ಧೆಗಳು ನಡೆದವು.























