Home ಜಿಲ್ಲೆ ಮಾ.18 ರಿಂದ ಏ.02 ರವರೆಗೆ ಎಸ್‍ಎಸ್‍ಎಲ್‍ಸಿ ಪರೀಕ್ಷೆ-01:ಪಾರದರ್ಶಕ ಪರೀಕ್ಷೆ ನಡೆಸಲು ಅಗತ್ಯ ಸಿದ್ಧತೆ ಮಾಡಿಕೊಳ್ಳಿ: ಜಿಲ್ಲಾಧಿಕಾರಿ...

ಮಾ.18 ರಿಂದ ಏ.02 ರವರೆಗೆ ಎಸ್‍ಎಸ್‍ಎಲ್‍ಸಿ ಪರೀಕ್ಷೆ-01:ಪಾರದರ್ಶಕ ಪರೀಕ್ಷೆ ನಡೆಸಲು ಅಗತ್ಯ ಸಿದ್ಧತೆ ಮಾಡಿಕೊಳ್ಳಿ: ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ

ಬೀದರ, ಮಾ.13: ಜಿಲ್ಲೆಯಾದ್ಯಾಂತ ಮಾರ್ಚ್.18 ರಿಂದ ಏಪ್ರಿಲ್.02 ರವರೆಗೆ ನಡೆಯುವ ಎಸ್.ಎಸ್.ಎಲ್.ಸಿ.ಪರೀಕ್ಷೆ-01 ನ್ನು ಪಾರದರ್ಶಕವಾಗಿ ಹಾಗೂ ಅತ್ಯಂತ ವ್ಯವಸ್ಥಿತವಾಗಿ ನಡೆಸಲು ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳುವಂತೆ ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಅವರು ಅಧಿಕಾರಿಗಳಿಗೆ ಸೂಚಿಸಿದರು.
ಅವರು ಗುರುವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಎಸ್‍ಎಸ್‍ಎಲ್‍ಸಿ ಪರೀಕ್ಷೆ-01 ರ ಪೂರ್ವ ಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಮಾ.18 ರಿಂದ ಏಪ್ರಿಲ್.2 ರವರೆಗೆ ಜಿಲ್ಲೆಯಲ್ಲಿ 577 ಪ್ರೌಢ ಶಾಲೆಗಳಿಂದ ಒಟ್ಟು 94 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆಗಳು ಜರುಗಲಿದ್ದು, ಔರಾದ (13), ಬಸವಕಲ್ಯಾಣ (17), ಭಾಲ್ಕಿ (16), ಬೀದರ (28), ಹುಮನಾಬಾದ (20) ಕೇಂದ್ರಗಳಿಂದ ಸುಮಾರು 28439 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಇದರಲ್ಲಿ 23529 ರೆಗ್ಯುಲರ, 1439 ಪ್ರೈವೆಟ್ ಫ್ರೆಶರ್ಸ್, 3471 ರಿಪಿಟರ್ ವಿದ್ಯಾರ್ಥಿಗಳು ಪರೀಕ್ಷೆ ಎದುರಿಸಲಿದ್ದು, ಪರೀಕ್ಷೆಯಲ್ಲಿ ಯಾವುದೇ ಅಕ್ರಮಗಳು ನಡೆಯದಂತೆ ಅಗತ್ಯ ಕ್ರಮ ತೆಗೆದುಕೊಳ್ಳಬೇಕೆಂದು ಸೂಚನೆ ನೀಡಿದರು.
ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಸಮರ್ಪಕವಾಗಿ ಶುದ್ದ ಕುಡಿಯುವ ನೀರಿನ ವ್ಯವಸ್ಥೆ, ಶೌಚಾಲಯದ ವ್ಯವಸ್ಥೆ ಸೇರಿದಂತೆ ಅಗತ್ಯ ಮೂಲಭೂತ ಸೌಲಭ್ಯಗಳು ಒದಗಿಸಬೇಕು. 94 ಪೀಕ್ಷಾ ಕೇಂದ್ರಗಳಿಗೆ ಪ್ರಶ್ನೆ ಪತ್ರಿಕೆಗಳನ್ನು ವಿತರಿಸಲು ಒಟ್ಟು 41 ಮಾರ್ಗಗಳನ್ನು ರಚಿಸಲಾಗಿದೆ. ಪರೀಕ್ಷೆಗಳನ್ನು ಸುಸೂತ್ರವಾಗಿ ನಡೆಸಲು 1364 ಪರೀಕ್ಷಾ ಕೋಠಡಿಗಳಿಗೆ 1364 ಸಿಸಿ ಕ್ಯಾಮರಗಳನ್ನು ಅಳವಡಿಸಲಾಗಿದೆ. ಜಿಲ್ಲಾ ಮಟ್ಟದಲ್ಲಿ ವೆಬ್‍ಕಾಸ್ಟಿಂಗ್ ಮಾಡಲು ಜಿಲ್ಲಾ ಪಂಚಾಯತದಲ್ಲಿ ವ್ಯವಸ್ಥೆ ಮಾಡಿಕೊಳ್ಳಲಾಗಿದೆ. ಎಲ್ಲಾ ಪರೀಕ್ಷಾ ಕೇಂದ್ರಗಳಿಗೆ ಪೆÇಲೀಸ್ ಬಂದೋಬಸ್ತ ವ್ಯವಸ್ಥೆ ಒದಗಿಸಲಾಗಿದೆ ಎಂದರು.
ಪಾರದರ್ಶಕವಾಗಿ ಪರೀಕ್ಷೆ ನಡೆಸಲು ಮುಖ್ಯ ಅಧೀಕ್ಷಕರು ಕೊಠಡಿ ಮೇಲ್ವಿಚಾರಕರೊಂದಿಗೆ ಮುಂಚಿತವಾಗಿ ಸಭೆ ನಡೆಸಿ ನಿಯಮಗಳಂತೆ ಪರೀಕ್ಷೆ ನಡೆಸಲು ಸೂಚಿಸಬೇಕು. ಸುಸೂತ್ರ ಪರೀಕ್ಷೆಗೆ ಪೆÇಲೀಸ್ ಇಲಾಖೆ, ಖಜಾಣೆ ಇಲಾಖೆ ಸಂಬಂಧಿಸಿದಂತೆ ಇಲಾಖೆಗಳ ಸಹಕಾರಕ್ಕೆ ಸೂಚಿಸಲಾಗಿದೆ. ಪರೀಕ್ಷಾ ಕೇಂದ್ರದ ಹೊರಗೆ ಜನಸಂದಣಿ ಮೇಲೆ ನಿಗಾ ಇಡಬೇಕು. ಯಾವುದೇ ರೀತಿಯ ದೂರುಗಳಿಗೆ ಪೆÇಲೀಸ್ ಕಂಟ್ರೋಲ್ ರೂಮಗೆ ತಿಳಿಸಬೇಕು. ಅಧಿಕಾರಿಗಳು ಜವಾಬ್ದಾರಿಯುತವಾಗಿ ಸಮನ್ವಯದೊಂದಿಗೆ ಕಾರ್ಯನಿರ್ವಹಿಸಲು ಅಧಿಕಾರಿಗಳಿಗೆ ಸೂಚಿಸಿದರು.
ಪರೀಕ್ಷಾ ಕೇಂದ್ರಗಳ ಸುತ್ತಲು 200 ಮೀಟರ ಪ್ರದೇಶ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿ ಇರಲಿದೆ ಎಂದು ತಿಳಿಸಿದರು.
ಇದೇ ಸಂದರ್ಭದಲ್ಲಿ ಜಿಲ್ಲೆಯಾದ್ಯಾಂತ ಮಾರ್ಚ್.22 ರಂದು 13 ಆದರ್ಶ ವಿದ್ಯಾಲಯಗಳಿಗೆ 6ನೇ ತರಗತಿ ಪ್ರವೇಶ ಪರೀಕ್ಷೆ ನಡೆಯುತ್ತಿದ್ದು, ಒಟ್ಟು 3348 ವಿದ್ಯಾರ್ಥಿಗಳು ಪ್ರವೇಶ ಪರೀಕ್ಷೆ ಬರೆಯುತ್ತಿದ್ದಾರೆ. ಇದಕ್ಕೂ ಅಗತ್ಯ ಸಿದ್ಧತೆಗಳನ್ನು ಮಾಡಿಕೊಂಡು ಪಾರದರ್ಶಕವಾಗಿ ನಡೆಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.
ಈ ಸಭೆಯಲ್ಲಿ ಅಪರ ಜಿಲ್ಲಾಧಿಕಾರಿಗಳಾದ ಶಿವಾನಂದ ಕರಾಳೆ, ಹೆಚ್ಚುವರಿ ಪೆÇಲೀಸ್ ವರಿಷ್ಠಾಧಿಕಾರಿಗಳಾದ ಚಂದ್ರಕಾಂತ ಪೂಜಾರ, ಬೀದರ ಜಿಲ್ಲಾ ಖಜಾನಾಧಿಕಾರಿಗಳಾದ ರವಿ ಹಕಾರಿ, ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕರಾದ ಸುರೇಶ ಎಚ್.ಜಿ., ಡಯಟ್ ಪ್ರಾಂಶುಪಾಲರಾದ ಮಹಮ್ಮದ ಗುಲಶನ್, ಎಲ್ಲಾ ತಾಲ್ಲೂಕಿನ ಕ್ಷೇತ್ರ ಶಿಕ್ಷಣಾಧಿಕಾರಿಗಳು, 94 ಪರೀಕ್ಷಾ ಕೇಂದ್ರಗಳ ಮೇಲ್ವಿಚಾರಕರು ಸೇರಿದಂತೆ ಮಾರ್ಗಾಧಿಕಾರಿಗಳು ಇನ್ನಿತರರು ಉಪಸ್ಥಿತರಿದ್ದರು.