
ಕಲಬುರಗಿ: ಶಿಕ್ಷಣದ ಅವಿಭಾಜ್ಯ ಅಂಗವಾಗಿರುವ ಕ್ರೀಡೆಗಳು ವಿದ್ಯಾರ್ಥಿಗಳ ಸಾಧನೆಗೆ ಸ್ಪೂರ್ತಿ ನೀಡುತ್ತವೆ. ವಿದ್ಯಾರ್ಥಿಗಳು ಅಧ್ಯಯನದ ಜೊತೆಗೆ ಕ್ರೀಡಾ ಸ್ಪರ್ಧೆಗಳಲ್ಲಿ ಭಾಗವಹಿಸುವ ಉತ್ಸಾಹ ಮತ್ತು ಹುಮ್ಮಸ್ಸು
ಮೈಗೂಡಿಸಿಕೊಳ್ಳಬೇಕು. ಎಂದು ಗುಲಬರ್ಗಾ ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಶಶಿಕಾಂತ್ ಎಸ್. ಉಡಿಕೇರಿ ಹೇಳಿದರು.
ಗುಲಬರ್ಗಾ ವಿಶ್ವವಿದ್ಯಾಲಯದ ದೈಹಿಕ ಶಿಕ್ಷಣ ವಿಭಾಗ ಮಹಾತ್ಮ ಗಾಂಧಿ ಸಭಾಂಗಣದಲ್ಲಿ ಆಯೋಜಿಸಿದ ರಾಷ್ಟ್ರೀಯ ಕ್ರೀಡಾ ದಿನಾಚರಣೆ ಹಾಗೂ ಬಾಬಾಸಾಹೇಬ್ ಡಾ. ಬಿ.ಆರ್. ಅಂಬೇಡ್ಕರ್ ಅವರ ೧೩೫ನೇ ಜಯಂತಿ ನಿಮಿತ್ತ ನಡೆದ ‘ವಿಸಿ ಕಪ್ ಪಂದ್ಯಾವಳಿ, ವಿವಿಧ ಕ್ರೀಡಾ ಹಾಗೂ ಸಾಂಸ್ಕೃತಿಕ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಬಹುಮಾನ ವಿತರಣಾ ಸಮಾರಂಭವನ್ನು ಜ್ಯೋತಿ ಬೆಳಗಿಸಿ ಉದ್ಘಾಟಿಸಿ ನಂತರ ಡಾ. ಬಿ. ಆರ್. ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪ ಸಮರ್ಪಿಸಿ ಮಾತನಾಡಿದರು.
ಭಾರತದ ಹಾಕಿ ಆಟಗಾರ ಮೇಜರ್ ದ್ಯಾನ್‌ಚಂದ್ ಅವರ ಜನ್ಮದಿನವನ್ನು ರಾಷ್ಟಿçÃಯ ಕ್ರೀಡಾ ದಿನವಾಗಿ ಆಚರಿಸಲಾಗುತ್ತಿದೆ. ಇವರ ಜೀವನ ಮತ್ತು ಸಾಧನೆ ವಿದ್ಯಾರ್ಥಿ ಸಮೂಹಕ್ಕೆ ಪ್ರೇರಣೆ. ಬರ್ಲಿನ್ ಒಲಂಪಿಕ್ಸ್ ಪಂದ್ಯದಲ್ಲಿ ಹೆಚ್ಚು ಚಿನ್ನದ ಪದಕ ಪಡೆದು ದೇಶಕ್ಕೆ ಕೀರ್ತಿ ತಂದುಕೊಟ್ಟ ಸಾರ್ವಕಾಲಿಕ ಶ್ರೇಷ್ಟ ಆಟಗಾರ. ಇವರ ವೃತ್ತಿಜೀವನದ ೧೮೫ ಪಂದ್ಯಗಳಿAದ ೫೭೦ಕ್ಕೂ ಹೆಚ್ಚು ಗೋಲುಗಳನ್ನು ಪಡೆದಿದ್ದಾರೆ. ಆಟದಲ್ಲಿನ ಚುರುಕುತನ, ಚೆಂಡಿನ ನಿಯಂತ್ರಣ ಮತ್ತು ಮಾಂತ್ರಿಕ ಶಕ್ತಿ ಕ್ರೀಡಾಭಿಮಾನಿಗಳ ಮೆಚ್ಚುಗೆ ಗಳಿಸಿ ಭಾರತ ಸರ್ಕಾರದ ಪ್ರತಿಷ್ಠಿತ ‘ಪದ್ಮಭೂಷಣ’ ಗೌರವಕ್ಕೆ ಪಾತ್ರರಾಗಿದ್ದಾರೆ ಎಂದರು.
ದೈಹಿಕ ಶಿಕ್ಷಣ ವಿಭಾಗದ ನಿರ್ದೇಶಕ ಡಾ. ಹೆಚ್. ಎಸ್. ಜಂಗೆ ಅತಿಥಿ ಗಣ್ಯರನ್ನು ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿ ಭಾರತದ ಹಾಕಿ ಕ್ರೀಡೆಯಲ್ಲಿ ಮೇಜರ್ ದ್ಯಾನ್‌ಚಂದ್ ಅವರ ಹೆಸರು ಎಂದಿಗೂ ಅಜರಾಮರ. ಹಾಕಿ ಕ್ರೀಡೆಯ ಐಕಾನ್ ಆಗಿರುವ ಇವರು ಸಾವಿರ ಗೋಲುಗಳ ಸರದಾರನೆಂದೆ ಖ್ಯಾತನಾಮರಾಗಿದ್ದಾರೆ. ‘ದೇಶದಲ್ಲಿ ಹುಟ್ಟಿ ದೇಶಕ್ಕಾಗಿ ಆಡುತ್ತೇನೆ’ ಎಂಬ ಆಶಯ, ದೂರದೃಷ್ಠಿ ಮತ್ತು ದೇಶಪ್ರೇಮ ಯುವಕ್ರೀಡಾ ಪಟುಗಳಿಗೆ ಮಾದರಿ. ಭಾರತದ ಕ್ರೀಡಾಸಕ್ತರಿಗೆ ಸೂಕ್ತ ತರಬೇತಿ, ಸುಸಜ್ಜಿತ ಕ್ರೀಡಾಂಗಣ, ಉತ್ತಮ ತರಬೇತುದಾರರ ಅಗತ್ಯವಿದೆ. ಅದಕ್ಕೆ ಪೂರಕ ಸೌಲಭ್ಯಗಳನ್ನು ಸರ್ಕಾರಗಳು, ಕ್ರೀಡಾಸಂಸ್ಥೆಗಳು
ಒದಗಿಸುವ ಮೂಲಕ ವಿದ್ಯಾರ್ಥಿಗಳಿಗೆ ಹೆಚ್ಚು ಮಾರ್ಗದರ್ಶನ ಸಿಗಬೇಕಿದೆ ಎಂದರು
ಇದೇ ಸಂದರ್ಭದಲ್ಲಿ ‘ವಿಸಿ ಕಪ್&#೩೯; ಪಂದ್ಯಾವಳಿ, ವಿವಿಧ ಕ್ರೀಡಾ ಹಾಗೂ ಸಾಂಸ್ಕೃತಿಕ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಬಹುಮಾನ ವಿತರಣಾ ಮಾಡಲಾಯಿತು. ಕುಲಸಚಿವ ಪ್ರೊ. ರಮೇಶ ಲಂಡನಕರ್, ಕುಲಸಚಿವ ಡಾ. ಎನ್.ಜಿ. ಕಣ್ಣೂರ, ವಿತ್ತಾಧಿಕಾರಿ ಶ್ರೀಮತಿ ಜಯಾಂಬಿಕ, ಡಾ. ಬಿ.ಆರ್. ಅಂಬೇಡ್ಕರ್ ಅಧ್ಯಯನ ಪೀಠದ ನಿರ್ದೇಶಕ ಪ್ರೊ. ಹೂವಿನಭಾವಿ ಬಾಬಣ್ಣ, ಸಂಶೋಧನಾ ವಿದ್ಯಾರ್ಥಿಗಳ ಒಕ್ಕೂಟದ
ಅಧ್ಯಕ್ಷ ರವಿಕುಮಾರ್, ಮಾಜಿ ಅಧ್ಯಕ್ಷ ಆನಂದ ಮೇತ್ರಿ, ಸ್ನಾತಕೋತ್ತರ ವಿದ್ಯಾರ್ಥಿಗಳ ಒಕ್ಕೂಟದ ಅಧ್ಯಕ್ಷ ಸಚಿನ್ ಪಂಗರಗಿ ಉಪಸ್ಥಿತರಿದ್ದರು.
ಕಾರ್ಯಕ್ರಮದಲ್ಲಿ ವಿಶ್ವವಿದ್ಯಾಲಯದ ಅಧಿಕಾರಿಗಳು, ಎಲ್ಲಾ ವಿಭಾಗಗಳ ಮುಖ್ಯಸ್ಥರು, ಪ್ರಾಧ್ಯಾಪಕರು, ಅತಿಥಿ ಅಧ್ಯಾಪಕರು, ಬೋಧಕೇತರ ಸಿಬ್ಬಂದಿಗಳು, ಸಂಶೋಧನಾ ಹಾಗೂ ಸ್ನಾತಕೋತ್ತರ ವಿದ್ಯಾರ್ಥಿಗಳು
ಭಾಗವಹಿಸಿದ್ದರು.
ಸಂಗೀತ ವಿಭಾಗದ ಅಧ್ಯಾಪಕ ಸಿದ್ಧಾರ್ಥ ಚಿಮ್ಮಾ ಇದ್ಲಾಯಿ ಸಂಗಡಿಗರು ರಾಷ್ಟçಗೀತೆ ಮತ್ತು ನಾಡಗೀತೆ ಪ್ರಸ್ತುತಪಡಿಸಿದರು. ಶ್ರೀಧರ್ ಹೋಸಮನಿ ಡಾ. ಬಿ. ಆರ್. ಅಂಬೇಡ್ಕರ್ ಗೀತೆಗಳನ್ನಾಡಿದರು. ದೈಹಿಕ ಶಿಕ್ಷಣ
ವಿಭಾಗದ ಅಧ್ಯಾಪಕ ಡಾ. ಚಂದ್ರಕಾAತ್ ಬಿರಾದಾರ ವಂದಿಸಿದರು. ಅಣ್ಣವೀರಗೌಡ ಬಿರಾದಾರ ಕಾರ್ಯಕ್ರಮ ನಿರ್ವಹಿಸಿದರು. ಸಂಶೋಧನಾ ವಿದ್ಯಾರ್ಥಿ ಬಸವರಾಜ್ ಸಿಂಗೆಬಹುಮಾನ ವಿತರಣಾ ಕಾರ್ಯಕ್ರಮ ನಡೆಸಿಕೊಟ್ಟರು.
…………………………
ಯುವಕರಲ್ಲಿ ಕ್ರೀಡಾಸಕ್ತಿ ಕೊರತೆ ಎದ್ದು ಕಾಣುತ್ತಿದೆ. ಕ್ರಿಕೆಟ್‌ಗೆ ನೀಡಿದಷ್ಟು ಆಸಕ್ತಿಯನ್ನು ಇತರೆ ಕ್ರೀಡೆಗಳಿಗೆ ನೀಡಬೇಕು. ಪ್ರಸ್ತುತ ಕ್ರೀಡಾ ಕ್ಷೇತ್ರದಲ್ಲಿ ಸಾಕಷ್ಟು ಅವಕಾಶಗಳಿವೆ. ಕ್ರೀಡೆಗಳಿಗೆ ಅಗತ್ಯ ಬಜೆಟ್ ಒದಗಿಸಿ ಅತ್ಯುತ್ತಮ ತರಬೇತಿದಾರರಿಂದ ಸೂಕ್ತ ಮಾರ್ಗದರ್ಶನ ಒದಗಿಸಿದರೆ ಯುವ ಕ್ರೀಡಾ ಪಟುಗಳಿಗೆ ಪ್ರೋತ್ಸಾಹ ಸಿಗುತ್ತದೆ. ಯುವಕರು ಗ್ರಾಮೀಣ ಕ್ರೀಡೆಗಳ ಬಗ್ಗೆ ಆಸಕ್ತಿ ಬೆಳೆಸಿಕೊಳ್ಳಲು ಶಾಲಾ-ಕಾಲೇಜು ಮಟ್ಟದಲ್ಲಿ ಶಿಕ್ಷಣಕ್ಕೆ ಒತ್ತು ನೀಡಿದಷ್ಟು ಕ್ರೀಡೆ, ಸಾಂಸ್ಕೃತಿಕ ಮತ್ತು ಪಠ್ಯೇತರ ಚಟುವಟಿಕೆಗಳಿಗೂ ಕೂಡ ಆದ್ಯತೆ ನೀಡಬೇಕು. ವಿದ್ಯಾರ್ಥಿ ಸಮುದಾಯದ ಸಮಗ್ರ ವಿಕಾಸ, ಬೆಳವಣಿಗೆ ಮತ್ತು ಸಾಧನೆ ಕಡೆಗೆ ಪ್ರೋತ್ಸಾಹ ನೀಡುವುದು ಅವಶ್ಯಕ.
- ಪ್ರೊ. ಶಶಿಕಾಂತ್ ಎಸ್. ಉಡಿಕೇರಿ, ಕುಲಪತಿಗಳು































