
ಬೀದರ್: ಜ.23:ಇಲ್ಲಿಯ ಸವಿಗಾನ ಸಂಗೀತ ಅಕಾಡೆಮಿಯ ಅಧ್ಯಕ್ಷೆ ಭಾನುಪ್ರಿಯ ಅರಳಿ ಅವರಿಗೆ ಕರ್ನಾಟಕ ಶಿಕ್ಷಕರ ಸಂಘಗಳ ಪರಿಷತ್ ಹಾಗೂ ಕಲ್ಯಾಣ ಕರ್ನಾಟಕ ಪ್ರೌಢಶಾಲಾ ಶಿಕ್ಷಕರ ಸಂಘದಿಂದ ಕೊಡಲಾಗುವ ಪ್ರಸಕ್ತ ಸಾಲಿನ ರಾಜ್ಯಮಟ್ಟದ ಸಾವಿತ್ರಿಬಾಯಿ ಫುಲೆ ಶಿಕ್ಷಣ ಸೇವಾ ರತ್ನ ಪ್ರಶಸ್ತಿ ಲಭಿಸಿದೆ.
ಪರಿಷತ್ ಹಾಗೂ ಸಂಘದ ಪದಾಧಿಕಾರಿಗಳು ನಗರದಲ್ಲಿ ಭಾನುಪ್ರಿಯ ಅವರಿಗೆ ಪ್ರಶಸ್ತಿ ಪ್ರದಾನ ಮಾಡಿದರು.
ಶಿಕ್ಷಕ ವೃತ್ತಿಯ ಜತೆಗೆ ಸಾಮಾಜಿಕ ಕ್ಷೇತ್ರಕ್ಕೆ ನೀಡಿದ ಕೊಡುಗೆಗಾಗಿ ಅವರಿಗೆ ಪ್ರಶಸ್ತಿ ಒಲಿದಿದೆ.
ಕಲ್ಯಾಣ ಕರ್ನಾಟಕ ಪ್ರೌಢಶಾಲಾ ಶಿಕ್ಷಕರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಪಾಂಡುರಂಗ ಬೆಲ್ದಾರ್, ಉಪಾಧ್ಯಕ್ಷರಾದ ಸೂರ್ಯಕಾಂತ ಸಿಂಗೆ, ಸುವರ್ಣಾ ವಾಘಮಾರೆ, ಪ್ರಧಾನ ಕಾರ್ಯದರ್ಶಿ ಬಳವಂತರಾವ್ ರಾಠೋಡ್, ಸಂಘಟನಾ ಕಾಯದರ್ಶಿ ಚಾಮುಂಡೇಶ್ವರಿ ಚೀಲಾ, ಅನಿಲಕುಮಾರ ಶೇರಿಕಾರ್, ರಾಜೇಂದ್ರ ಭಾತಂಬ್ರೆ, ಚಂದ್ರಕಾಂತ ದಂಡೆ, ರೇಣುಕಾ ಕೋಟೆ, ಭಾಗ್ಯಲಕ್ಷ್ಮಿ ಗುರುಮೂರ್ತಿ ಮತ್ತಿತರರು ಹಾಜರಿದ್ದರು.

























