Home ಜಿಲ್ಲೆ ಕಾಂಗ್ರೆಸ್ ಬಲವರ್ಧನೆಗೆ ‘ಸೃಜನ್ ಅಭಿಯಾನ’: ತಳಮಟ್ಟದ ಕಾರ್ಯಕರ್ತರ ಅಭಿಪ್ರಾಯ ಪಡೆದು ಬ್ಲಾಕ್ ಅಧ್ಯಕ್ಷರ ನೇಮಕ

ಕಾಂಗ್ರೆಸ್ ಬಲವರ್ಧನೆಗೆ ‘ಸೃಜನ್ ಅಭಿಯಾನ’: ತಳಮಟ್ಟದ ಕಾರ್ಯಕರ್ತರ ಅಭಿಪ್ರಾಯ ಪಡೆದು ಬ್ಲಾಕ್ ಅಧ್ಯಕ್ಷರ ನೇಮಕ

ಬೀದರ್: ಪಕ್ಷದ ಸಂಘಟನೆ ಬಲವರ್ಧನೆ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರ ಪುನರ್‌ನೇಮಕ ಹಾಗೂ ತಳಮಟ್ಟದ ಕಾರ್ಯಕರ್ತರ ಅಭಿಪ್ರಾಯ ಸಂಗ್ರಹಿಸುವ ಉದ್ದೇಶದಿಂದ ಬೀದರ್ ದಕ್ಷಿಣ ವಿಧಾನಸಭಾ ಕ್ಷೇತ್ರದ ಬಗದಲ್ ಗ್ರಾಮದ ಸ್ಟಾರ್ ಫಂಕ್ಷನ್ ಹಾಲ್‌ನಲ್ಲಿ ಶನಿವಾರ ಕಾಂಗ್ರೆಸ್ ಪಕ್ಷದ ‘ಸೃಜನ್ ಅಭಿಯಾನ’ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.
ಸಸಿಗೆ ನೀರು ಎರೆಯುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.
ಈ ಸಂದರ್ಭದಲ್ಲಿ ಮಾತನಾಡಿದ ಕೆಪಿಸಿಸಿ ವೀಕ್ಷಕರಾದ ಹಸನ್ ಸಾಬ್ ಧೊತಿಯಾಳ ಹಾಗೂ ಜ್ಯೋತಿ ಮುಗೋಳ, ಕಾಂಗ್ರೆಸ್ ಸಂಘಟನೆಯನ್ನು ತಳಮಟ್ಟದಿಂದ ಬಲಪಡಿಸುವ ಉದ್ದೇಶದಿಂದ ಸೃಜನ್ ಅಭಿಯಾನ ಹಮ್ಮಿಕೊಳ್ಳಲಾಗಿದೆ. ಪಕ್ಷದ ಕಾರ್ಯಕರ್ತರೊಂದಿಗೆ ಸಮಾಲೋಚನೆ ನಡೆಸಿ, ಅವರ ಅಭಿಪ್ರಾಯ ಹಾಗೂ ಸಲಹೆಗಳನ್ನು ಪಡೆದು ಸಂಘಟನಾ ಸಾಮರ್ಥ್ಯದ ಆಧಾರದ ಮೇಲೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರನ್ನು ನೇಮಕ ಮಾಡಲಾಗುವುದು ಎಂದು ತಿಳಿಸಿದರು.
ಪಕ್ಷಕ್ಕಾಗಿ ನಿಷ್ಠೆಯಿಂದ ದುಡಿಯುವ ಕಾರ್ಯಕರ್ತರಿಗೆ ಆದ್ಯತೆ ನೀಡುವ ಮೂಲಕ ಸಂಘಟನೆಯನ್ನು ಮತ್ತಷ್ಟು ಸದೃಢಗೊಳಿಸಲಾಗುವುದು ಎಂದರು.
ಮುAಬರುವ ಜಿಲ್ಲಾ ಪಂಚಾಯಿತಿ ಹಾಗೂ ತಾಲ್ಲೂಕು ಪಂಚಾಯಿತಿ ಚುನಾವಣೆಗಳಲ್ಲಿ ಪಕ್ಷಕ್ಕಾಗಿ ಪ್ರಾಮಾಣಿಕವಾಗಿ ದುಡಿದ ಕಾರ್ಯಕರ್ತರಿಗೆ ಮಾತ್ರ ಅವಕಾಶ ಕಲ್ಪಿಸಲಾಗುವುದು. ಎಲ್ಲರೂ ಒಗ್ಗಟ್ಟಿನಿಂದ ಶ್ರಮಿಸಿದರೆ ಬೀದರ್ ದಕ್ಷಿಣ ಕ್ಷೇತ್ರದ ಎಲ್ಲ ಜಿಲ್ಲಾ ಪಂಚಾಯಿತಿ ಹಾಗೂ ತಾಲ್ಲೂಕು ಪಂಚಾಯಿತಿ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಗೆಲುವು ಸಾಧಿಸಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಅಬ್ದುಲ್ ಮನ್ನಾನ್ ಸೇಠ್, ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಚಂದ್ರಶೇಖರ ಚನಶಟ್ಟಿ, ವೀರಶೈವ ನಿಗಮದ ನಿರ್ದೇಶಕ ರಾಜಕುಮಾರ ತರಿ, ಮುಖಂಡರಾದ ಫಿರೋಜ್ ಖಾನ್, ತನ್ವೀರ್ ಅಹ್ಮದ್ ಖಾನ್, ಮಸ್ತಾನ್ ನೂರೊದ್ದೀನ್, ಸಚಿನ್ ಮಲ್ಕಾಪೂರ, ಜಾರ್ಜ್ ಫರ್ನಾಂಡಿಸ್, ಮೊಯೋಜೊದ್ದೀನ್, ಅಮೃತರಾವ ಪಾಟೀಲ, ಬಶಿರೊದ್ದೀನ್ ಸೌದಾಗರ್, ಖಯಾಮೊದ್ದೀನ್, ಶಿವರಾಜ ಹಾವಶಟ್ಟಿ, ಸೊಹೇಲ್, ಬಸವರಾಜ ರಾಜಗೀರಾ, ಕಾರ್ತಿಕ ದೇಸಾಯಿ, ಗೌತಮ್ ಬಗದಲ್, ಜಯಪ್ರಕಾಶ ಸೇರಿದಂತೆ ಪಕ್ಷದ ಹಲವು ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.