ಕಾಲ್ತುಳಿತ ಪ್ರಕರಣ: ಮೃತರ ಕುಟುಂಬಕ್ಕೆ ಬಿಜೆಪಿ ಶಾಸಕರ ಒಂದು ತಿಂಗಳ ವೇತನ : ಡಾ.ಬೆಲ್ದಾಳೆ

ಬೀದರ್: ಜೂ.11: ಇತ್ತಿಚೀಗೆ ಬೆಂಗಳೂರು ಚಿನ್ನಾಸ್ವಾಮಿ ಕ್ರೀಡಾಂಗಣದಲ್ಲಿ ಆ.ಸಿ.ಬಿ ತಂಡದ ವಿಜಯೋತ್ಸವ ಸಂದರ್ಭದಲ್ಲಿ ಕಾಲ್ತುಳಿತದಲ್ಲಿ ಮರಣ ಹೊಂದಿದ 11 ಜನರ ಕುಟುಂಬದವರಿಗೆ ಭಾರತೀಯ ಜನತಾ ಪಕ್ಷದ ಶಾಸಕರ ಒಂದು ತಿಂಗಳ ವೇತನ ಪರಿಹಾರ ರೂಪದಲ್ಲಿ ನೀಡಲಾಗುತ್ತಿದೆ ಎಂದು ಬಿಜೆಪಿ ರಾಜ್ಯ ಕಾರ್ಯದರ್ಶಿಗಳು ಹಾಗೂ ಬೀದರ್ ದಕ್ಷಿಣ ಶಾಸಕ ಡಾ.ಶೈಲೇಂದ್ರ ಬೆಲ್ದಾಳೆ ತಿಳಿಸಿದರು.
ಈಲ್ಲಾ ಪತ್ರಿಕಾ ಭವನದಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ಸಿಎಂ ಹಾಗೂ ಡಿಸಿಎಂಗಳ ಮಧ್ಯೆ ಸಮನ್ವಯದ ಕೊರತೆ ಇದ್ದು ಇವರಿಬ್ಬರಲ್ಲಿ ಗೃಹ ಸಚಿವ ಡಾ.ಪರಮೇಶ್ವರ ಅವರು ಸಿಕ್ಕಿ ಹಾಕಿಕೊಂಡಿದ್ದಾರೆ. ಈ ಪ್ರಕರಣದ ನೈತಿಕ ಹೊಣೆ ಹೊತ್ತು ಸಿಎಂ ರಾಜೀನಾಮೆ ನೀಡಬೇಕು ಎಂದ ಆಗ್ರಹಿಸಿದರು.
ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶೇಷ ಅಧಿವೇಷನ ಕರೆಯಬೇಕು. ಆರ್.ಸಿ.ಬಿ ತಂಡದ ಎಲ್ಲಾ ಕ್ರಿಕೇಟ್ ಆಟಗಾರರು ತಮಗೆ ಬಂದ ಹಣದಲ್ಲಿ ಮೃತರ ಕುಟುಂಬಕ್ಕೆ ಧನ ಸಹಾಯ ಮಾಡಬೇಕು ಎಂದು ಬೆಲ್ದಾಳೆ ಹೇಳಿದರು.