
ಚಿಂಚೋಳಿ: ಶಾರದಾ ಶಾಲೆಯಲ್ಲಿ ಆಯೋಜಿಸಲಾದ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣೆ ಕಾರ್ಯಕ್ರಮದಲ್ಲಿ ಮಾಜಿ ವಕೀಲರ ಸಂಘದ ಅಧ್ಯಕ್ಷ ಶ್ರೀಮಂತ ಕಟ್ಟಿಮನಿ ಅವರು ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಶ್ರೀಕೃಷ್ಣ ಜನ್ಮಾಷ್ಟಮಿ ಮಕ್ಕಳಿಗೆ ಅಚ್ಚುಮೆಚ್ಚಿನ ಹಬ್ಬವಾಗಿದ್ದು, ಸೌಹಾರ್ದತೆ, ಸಂಸ್ಕøತಿ ಹಾಗೂ ನೈತಿಕ ಮೌಲ್ಯಗಳನ್ನು ಬೆಳೆಸುವ ಹಬ್ಬವಾಗಿದೆ, ಶಾಲೆಗಳಲ್ಲಿ ಇಂತಹ ಸಾಂಸ್ಕೃತಿಕ ಹಾಗೂ ವೈವಿಧ್ಯಮಯ ಕಾರ್ಯಕ್ರಮಗಳನ್ನು ಆಯೋಜಿಸುವುದರಿಂದ ಮಕ್ಕಳ ಬೌದ್ಧಿಕ ಬೆಳವಣಿಗೆಗೆ ಉತ್ತೇಜನ ದೊರೆಯುವುದರ ಜೊತೆಗೆ ಕಲಿಕೆಯ ಸಾಮಥ್ರ್ಯವೂ ವೃದ್ಧಿಯಾಗುತ್ತದೆ. ಮಕ್ಕಳು ಮಹನೀಯರ ಆದರ್ಶಗಳು ಮತ್ತು ಸಂದೇಶಗಳನ್ನು ಜೀವನದಲ್ಲಿ ಅಳವಡಿಸಿಕೊಂಡು ಉತ್ತಮ ಪ್ರಜೆಗಳಾಗಿ ಬೆಳೆಯಬೇಕು ಎಂದು ಹೇಳಿದರು.
ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಸೈನಿಕ ಅಶೋಕ ದೇಗಲಮಡಿ ಮಾತನಾಡಿ, ಕಾರ್ಯಕ್ರಮದಲ್ಲಿ ಕೃಷ್ಣ, ರಾಧೆ ಹಾಗೂ ಇತರ ಪಾತ್ರಗಳಲ್ಲಿ ಮಿಂಚಿದ ಪುಟಾಣಿಗಳ ಪ್ರತಿಭೆಯನ್ನು ಶ್ಲಾಘಿಸಿದರು. ಇಂತಹ ಕಾರ್ಯಕ್ರಮಗಳು ಮಕ್ಕಳಲ್ಲಿ ಆತ್ಮವಿಶ್ವಾಸ, ನಾಯಕತ್ವ ಗುಣ ಹಾಗೂ ಸೃಜನಶೀಲತೆಯನ್ನು ಬೆಳೆಸಲು ಸಹಕಾರಿಯಾಗುತ್ತವೆ, ಮಕ್ಕಳು ಶಿಕ್ಷಣದ ಜೊತೆಗೆ ಸಂಸ್ಕಾರಗಳನ್ನು ಅಳವಡಿಸಿಕೊಂಡು ಭವಿಷ್ಯದಲ್ಲಿ ಉನ್ನತ ಹುದ್ದೆಗಳನ್ನು ಅಲಂಕರಿಸಿ ತಾಲೂಕು ಹಾಗೂ ಜಿಲ್ಲೆಯ ಕೀರ್ತಿಯನ್ನು ಹೆಚ್ಚಿಸಲಿ ಎಂದು ಹೇಳಿದರು.
ಅತ್ಯುತ್ತಮವಾಗಿ ಶ್ರೀ ಕೃಷ್ಣ ರಾಧೆಯರ ವಸ್ತ್ರ ಹಾಗೂ ಮಾತನಾಡಿದ ಮಕ್ಕಳಿಗೆ ಪ್ರಥಮ,ದ್ವಿತೀಯ, ತೃತೀಯ ಹಾಗೂ ಉಳಿದ ಮಕ್ಕಳಿಗೆ ಸಮಾಧಾನಕರ ಬಹುಮಾನವನ್ನು ಕೊಡಲಾಯಿತು.
ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ಶ್ರೀಕೃಷ್ಣನ ಬಾಲಲೀಲೆಗಳನ್ನು ಪ್ರತಿಬಿಂಬಿಸುವ ವಿವಿಧ ವೇಷಭೂಷಣಗಳಲ್ಲಿ ಪಾಲ್ಗೊಂಡು ಎಲ್ಲರ ಗಮನ ಸೆಳೆದರು. ಶಾಲೆಯ ಆಡಳಿತ ಅಧಿಕಾರಿ ರಾಜೇಂದ್ರ ಪ್ರಸಾದ, ಶಿಕ್ಷಕರಾದ ಸಿದ್ದಿಕ, ಸುಷ್ಮಾ, ಅಪರಂಜಿ, ರೋಹಿಣಿ, ಕವಿತಾ, ಪೆÇೀಷಕರು ಹಾಗೂ ಗಣ್ಯರು ಉಪಸ್ಥಿತರಿದ್ದರು.






























