ಅಫಜಲಪುರ ;ಸೆ.2: ಪ್ರತಿಯೊಬ್ಬರೂ ಒಂದಲ್ಲ ಒಂದು ಕ್ರೀಡೆಯಲ್ಲಿ ತೊಡಗಿಸಿಕೊಳ್ಳುವ ಮೂಲಕ ದೈಹಿಕ ಹಾಗೂ ಮಾನಸಿಕ ಆರೋಗ್ಯವನ್ನು ವೃದ್ಧಿ ಪಡಿಸಿಕೊಳ್ಳಬೇಕು ಎಂದು ಕೆಪಿಸಿಸಿ ಸದಸ್ಯರು ಹಾಗೂ ಹೆಚ್ಕೆಇ ಶಿಕ್ಷಣ ಮಂಡಳಿ ನಿರ್ದೇಶಕರಾದ ಅರುಣಕುಮಾರ ಎಂ. ವೈ.ಪಾಟೀಲ ಹೇಳಿದರು.
ಚಿನ್ಮಯಗಿರಿ ( ಮಹಾಂತಪುರ) ಶ್ರೀ ಮಹಾಂತೇಶ್ವರ ಸಂಯುಕ್ತ ಪದವಿ ಪೂರ್ವ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಕಾಲೇಜು ಎನ್, ಎಸ್, ಎಸ್ ಘಟಕದ ಸಂಯುಕ್ತಾಶ್ರಯದಲ್ಲಿ ನಡೆದ 2025-26ನೇ ಸಾಲಿನ ಪದವಿ ಪೂರ್ವ ಕಾಲೇಜುಗಳ ತಾಲೂಕು ಮಟ್ಟದ ಕ್ರೀಡಾಕೂಟದ ಸಮಾರೋಪ ಸಮಾರಂಭದಲ್ಲಿ ಸಸಿಗೆ ನೀರುಣಿಸಿ ಮಾತನಾಡಿ, ಇಂದಿನ ದಿನಗಳಲ್ಲಿ ಮನುಷ್ಯ ತನ್ನ ದೈನಂದಿನ ಜೀವನದ ಕೆಲಸದ ಒತ್ತಡದಿಂದಾಗಿ ವಿಶ್ರಾಂತಿ ಕೊಡೆದೆ, ದೈಹಿಕ ಮತ್ತು ಮಾನಸಿಕವಾಗಿ ಕುಗ್ಗಿ ಹೋಗುತ್ತಿದ್ದಾರೆ. ಅದಕ್ಕಾಗಿ ಪ್ರತಿಯೊಬ್ಬರೂ ತಮ್ಮ ಜೀವನದ ಜೆಂಜಾಟದ ಜೊತೆಗೆ ಯಾವುದಾದರೂ ಒಂದು ಕ್ರೀಡೆಯಲ್ಲಿ ಆಸಕ್ತಿ ವಹಿಸಿದಾಗ ಅವರ ಮಾನಸಿಕ ಒತ್ತಡ ಕಡಿಮೆಗೊಳಿಸಲು ಸಾಧ್ಯ ಎಂದು ತಿಳಿಸಿದರು.
ಕಾಯಕಯೋಗಿ ಶ್ರೀ ಷ. ಬ್ರ. ಸಿದ್ದರಾಮ ಶಿವಾಚಾರ್ಯರು ಹಾಗೂ ಶ್ರೀ ಷ. ಬ್ರ. ವೀರ ಮಹಾಂತ ಶಿವಾಚಾರ್ಯರು ಕಾರ್ಯಕ್ರಮ ದಿವ್ಯ ಸಾನಿಧ್ಯ ವಹಿಸಿದ್ದರು.
ಈ ಸಂದರ್ಭದಲ್ಲಿ ಕಲಬುರಗಿ, ಯಾದಗಿರಿ ಕೆ.ಎಂ.ಎಫ್ ಅದ್ಯಕ್ಷ ಆರ್.ಕೆ.ಪಾಟೀಲ, ಜಿ.ಪಂ. ಮಾಜಿ ಸದಸ್ಯ ಶಿವಶರಣಪ್ಪ ಹೀರಾಪುರ, ಮಹಾಂತಪ್ಪ ಅವರಾದಿ, ಮಹಾಂತೇಶ್ವರ ಕಾಲೇಜಿನ ಸಿಬ್ಬಂದಿಗಳು, ಮುಖಂಡರು, ಕ್ರೀಡಾ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

























