Home ಜಿಲ್ಲೆ ಕಲಬುರಗಿ ಮಾ. 18 ರಿಂದ ಎಸ್.ಎಸ್.ಎಲ್.ಸಿ. ಪರೀಕ್ಷೆ-1:ಕಟ್ಟೆಚ್ಚರ ವಹಿಸಿ, ಅಕ್ರಮಕ್ಕೆ ಅವಕಾಶ ಬೇಡ:ರಾಯಪ್ಪ ಹುಣಸಗಿ

ಮಾ. 18 ರಿಂದ ಎಸ್.ಎಸ್.ಎಲ್.ಸಿ. ಪರೀಕ್ಷೆ-1:ಕಟ್ಟೆಚ್ಚರ ವಹಿಸಿ, ಅಕ್ರಮಕ್ಕೆ ಅವಕಾಶ ಬೇಡ:ರಾಯಪ್ಪ ಹುಣಸಗಿ

ಕಲಬುರಗಿ,ಮಾ.12:ಪ್ರಸಕ್ತ 2025-26ನೇ ಶೈಕ್ಷಣಿಕ ಎಸ್.ಎಸ್.ಎಲ್.ಸಿ. ಪರೀಕ್ಷೆ-1 ಇದೇ ಮಾರ್ಚ್ 18 ರಿಂದ ಏಪ್ರಿಲ್ 2ರ ವರೆಗೆ ಕಲಬುರಗಿ ಜಿಲ್ಲೆಯ 141 ಪರೀಕ್ಷಾ ಕೇಂದ್ರಗಳಲ್ಲಿ ಜರುಗಲಿದ್ದು, ಪರೀಕ್ಷೆ ಮೇಲೆ ತೀವ್ರ ಕಟ್ಟೆಚ್ಚರ ವಹಿಸಬೇಕು. ಪರೀಕ್ಷೆ ಸುಸೂತ್ರವಾಗಿ ಮತ್ತು ಯಾವುದೇ ರೀತಿಯ ನಕಲು ಮತ್ತು ಚಟುವಟಿಕೆಗಳಿಗೆ ಮಾಡಲು ಅವಕಾಶ ನೀಡಬಾರದು ಎಂದು ಅಧಿಕಾರಿಗಳಿಗೆ ಅಪರ ಜಿಲ್ಲಾಧಿಕಾರಿ ರಾಯಪ್ಪ ಹುಣಸಗಿ ಖಡಕ್ ಸೂಚನೆ ನೀಡಿದರು.

   ಮಂಗಳವಾರ ಇಲ್ಲಿನ ಡಿ.ಸಿ. ಕಚೇರಿ ಸಭಾಂಗಣದಲ್ಲಿ ಪರೀಕ್ಷಾ ಕೇಂದ್ರ ಮುಖ್ಯಸ್ಥರು, ಮಾರ್ಗಾಧಿಕಾರಿಗಳು, ವೀಕ್ಷಕರೊಂದಿಗೆ ಪೂರ್ವಸಿದ್ಧತಾ ಸಭೆ ನಡೆಸಿದ ಅವರು, ಜಿಲ್ಲೆಯಾದ್ಯಾಂತ  ಒಟ್ಟು 51,744 ವಿದ್ಯಾರ್ಥಿಗಳು ಎಸ್.ಎಸ್.ಎಲ್.ಸಿ. ಪರೀಕ್ಷೆ-1 ಬರೆಯಲಿದ್ದಾರೆ. ಎಲ್ಲಿಯೆ ನಕಲು ಪ್ರಕರಣ ವರದಿಯಾದಲ್ಲಿ ಸಂಬಂಧಪಟ್ಟ ಅಧಿಕಾರಿಗಳ ಮೇಲೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದರು.

   ಪರೀಕ್ಷೆ ಸುಗಮವಾಗಿ ನಡೆಯುವ ಸಂಬಂಧ 141 ಪರೀಕ್ಷಾ ಕೇಂದ್ರಕ್ಕೆ ತಲಾ ಒಬ್ಬರಂತೆ ಸ್ಥಳೀಯ ಜಾಗೃತ ಸದಸ್ಯರನ್ನು ನೇಮಿಸಲಾಗಿದೆ. ಪ್ರಶ್ನೆ ಪತ್ರಿಕೆ ಸರಬರಾಜಿಗೆ 53 ಜನ ಅಧಿಕಾರಿಗಳನ್ನು ಮಾರ್ಗಾಧಿಕಾರಿಯನ್ನಾಗಿ ನೇಮಿಸಿದೆ.

   ಪರೀಕ್ಷೆ ಹಿನ್ನೆಲೆಯಲ್ಲಿ ಕೇಂದ್ರದ 200 ಮೀಟರ್ ಸುತ್ತ ನಿμÉೀಧಾಜ್ಞೆ ಜಾರಿ ಮಾಡಲಾಗಿದೆ. ಝರಾಕ್ಸ್-ಪುಸ್ತಕ ಅಂಗಡಿ ಮುಚ್ಚುವಂತೆ ಆದೇಶಿಸಲಾಗಿದೆ. ಒಟ್ಟಾರೆಯಾಗಿ ಪರೀಕ್ಷೆಯು ಸುಸೂತ್ರವಾಗಿ ನಡೆಯುವಂತೆ ಎಲ್ಲಾ ಪರೀಕ್ಷೆಗೆ ಸಂಬಂದಿಸಿದ ಅಧಿಕಾರಿ-ಸಿಬ್ಬಂದಿಗಳು ಎಚ್ಚರಿಕೆಯಿಂದ ಕಾರ್ಯನಿರ್ವಹಿಸಬೇಕೆಂದರು.

    ಪರೀಕ್ಷೆ ನಡೆಯುವ ಮುನ್ನವೆ ಪರೀಕ್ಷಾ ಕೇಂದ್ರದಲ್ಲಿ ಅಗತ್ಯ ಮೂಲಸೌಕರ್ಯಗಳಾದ ವಿದ್ಯುತ್, ಕುಡಿಯುವ ನೀರು, ಶೌಚಾಲಯ, ಆಸನದ ವ್ಯವಸ್ಥೆ ಇರುವುದನ್ನು ಕೇಂದ್ರದ ಮುಖ್ಯಸ್ಥರು ಖಾತ್ರಿಪಡಿಸಿಕೊಳ್ಳಬೇಕು. ಯಾವುದೇ ಕಾರಣಕ್ಕೂ ಮಕ್ಕಳು ನೆಲದ ಮೇಲೆ ಕುಳಿತು ಪರೀಕ್ಷೆ ಬರೆಯಬಾರದು. ಪ್ರತಿ ಪರೀಕ್ಷಾ ಕೇಂದ್ರದ ಪ್ರವೇಶ ದ್ವಾರದಲ್ಲಿ ತಪಾಸಣೆಗೆ ಪೆÇಲೀಸ್ ಸಿಬ್ಬಂದಿಯನ್ನು ನಿಯೋಜಿಸಬೇಕೆಂದು ಸೂಚಿಸಲಾಯಿತು.

   ಸಿ.ಸಿ.ಟಿ.ವಿ., ವೆಬ್‍ಕಾಸ್ಟಿಂಗ್ ವ್ಯವಸ್ಥೆ: ಪರೀಕ್ಷೆ ಸುಸೂತ್ರವಾಗಿ ನಡೆಯುವ ನಿಟ್ಟಿನಲ್ಲಿ ಪರೀಕ್ಷಾ ಕೇಂದ್ರದಲ್ಲಿ ಮೊಬೈಲ್ ಸೇರಿದಂತೆ ಎಲ್ಲಾ ರೀತಿಯ ಎಲೆಕ್ಟ್ರಾನಿಕ್ ಸಾಧನಗಳ ಬಳಕೆಯನ್ನು ಸಂಪೂರ್ಣವಾಗಿ ನಿμÉೀಧಿಸಲಾಗಿದೆ. ಪ್ರತಿ ಕೇಂದ್ರವು ಸಿ.ಸಿ.ಟಿ.ವಿ ಕಣ್ಗಾವಲಿನಲ್ಲಿ ಪರೀಕ್ಷೆ ನಡೆಯಲಿದ್ದು, ವಿಶೇಷವಾಗಿ ಜಿಲ್ಲಾ ಕೇಂದ್ರದಿಂದ ವೆಬ್‍ಕಾಸ್ಟಿಂಗ್ ಮೂಲಕ ಪರೀಕ್ಷೆ ಮೇಲ್ವಿಚಾರಣೆ ಮಾಡಲಾಗುತ್ತಿದೆ. ಇದಕ್ಕಾಗಿ 25 ತಂಡಗಳನ್ನು ರಚಿಸಿ ಪರೀಕ್ಷಾ ಕೇಂದ್ರಗಳನ್ನು ಹಂಚಿಕೆ ಮಾಡಲಾಗಿದೆ ಎಂದು ಅಪರ ಜಿಲ್ಲಾಧಿಕಾರಿಗಳು ತಿಳಿಸಿದರು.

  ಸಭೆಯಲ್ಲಿ ಹೆಚ್ಚುವರಿ ಎಸ್.ಪಿ.ಮಹೇಶ ಮೇಘಣ್ಣನವರ್, ಡಿ.ಸಿ.ಪಿ ಪ್ರವೀಣ ಎಚ್. ನಾಯಕ್, ಡಿ.ಡಿ.ಪಿ.ಐ. ಶಂಕ್ರಮ್ಮ ಡವಳಗಿ ಸೇರಿದಂತೆ ಇನ್ನಿತರ ಅಧಿಕಾರಿಗಳು, ಪರೀಕ್ಷಾ ಕೇಂದ್ರದ ಮುಖ್ಯಸ್ಥರು ಇದ್ದರು.