
ವಿಜಯಪುರ, ಆ.31:ಜಿಲ್ಲಾ ಪಂಚಾಯತ್ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ವಿಜಯಪುರ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ನಗರ ವಲಯ ಹಾಗೂ ಶ್ರೀ ಅಭಿನವ ವಿದ್ಯಾಸಂಸ್ಥೆ, ವಿಜಯಪುರ ಇವರ ಸಂಯುಕ್ತ ಆಶ್ರಯದಲ್ಲಿ 2026-27ನೇ ಸಾಲಿನ ಸಿದ್ದೇಶ್ವರ-ಬಿ ವಲಯದ ಪ್ರೌಢಶಾಲಾ ಮಟ್ಟದ ಕ್ರೀಡಾಕೂಟ ಭಾನುವಾರ ನಗರದ ಡಾ. ಬಿ.ಆರ್. ಅಂಬೇಡ್ಕರ್ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಯಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶ್ರೀ ಅಭಿನವ ವಿದ್ಯಾಸಂಸ್ಥೆಯ ಅಧ್ಯಕ್ಷ ಮೋಹನ ದಳವಾಯಿ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ನಗರ ಘಟಕದ ಅಧ್ಯಕ್ಷ ಜುಬೇರ್ ಕೆರೂರ, ಸಂಘಟನಾ ಕಾರ್ಯದರ್ಶಿ ಕಬೂಲ್ ಕೊಕಟನೂರ, ಜಿಲ್ಲಾ ಘಟಕದ ಕ್ಷೇತ್ರ ಸಂಪನ್ಮೂಲ ವ್ಯಕ್ತಿ ಸವಿತಾ ಗೋಡೆಕರ, ಕಾರ್ಯಕ್ರಮ ಸಂಯೋಜಕ ಸವಿತಾ ಬಿ.ಎಂ. ಹಾಗೂ ಬಿರಾದಾರ ಸರ್ ಸೇರಿದಂತೆ ಶಿಕ್ಷಣ ಇಲಾಖೆಯ ಅಧಿಕಾರಿಗಳು, ಸಂಘದ ಪದಾಧಿಕಾರಿಗಳು, ಶಿಕ್ಷಕರು ಮತ್ತು ಕ್ರೀಡಾಪಟುಗಳು ಭಾಗವಹಿಸಿದ್ದರು.
ವಿದ್ಯಾರ್ಥಿಗಳಲ್ಲಿ ಕ್ರೀಡಾ ಮನೋಭಾವ, ಶಿಸ್ತು ಹಾಗೂ ಆರೋಗ್ಯಕರ ಸ್ಪರ್ಧಾ ಮನೋಭಾವ ಬೆಳೆಸುವ ನಿಟ್ಟಿನಲ್ಲಿ ವಿವಿಧ ಕ್ರೀಡಾ ಸ್ಪರ್ಧೆಗಳು ನಡೆದವು. ವಿದ್ಯಾರ್ಥಿಗಳು ಉತ್ಸಾಹದಿಂದ ಪಾಲ್ಗೊಂಡು ತಮ್ಮ ಪ್ರತಿಭೆ ಪ್ರದರ್ಶಿಸಿದರು.































