
ಕಲಬುರಗಿ,ಸೆ,9: ಹೆಚ್.ಕೆ.ಇ ಸಂಸ್ಥೆಯ ಮೈದಾನದಲ್ಲಿ ಸೆ 7 ರಂದು ಸಾರ್ವಜನಿಕ ಶಿಕ್ಷಣ ಇಲಾಖೆಯವತಿಯಿಂದ ಆಯೋಜಿಸಿದ ಜಿಲ್ಲಾ ಮಟ್ಟದ ಹ್ಯಾಂಡ್ ಬಾಲ್ ಸ್ಪರ್ಧೆಯಲ್ಲಿ ನಗರದ ಎಸ್.ಆರ್.ಎನ್. ಮೆಹತಾ ಶಾಲೆಯ ವಿದ್ಯಾರ್ಥಿಗಳು ಭಾಗವಹಿಸಿ ವಿಭಾಗ ಮಟ್ಟದ ಕೀಡಾಕೂಟಕ್ಕೆ ಆಯ್ಕೆಯಾಗಿದ್ದಾರೆ. ವಿಭಾಗ ಮಟ್ಟದ ಕ್ರೀಡಾ ಕೂಟವು ವಿಜಯನಗರದ ಜಿಲ್ಲೆಯಲ್ಲಿ ನಡೆಯಲಿದೆ.
14 ಮತ್ತು 17 ವರ್ಷದ ವಯೋಮಿತಿಯ ಬಾಲಕ ಮತ್ತು ಬಾಲಕಿಯರ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನವನ್ನು ಪಡೆದಿದ್ದಾರೆ.
ವಿದ್ಯಾರ್ಥಿಗಳ ಈ ಸಾಧನೆಗೆ ಶಾಲೆಯ ಆಡಳಿತ ಮಂಡಳಿಯ ಟ್ರಸ್ಟಿಗಳಾದ ಚಕೋರ ಮೆಹತಾ, ಪ್ರಾಚಾರ್ಯರಾದ ಪ್ರೀತಿ ಮೆಹತಾ, ದೈಹಿಕ ಶಿಕ್ಷಣ ವಿಭಾಗದ ಮುಖ್ಯಸ್ಥರಾದ ಬಸವರಾಜ ತಳಕೇರಿ, ಹ್ಯಾಂಡಬಾಲ್ ತರಬೇತುದಾರರಾದ ಮಯೂರ ಹಾಗೂ ಶಿಕ್ಷಕ ವರ್ಗದವರು ಹರ್ಷ ವ್ಯಕ್ತಪಡಿಸಿದ್ದಾರೆ.






























