
ಕೋಲಾರ,ಮೇ,೨೭- ಜಿಲ್ಲೆಯ ೨೦ ಕೇಂದ್ರಗಳಲ್ಲಿ ಎಸ್ಸೆಸ್ಸೆಲ್ಸಿ ಪ್ರಥಮ ಭಾಷೆ ಪರೀಕ್ಷೆ ಯಾವುದೇ ಗೊಂದಲಗಳಿಗೆ ಅವಕಾಶವಿಲ್ಲದಂತೆ ಅತ್ಯಂತ ಯಶಸ್ವಿಯಾಗಿ ನಡೆದಿದ್ದು, ಇಂದು ಒಟ್ಟು ೬೦೧ ಮಂದಿ ಗೈರಾಗಿದ್ದಾರೆ ಎಂದು ಡಿಡಿಪಿಐ ಕೃಷ್ಣಮೂರ್ತಿ ತಿಳಿಸಿದರು.
ಈ ಸಂಬಂಧ ಮಾಧ್ಯಮದವರಿಗೆ ಮಾಹಿತಿ ನೀಡಿದ ಅವರು, ಮೊದಲ ದಿನ ೬೦೧ ಮಂದಿ ಗೈರಾಗಿದ್ದು, ಜಿಲ್ಲೆಯಲ್ಲಿ ಯಾವುದೇ ಪರೀಕ್ಷಾ ಅವ್ಯವಹಾರ ನಡೆದಿಲ್ಲ, ಎಲ್ಲೂ ಗೊಂದಲಕ್ಕೆ ಅವಕಾಶ ನೀಡಿಲ್ಲ. ಪರೀಕ್ಷೆಗೆ ಹೆಸರು ನೊಂದಾಯಿಸಿದ್ದ ೪೮೫೪ ವಿದ್ಯಾರ್ಥಿಗಳ ಪೈಕಿ ೪೨೫೩ ಮಂದಿ ಹಾಜರಾಗಿದ್ದು, ೬೦೧ ಮಂದಿ ಮಂದಿ ಗೈರಾಗಿದ್ದರು ಎಂದರು.
ಬಂಗಾರಪೇಟೆ ತಾಲ್ಲೂಕಿನ ೪ ಕೇಂದ್ರಗಳಲ್ಲಿ ಪ್ರಥಮ ಭಾಷೆಗೆ ೮೪೫ ಮಂದಿ ನೊಂದಾಯಿಸಿದ್ದು, ೭೧೪ ಮಂದಿ ಹಾಜರಾಗಿ ೧೩೧ ಮಂದಿ ಗೈರಾಗಿದ್ದಾರೆ, ಕೆಜಿಎಫ್ ತಾಲ್ಲೂಕಿನ ೪ ಕೇಂದ್ರಗಳಲ್ಲಿ ೧೨೨೦ ಮಕ್ಕಳು ಹೆಸರು ನೊಂದಾಯಿಸಿದ್ದು, ೧೧೨೬ ಮಂದಿ ಹಾಜರಾಗಿ ೯೪ ಮಂದಿ ಗೈರು ಹಾಜರಾತಿ ಕಂಡು ಬಂದಿತು.
ಕೋಲಾರ ತಾಲ್ಲೂಕಿನ ೫ ಕೇಂದ್ರಗಳಲ್ಲಿ ೧೦೦೪ ಮಂದಿ ಹೆಸರು ನೊಂದಾಯಿಸಿದ್ದು, ೮೬೨ ಮಂದಿ ಹಾಜರಾಗಿ ೧೪೨ ಮಂದಿ ಗೈರಾಗಿದ್ದಾರೆ. ಮಾಲೂರು ತಾಲ್ಲೂಕಿನ ೨ ಕೇಂದ್ರಗಳಲ್ಲಿ ೭೩೮ ಮಂದಿ ಹೆಸರು ನೊಂದಾಯಿಸಿದ್ದು, ೬೩೩ ಮಂದಿ ಹಾಜರಾಗಿದ್ದು, ೧೦೫ ಮಂದಿ ಗೈರಾಗಿದ್ದಾರೆ.
ಮುಳಬಾಗಿಲು ತಾಲ್ಲೂಕಿನ ೩ ಕೇಂದ್ರಗಳಲ್ಲಿ ೭೩೬ ಮಂದಿ ನೊಂದಾಯಿಸಿದ್ದು, ೬೩೬ ಮಂದಿ ಹಾಜರಾಗಿದ್ದು, ೧೦೦ ಮಂದಿ ಗೈರಾಗಿದ್ದಾರೆ, ಶ್ರೀನಿವಾಸಪುರ ತಾಲ್ಲೂಕಿನ ೨ ಕೇಂದ್ರಗಳಲ್ಲಿ ೩೧೧ ಮಂದಿ ಹೆಸರು ನೊಂದಾಯಿಸಿದ್ದು, ೨೮೨ ಮಂದಿ ಹಾಜರಾಗಿದ್ದು, ೨೯ ಮಂದಿ ಗೈರುಹಾಜರಾಗಿದ್ದರು
ಮೊದಲ ದಿನದ ಪರೀಕ್ಷೆಯಲ್ಲಿ ಜಿಲ್ಲಾದ್ಯಂತ ಯಾವುದೇ ಕೇಂದ್ರದಲ್ಲಿ ಯಾವುದೇ ಅವ್ಯವಹಾರಗಳು ನಡೆದ ಬಗ್ಗೆ ವರದಿಯಾಗಿಲ್ಲ, ಪರೀಕ್ಷೆ ಸುಗಮವಾಗಿ ನಡೆಸುವಲ್ಲಿ ಜಿಲ್ಲಾಧಿಕಾರಿಗಳು,ಜಿಪಂ ಸಿಇಒ, ಎಸ್ಪಿ ಅವರ ಮಾರ್ಗದರ್ಶನದಲ್ಲಿ ಜಿಲ್ಲಾಡಳಿತ, ಶಿಕ್ಷಣ ಇಲಾಖೆ, ಶಿಕ್ಷಕರು,ಪೋಷಕರು, ವಿದ್ಯಾರ್ಥಿಗಳು ಸಹಕಾರ ನೀಡಿದ್ದಾರೆ ಎಂದರು.
ಬೆಳಗ್ಗೆ ೯-೩೦ರಿಂದಲೇ ಪರೀಕ್ಷಾ ಕೇಂದ್ರಗಳಿಗೆ ಪ್ರವೇಶ ನೀಡಲಾಗಿದ್ದು, ಕೋಲಾರ ನಗರದ ನೂತನ ಸರ್ಕಾರಿ ಪ್ರೌಢಶಾಲೆ ಕೇಂದ್ರದಲ್ಲಿ ಮುಖ್ಯ ಅಧೀಕ್ಷಕ ವೇಣುಗೋಪಾಲ್ ಮಕ್ಕಳನ್ನು ಸ್ವಾಗತಿಸಿದರು.
ಡಿಡಿಪಿಐ ಕೃಷ್ಣಮೂರ್ತಿ, ಪರೀಕ್ಷಾ ನೋಡೆಲ್ ಅಧಿಕಾರಿ ಸಗೀರಾ ಅಂಜುಂ, ಶಿಕ್ಷಣಾಧಿಕಾರಿ ವೀಣಾ, ಡಿವೈಪಿಸಿಗಳಾದ ಸಹಿದಾ ಫಾತಿಮಾ, ಕೋಲಾರ ತಾಲ್ಲೂಕು ಬಿಇಒ ಮಧುಮಾಲತಿ ಪಡುವಣೆ, ವಿವಿಧ ತಾಲ್ಲೂಕುಗಳ ಬಿಇಒಗಳಾದ ಕೃಷ್ಣಮೂರ್ತಿ, ರಾಮಚಂದ್ರಪ್ಪ, ಮುನಿಲಕ್ಷ್ಮಯ್ಯ, ವಿಷಯ ಪರಿವೀಕ್ಷಕರಾದ ಶಂಕರೇಗೌಡ, ಸಮೀವುಲ್ಲಾ, ತಾಂತ್ರಿಕ ಸಹಾಯಕ ಶರಣಪ್ಪ ಜಮಾದಾರ್ ಅಧಿಕಾರಿಗಳು ಜಿಲ್ಲಾದ್ಯಂತ ಪರೀಕ್ಷಾ ಕೇಂದ್ರಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.