
ನಕಲಿ ತಡೆಗೆ ಕಠಿಣ ಕ್ರಮ
ಬೆಂಗಳೂರು, ಮಾ. ೧೭- ವಿದ್ಯಾರ್ಥಿ ಜೀವನದ ಪ್ರಮುಖ ಘಟ್ಟವೆನಿಸಿರುವ ಎಸ್‌ಎಸ್‌ಎಲ್‌ಸಿ ಪರೀಕ್ಷೆ ನಾಳೆಯಿಂದ ಆರಂಭವಾಗಲಿದೆ. ನಾಳೆಯಿಂದ ಏಪ್ರಿಲ್ ೨ರವರೆಗೆ ಪರೀಕ್ಷೆ ನಡೆಯಲಿದೆ.
ಈ ಬಾರಿ ೯, ೨,೮೮೯ ವಿದ್ಯಾರ್ಥಿಗಳು ನೊಂದಣಿ ಮಾಡಿಕೊಂಡಿದ್ದು ಈ ಪೈಕಿ ೮, ೧೨,೮೫೫ ಮಂದಿ ಹೊಸದಾಗಿ ಪರೀಕ್ಷೆ ಬರೆಯುತ್ತಿದ್ದಾರೆ.
ರಾಜ್ಯದ ೧೫,೯೪೧ ಪರೀಕ್ಷೆ ಕೇಂದ್ರಗಳಲ್ಲಿ ಸ್ಥಾಪಿಸಲಾಗಿದ್ದು ಬೆಳಿಗ್ಗೆ ೧೦ ರಿಂದ ಮಧ್ಯಾಹ್ನ ೧.೧೫ರವರೆಗೆ ಪರೀಕ್ಷೆ ನಡೆಯಲಿದೆ. ಈಗಾಗಲೇ ಪರೀಕ್ಷಾ ಕೇಂದ್ರಗಳಲ್ಲಿ ಶಿಕ್ಷಕರು ಅಂತಿಮ ಹಂತದ ಸಿದ್ಧತೆಯಲ್ಲಿ ತೊಡಗಿದ್ದಾರೆ.
ಪರೀಕ್ಷೆಯಲ್ಲಿ ನಕಲು ತಡೆಗೆ ಕಠಿಣ ಕ್ರಮ ಕೈಗೊಳ್ಳಲಾಗಿದ್ದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿಯಂತ್ರಣ ಮಂಡಳಿ ಹದ್ದಿನ ಕಣ್ಣಿಟ್ಟಿದೆ.
ಪ್ರಶ್ನೆ ಪತ್ರಿಕೆಗಳ ಸೋರಿಕೆ ಪರೀಕ್ಷಾ ಕೇಂದ್ರ ಸುತ್ತ ಅಕ್ರಮ ನಡೆಯದಂತೆ ಬಿಗಿಭದ್ರತೆ ಕೈಗೊಳ್ಳಲಾಗಿದೆ. ಪರೀಕ್ಷಾ ಕೇಂದ್ರದ ಸುತ್ತ ೨೦೦ ಮೀಟರ್ ವ್ಯಾಪ್ತಿಯವರೆಗೆ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.
ಪರೀಕ್ಷಾ ಕೇಂದ್ರದ ೨೦೦ ಮೀಟರ್ ವ್ಯಾಪ್ತಿಯಲ್ಲಿ ಜೆರಾಕ್ಸ್ ಹಾಗೂ ಸೈಬರ್ ಅಂಗಡಿಗಳನ್ನು ಬಂದ್ ಮಾಡಲಾಗಿದೆ. ಸೂಕ್ಷ್ಮ ಪರೀಕ್ಷೆ ಕೇಂದ್ರಗಳಲ್ಲಿ ಸಿಸಿ ಕ್ಯಾಮೆರಾ ಅಳವಡಿಸಲಾಗಿದೆ. ಎಲ್ಲಾ ಪರೀಕ್ಷಾ ಕೇಂದ್ರಗಳಲ್ಲಿ ವೆಬ್‌ಕಾಸ್ಟಿಂಗ್ ಮೂಲಕ ಮೇಲ್ವಿಚರಣೆ ಮಾಡಲಾಗಿದೆ. ಮೊಬೈಲ್, ಎಲೆಕ್ಟ್ರಾನಿಕ್ ಉಪಕರಣಗಳು, ಕ್ಯಾಲ್ಕುಲೇಟರ್, ಪರ್ಸ್, ಬ್ಯಾಗ್‌ಗಳು, ಸ್ಮಾರ್ಟ್ ವಾಚ್ ನಿಷೇಧಿಸಲಾಗಿದೆ.
ಉಚಿತ ಬಸ್ ವ್ಯವಸ್ಥೆ
ಎಸ್ ಎಸ್ ಎಲ್ ಸಿ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಕೆಎಸ್‌ಆರ್ ಟಿಸಿ ಹಾಗೂ ಬಿಎಂಟಿಸಿ ಬಸ್ ಗಳಲ್ಲಿ ಉಚಿತ ಪ್ರಯಾಣಕ್ಕೆ ವ್ಯವಸ್ಥೆ ಮಾಡಲಾಗಿದೆ. ವಿದ್ಯಾರ್ಥಿಗಳು ಪ್ರವೇಶ ಪತ್ರ ತೋರಿಸಿ ಬಸ್ ನಲ್ಲಿ ಪ್ರಯಾಣಿಸಬಹುದಾಗಿದೆ.
ಪರೀಕ್ಷಾ ವೇಳಾಪಟ್ಟಿ
ಮಾರ್ಚ್ ೧೮, ೨೦೨೬ – ಪ್ರಥಮ ಭಾಷೆ: ಕನ್ನಡ, ತೆಲುಗು, ಹಿಂದಿ, ಮರಾಠಿ, ತಮಿಳು, ಉರ್ದು, ಇಂಗ್ಲಿಷ್, ಇಂಗ್ಲಿಷ್ (ಓಅಇಖಖಿ), ಸಂಸ್ಕೃತ
ಮಾರ್ಚ್ ೨೩, ೨೦೨೬ – ವಿಜ್ಞಾನ, ರಾಜ್ಯಶಾಸ್ತ್ರ, ಹಿಂದೂಸ್ತಾನಿ ಸಂಗೀತ, ಕರ್ನಾಟಕ ಸಂಗೀತ
ಮಾರ್ಚ್ ೨೫, ೨೦೨೬- ಎರಡನೇ ಭಾಷೆ: ಇಂಗ್ಲಿಷ್, ಕನ್ನಡ
ಮಾರ್ಚ್ ೨೮, ೨೦೨೬ – ಗಣಿತ, ಸಮಾಜಶಾಸ್ತ್ರ,
ಮಾರ್ಚ್ ೩೦, ೨೦೨೬ – ತೃತೀಯ ಭಾಷೆ: ಹಿಂದಿ, ಕನ್ನಡ, ಇಂಗ್ಲಿಷ್, ಪರ್ಷಿಯನ್, ಅರೇಬಿಕ್, ತುಳು, ಉರ್ದು, ಸಂಸ್ಕೃತ, ಕೊಂಕಣಿ, ಓSಕಿಈ ವಿಷಯಗಳು
ಏಪ್ರಿಲ್ ೨, ೨೦೨೬ – ಸಮಾಜ ವಿಜ್ಞಾನ






























