
ಬೆಂಗಳೂರು, ಹಿಂದಿ ಗ್ರೇಡ್ ಬೇಡ ಅಂಕ ನೀಡಿ ಎಂಬ ಹೈಕೋರ್ಟ್ ಆದೇಶ ನೀಡಿರುವ ಬೆನ್ನಲ್ಲೇ ನಾಳೆ ಎಸ್ ಎಸ್ ಎಲ್ ಸಿ ಫಲಿತಾಂಶ ಪ್ರಕಟವಾಗಲಿದೆ.
ನಾಳೆ 12 ಗಂಟೆಗೆ ಫಲಿತಾಂಶ ಪ್ರಕಟವಾಗಲಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ.
ಮುಖ್ಯಮಂತ್ತಿ ಸಿದ್ದರಾಮಯ್ಯ ಅವರೊಂದಿಗೆ ಚರ್ಚೆ ನಡೆಸಿದ ಬಳಿಕ ಫಲಿತಾಂಶ ಪ್ರಕಟಿಸಲು ನಿರ್ಧರಿಸಲಾಗಿದೆ ಎಂದರು.
ನ್ಯಾಯಾಲಯದ ಆದೇಶ ಪಾಲಿಸಿ ಫಲಿತಾಂಶ ಪ್ರಕಟಿಸುತ್ತೇವೆ. ಫಲಿತಾಂಶ ಪ್ರಕಟಿಸುತ್ತಿರುವ ಬಗ್ಗೆ ಸಿಎಂ ಗಮನಕ್ಕೆ ತರಲಾಗಿದ್ದು, ಸಿಎಂ ಜೊತೆ ಸಭೆಯಲ್ಲಿ ಅಡ್ವೊಕೇಟ್ ಜನರಲ್ ಹಾಜರಿದ್ದರು. ಈ ವರ್ಷ ಕೋರ್ಟ್ ಆದೇಶ ಪಾಲಿಸುವ ಬಗ್ಗೆ ನಿರ್ಧರಿಸಲಾಗಿದೆ. ನಾಳೆ ಫಲಿತಾಂಶ ಪ್ರಕಟಿಸುವಾಗ ಎಲ್ಲಾ ವಿಚಾರಗಳನ್ನು ಹೇಳುತ್ತೇವೆ. ಗ್ರೇಸ್ ಮಾರ್ಕ್ಸ್ ಬಗ್ಗೆ ವಿವರ ನೀಡುವುದಾಗಿ ತಿಳಿಸಿದರು.
























