ಅಶೋಕಕುಮಾರಗೆ ರಾಜ್ಯಮಟ್ಟದ ಪ್ರಶಸ್ತಿ

ಬೀದರ್: ಡಿ.೧೧:ಭಾಲ್ಕಿ ತಾಲ್ಲೂಕಿನ ತಳವಾಡ (ಕೆ) ಗ್ರಾಮದ ಸಿಆರ್‌ಪಿ ಅಶೋಕಕುಮಾರ ಎನ್. ಕಲ್ಯಾಣಿ ಅವರಿಗೆ ವಿಶ್ವ ಕನ್ನಡಿಗರ ಸಂಸ್ಥೆ ಕರ್ನಾಟಕದ ವತಿಯಿಂದ ಕೊಡಲಾಗುವ ಪ್ರಸಕ್ತ ಸಾಲಿನ ರಾಜ್ಯಮಟ್ಟದ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಲಭಿಸಿದೆ.
ಶಿಕ್ಷಣ ಕ್ಷೇತ್ರಕ್ಕೆ ನೀಡಿದ ಗಣನೀಯ ಕೊಡುಗೆಗಾಗಿ ಅವರನ್ನು ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.
ವಿಶ್ವ ಕನ್ನಡಿಗರ ಸಂಸ್ಥೆ ಕರ್ನಾಟಕ ವತಿಯಿಂದ ಬೀದ???ನಲ್ಲಿ ಮಂಗಳವಾರ ನಡೆದ ಗಡಿ ಕನ್ನಡಿಗರ ಉತ್ಸವ ಹಾಗೂ ಕರ್ನಾಟಕ ರಾಜ್ಯೋತ್ಸವ ಸಮಾರಂಭದಲ್ಲಿ ಅವರಿಗೆ ಪ್ರಶಸ್ತಿ ಪ್ರದಾನ ಮಾಡಲಾಯಿತು.