
ಕಲಬುರಗಿ,ಆ.31: ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯ (ಸಿ.ಯು.ಕೆ.) ಆವರಣದಲ್ಲಿ ರಾಷ್ಟ್ರೀಯ ಕ್ರೀಡಾ ದಿನವನ್ನು ಅತ್ಯಂತ ಉತ್ಸಾಹದಿಂದ ಆಚರಿಸಲಾಯಿತು. ಭಾರತೀಯ ಹಾಕಿಯ ದಂತಕಥೆ ಮೇಜರ್ ಧ್ಯಾನ್ ಚಂದ್ ಅವರ ಜನ್ಮದಿನದ ಅಂಗವಾಗಿ ಆಯೋಜಿಸಲಾದ ಕಾರ್ಯಕ್ರಮವು ವಿದ್ಯಾರ್ಥಿಗಳಲ್ಲಿ ಕ್ರೀಡೆ, ದೈಹಿಕ ಕ್ಷಮತೆ, ಶಿಸ್ತು ಹಾಗೂ ಕ್ರೀಡಾ ಮನೋಭಾವದ ಮಹತ್ವವನ್ನು ಉತ್ತೇಜಿಸಿತು.
ಕಾರ್ಯಕ್ರಮವು ‘ವಂದೇ ಮಾತರಂ’ ಗಾಯನದೊಂದಿಗೆ ಆರಂಭಗೊಂಡಿತು. ನಂತರ ಭಾರತೀಯ ಹಾಕಿಗೆ ಅಪಾರ ಕೊಡುಗೆ ನೀಡಿದ ಹಾಗೂ ಸಮರ್ಪಣೆ, ಶಿಸ್ತು, ಶ್ರೇಷ್ಠತೆ ಮತ್ತು ಕ್ರೀಡಾ ಮನೋಭಾವದ ಪ್ರತೀಕವಾಗಿರುವ ‘ಹಾಕಿಯ ಮಾಂತ್ರಿಕ’ ಮೇಜರ್ ಧ್ಯಾನ್ ಚಂದ್ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ಮಾತನಾಡಿದ ಕುಲಪತಿ ಪೆÇ್ರ. ಬಟ್ಟು ಸತ್ಯನಾರಾಯಣ ಅವರು, ಕ್ರೀಡೆಯು ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಗೆ ಅತ್ಯಗತ್ಯವಾಗಿದ್ದು, ಶಿಸ್ತು, ನಾಯಕತ್ವ, ತಂಡದ ಸಹಕಾರ, ದೃಢತೆ ಹಾಗೂ ಉತ್ತಮ ವ್ಯಕ್ತಿತ್ವವನ್ನು ಬೆಳೆಸುತ್ತದೆ ಎಂದು ಹೇಳಿದರು.ಇದೇ ಸಂದರ್ಭದಲ್ಲಿ ಕುಲಪತಿಗಳು ವಿದ್ಯಾರ್ಥಿಗಳೊಂದಿಗೆ ಸೌಹಾರ್ದಯುತ ಬಾಸ್ಕೆಟ್ಬಾಲ್ ಪಂದ್ಯದಲ್ಲಿ ಉತ್ಸಾಹದಿಂದ ಪಾಲ್ಗೊಂಡು, ವಿದ್ಯಾರ್ಥಿಗಳನ್ನು ಕ್ರೀಡೆಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಳ್ಳುವಂತೆ ಪೆÇ್ರೀತ್ಸಾಹಿಸಿದರು.
ಕುಲಸಚಿವ ಪೆÇ್ರ. ಆರ್. ಆರ್. ಬಿರಾದಾರ್ ಮಾತನಾಡಿ, ಶೈಕ್ಷಣಿಕ ಚಟುವಟಿಕೆಗಳೊಂದಿಗೆ ದೈಹಿಕ ಚಟುವಟಿಕೆಗಳಿಗೂ ಸಮಾನ ಆದ್ಯತೆ ನೀಡುವಂತೆ ಹಾಗೂ ವಿವಿಧ ಕ್ರೀಡಾಕೂಟಗಳಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳುವಂತೆ ವಿದ್ಯಾರ್ಥಿಗಳಿಗೆ ಕರೆ ನೀಡಿದರು.
ರಾಷ್ಟ್ರೀಯ ಕ್ರೀಡಾ ದಿನದ ಅಂಗವಾಗಿ ವಿಶ್ವವಿದ್ಯಾಲಯವು ವಾಲಿಬಾಲ್, ಬಾಸ್ಕೆಟ್ಬಾಲ್ ಮತ್ತು ಫುಟ್ಬಾಲ್ ಸೇರಿದಂತೆ ವಿವಿಧ ಕ್ರೀಡಾಕೂಟಗಳನ್ನು ಆಯೋಜಿಸುವುದಾಗಿ ಘೋಷಿಸಿತು.
ಕಾರ್ಯಕ್ರಮದಲ್ಲಿ ಕಾನೂನು ಅಧ್ಯಯನ ಮತ್ತು ವಿದ್ಯಾರ್ಥಿ ಕಲ್ಯಾಣ ವಿಭಾಗದ ಡೀನ್ ಪೆÇ್ರ. ಬಸವರಾಜ ಎಂ. ಕುಬಕಡ್ಡಿ, ರಸಾಯನಿಕ ವಿಜ್ಞಾನಗಳ ನಿಕಾಯದ ಡೀನ್ ಪೆÇ್ರ. ಪಲ್ಲೇಪೆÇೀಗು ರಾಘವಯ್ಯ, ಪೆÇ್ರ. ವೆಂಕಟ ರಮಣ ದೊಡ್ಡಿ, ಡಾ. ನಲ್ಲಂ ಬಾಬು ಹಾಗೂ ಕ್ರೀಡಾ ಸಂಯೋಜಕ ಡಾ. ಸಾಯಿ ಅಭಿನವ ಸೇರಿದಂತೆ ಬೋಧಕ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು.ಕಾರ್ಯಕ್ರಮವು ರಾಷ್ಟ್ರಗೀತೆಯೊಂದಿಗೆ ಮುಕ್ತಾಯಗೊಂಡಿತು. ಕ್ರೀಡಾ ವಿದ್ಯಾರ್ಥಿ ಆರ್ಯ ಅವರು ವಂದನಾರ್ಪಣೆ ಸಲ್ಲಿಸಿದರು.































