Home ಮುಖಪುಟ ಸುದ್ದಿ ಕಾಲ್ತುಳಿತ ಪ್ರಕರಣ: ೨ ಲಕ್ಷ ಪರಿಹಾರ

ಕಾಲ್ತುಳಿತ ಪ್ರಕರಣ: ೨ ಲಕ್ಷ ಪರಿಹಾರ

ಕೋಲ್ಕತ್ತಾ, ಅ ೧೮: ದುರಂತ ಕುರಿತು ಪ್ರಧಾನಿ ನರೇಂದ್ರ ಮೋದಿ ಅವರು ಎಕ್ಸ್ ನಲ್ಲಿ ಪೋಸ್ಟ್ ಮಾಡಿ ಸಂತಾಪ ಸೂಚಿಸುವ ಜೊತೆಗೆ ಮೃತರ ಕುಟುಂಬಕ್ಕೆ ತಲಾ ೨ ಲಕ್ಷ ಹಾಗೂ ಗಾಯಾಳುಗಳಿಗೆ ತಲಾ ೫೦ ಸಾವಿರ ರೂ ಪರಿಹಾರ ನೀಡುವುದಾಗಿ ಘೋಷಿಸಿದ್ದಾರೆ.


“ಕೋಲ್ಕತ್ತಾದಲ್ಲಿ ನಡೆದ ಕಾಲ್ತುಳಿತ ಅತ್ಯಂತ ದುಃಖಕರವಾಗಿದೆ. ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡವರ ನೋವಿನಲ್ಲಿ ನಾನೂ ಭಾಗಿಯಾಗಿದ್ದೇನೆ. ಗಾಯಗೊಂಡವರು ಶೀಘ್ರವಾಗಿ ಗುಣಮುಖರಾಗಲಿ. ಪಶ್ಚಿಮ ಬಂಗಾಳ ಸರ್ಕಾರವು ಸಂತ್ರಸ್ತ ಕುಟುಂಬಗಳಿಗೆ ಎಲ್ಲ ರೀತಿಯ ಸಹಾಯವನ್ನು ಒದಗಿಸುತ್ತಿದೆ,” ಎಂದು ಮೋದಿ ’ಎಕ್ಸ್’ ಜಾಲತಾಣದಲ್ಲಿ ಬರೆದುಕೊಂಡಿದ್ದಾರೆ.


ಎಸ್ ಐಟಿ ತನಿಖೆ: “ಹೈಕೋರ್ಟ್‌ನ ಹಾಲಿ ನ್ಯಾಯಾಧೀಶರ ನೇತೃತ್ವದಲ್ಲಿ ವಿಶೇಷ ತನಿಖಾ ತಂಡ (ಎಸ್ ಐಟಿ) ಈ ಘಟನೆಯ ತನಿಖೆ ನಡೆಸಲಿದೆ. ಈ ತಂಡದಲ್ಲಿ ಎಸ್‌ಟಿಎಫ್ , ಸಿಐಡಿ ಮತ್ತು ಇತರ ಇಲಾಖೆಗಳ ಸದಸ್ಯರು ಇರಲಿದ್ದಾರೆ. ಘಟನೆ ಕಾರಣರಾದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುತ್ತೇವೆ”ಎಂದು ಸಿಎಂ ಅಧಿಕಾರಿ ಹೇಳಿದ್ದಾರೆ.


೧೨ ಮಂದಿ ವಶಕ್ಕೆ:
ಈ ಕಾಲ್ತುಳಿತದ ಘಟನೆಗೆ ಸಂಬಂಧಿಸಿದಂತೆ, ಚೋರ್‌ಬಗಾನ್ ದುರ್ಗಾ ಪೂಜೆಯ ಆಯೋಜಕರು ಸೇರಿದಂತೆ ೧೨ ಮಂದಿಯನ್ನು ಶನಿವಾರ ರಾತ್ರಿ ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.


ಅಮಿತ್ ಶಾ ಕಾರ್ಯಕ್ರಮ ಮುಂದೂಡಿಕೆ: ದುರಂತದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಸಂತಾಪ ಸೂಚಿಸಿ, ಭಾನುವಾರ ಪಶ್ಚಿಮ ಬಂಗಾಳದಲ್ಲಿ ನಿಗದಿಯಾಗಿದ್ದ ತಮ್ಮ ಎಲ್ಲಾ ಕಾರ್ಯಕ್ರಮಗಳನ್ನು ಮುಂದೂಡಿದ್ದಾರೆ.