Home ಜಿಲ್ಲೆ ಕಲಬುರಗಿ ಶ್ರೀದಾಮೋದರ ರಘೋಜಿ ವಿಜ್ಞಾನ ಮತ್ತು ವಾಣಿಜ್ಯ ಪಿಯು ಕಾಲೇಜುದ್ವಿತೀಯ ಪಿಯುಸಿ ಫಲಿತಾಂಶ: ವಾಣಿಜ್ಯ ವಿಭಾಗದಲ್ಲಿ ರಾಜ್ಯಕ್ಕೆ...

ಶ್ರೀದಾಮೋದರ ರಘೋಜಿ ವಿಜ್ಞಾನ ಮತ್ತು ವಾಣಿಜ್ಯ ಪಿಯು ಕಾಲೇಜುದ್ವಿತೀಯ ಪಿಯುಸಿ ಫಲಿತಾಂಶ: ವಾಣಿಜ್ಯ ವಿಭಾಗದಲ್ಲಿ ರಾಜ್ಯಕ್ಕೆ 4ನೇ ರ್ಯಾಂಕ್

ಕಲಬುರಗಿ,ಏ.10: ನಗರದ ಹುಮನಾಬಾದ ರಿಂಗ ರಸ್ತೆ, ಟಿ.ವಿ ಸ್ಟೇಷನ್ ಹಿಂದುಗಡೆ ಇರುವ ಶ್ರೀ ದಾಮೋದರ ರಘೋಜಿ ವಿಜ್ಞಾನ ಮತ್ತು ವಾಣಿಜ್ಯ ಪದವಿ ಪೂರ್ವ ಕಾಲೇಜಿಗೆ ಪ್ರಸ್ತುತ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಅತ್ಯುತ್ತಮ ಫಲಿತಾಂಶ ಬಂದಿದೆ ಎಂದು ಪ್ರಾಂಶುಪಾಲ ಡಾ. ಶಿವಕುಮಾರ ಸಾಕಮ್ಮನವರ ಅವರು ಹೇಳಿದರು
ಪತ್ರಿಕಾಭವನದಲ್ಲಿ ಹಮ್ಮಿಕೊಂಡ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿ, ಕಾಲೇಜಿನ ವಾಣಿಜ್ಯ ವಿಭಾಗದ ವಿದ್ಯಾರ್ಥಿನಿ ಪ್ರೇಮಾ ರಾಜಕುಮಾರ ರಟಕಲ್ ಅವರು 597 ಅಂಕ ಪಡೆದು ಕಲಬುರಗಿ ಜಿಲ್ಲೆಯ ಇತಿಹಾಸದಲ್ಲಿಯೇ ಅತ್ಯಧಿಕ ಅಂಕ ಪಡೆದ ಮೊದಲ ವಿದ್ಯಾರ್ಥಿ ಎನ್ನುವ ಇತಿಹಾಸವನ್ನು ನಿರ್ಮಿಸಿದ್ದಾರೆ. ಅಲ್ಲದೇ ರಾಜ್ಯಕ್ಕೆ 4ನೇ ಹಾಗೂ ಜಿಲ್ಲೆಯಲ್ಲಿ 1ನೇ ರ್ಯಾಂಕ್ ಪಡೆದು ರಾಜ್ಯಮಟ್ಟದ ರ್ಯಾಂಕ್ ಸಾಲಿನಲ್ಲಿರುವುದು ಸಂತಸದ ವಿಷಯವಾಗಿದೆ.
ಅರ್ಥಶಾಸ್ತ್ರದಲ್ಲಿ 15, ವ್ಯವಹಾರ ಅಧ್ಯಯನದಲ್ಲಿ 7, ಕನ್ನಡದಲ್ಲಿ 7, ಲೆಕ್ಕಶಾಸ್ತ್ರದಲ್ಲಿ 5, ಸಂಖ್ಯಾಶಾಸ್ತ್ರದಲ್ಲಿ 3, ಗಣಿತದಲ್ಲಿ 1 ವಿದ್ಯಾರ್ಥಿಗಳು 100 ಕ್ಕೆ 100 ಅಂಕ ಪಡೆದಿದ್ದಾರೆ.
ಕಾಲೇಜಿನ 59 ವಿದ್ಯಾರ್ಥಿಗಳು ಅಗ್ರಶ್ರೇಣಿ , 225 ವಿದ್ಯಾರ್ಥಿಗಳು ಪ್ರಥಮ ದರ್ಜೆಯಲ್ಲಿ, 43 ದ್ವಿತೀಯ ದರ್ಜೆಯಲ್ಲಿ ಪಾಸಾಗಿದ್ದಾರೆ. ಕಲ್ಯಾಣ ಕರ್ನಾಟಕ ಪ್ರದೇಶದಲ್ಲಿ ಸ್ಥಾಪನೆಯಾದ ಈ ಸಂಸ್ಥೆಯು ಮಕ್ಕಳ ಸರ್ವತೋಮುಖ ಬೆಳವಣಿಗೆಗಾಗಿ ಕಾಲೇಜಿನ ಬೋಧಕ ಮತ್ತು ಬೋಧಕೇತರ ಸಿಬ್ಬಂದಿಗಳು ಹಾಗು ಆಡಳಿತ ಮಂಡಳಿಯ ಸಂಪೂರ್ಣ ಸಹಕಾರದೊಂದಿಗೆ ಶ್ರಮಿಸುತ್ತಿರುವುದರ ಪ್ರತೀಕವೇ ಈ ಫಲಿತಾಂಶವಾಗಿದೆ ಎಂದರು.
ಸುದ್ದಿಗೋಷ್ಠಿಯಲ್ಲಿ ಸಂಸ್ಥೆಯ ಅಧ್ಯಕ್ಷ ರಾಮಚಂದ್ರ ಡಿ ರಘೋಜಿ, ಕಾರ್ಯದರ್ಶಿ ಮೀರಾ ಆರ್ ರಥೋಜಿ ಮತ್ತು ಸಂಸ್ಥೆಯ ಟ್ರಸ್ಟಿಗಳಾದ ನಂದಿನಿ ಆರ್ ರಘೋಜಿ, ಜಿ. ರವಿತೇಜ, ಮನೋಶ್ರೀ ಆರ್ ರಘೋಜಿ, ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.


ನಮ್ಮ ಕಾಲೇಜಿನಲ್ಲಿ ಪ್ರತಿದಿನ ಸಂಜೆ 5 ರಿಂದ 8 ಗಂಟೆಯವರೆಗೆ ವಿದ್ಯಾರ್ಥಿಗಳಿಗೆ ವಿಶೇಷ ತರಬೇತಿ ನೀಡಲಾಗುವದು .ಎಸ್‍ಎಸ್‍ಎಲ್‍ಸಿಯಲ್ಲಿ ಶೇ 95 ಅಂಕ ಪಡೆದ ವಿದ್ಯಾರ್ಥಿಗಳಿಗೆ ಉಚಿತ ಶಿಕ್ಷಣ ನೀಡಲಾಗುವದು.ಈ ಶೈಕ್ಷಣಿಕ ಸಾಲಿನಲ್ಲಿ ನಮ್ಮ ಸಂಸ್ಥೆಯ 60 ಮತ್ತು ಬೇರೆ ಶಾಲೆಗಳ 60 ಹೀಗೆ ಒಟ್ಟು 120 ವಿದ್ಯಾರ್ಥಿಗಳ ಶಿಕ್ಷಣಕ್ಕೆ ನೆರವಾಗಿದ್ದೇವೆ.
-ರಾಮಚಂದ್ರ ಡಿ. ರಘೋಜಿ
ಅಧ್ಯಕ್ಷರು.
ಶ್ರೀದಾಮೋದರ ರಘೋಜಿ ವಿಜ್ಞಾನ ಮತ್ತು ವಾಣಿಜ್ಯ ಪಿಯು ಕಾಲೇಜು
.