Home ಜಿಲ್ಲೆ ಜಮಖಂಡಿಯಲ್ಲಿ ರಾಜ್ಯಮಟ್ಟದ ಹಾಕಿ ಪಂದ್ಯಾವಳಿ ಯಶಸ್ವಿ: ಮೈಸೂರು, ಕೊಡಗು ತಂಡಗಳಿಗೆ ಚಾಂಪಿಯನ್ ಪಟ್ಟಬಾಲಕಿಯರ ವಿಭಾಗದಲ್ಲಿ ಮೈಸೂರು,...

ಜಮಖಂಡಿಯಲ್ಲಿ ರಾಜ್ಯಮಟ್ಟದ ಹಾಕಿ ಪಂದ್ಯಾವಳಿ ಯಶಸ್ವಿ: ಮೈಸೂರು, ಕೊಡಗು ತಂಡಗಳಿಗೆ ಚಾಂಪಿಯನ್ ಪಟ್ಟಬಾಲಕಿಯರ ವಿಭಾಗದಲ್ಲಿ ಮೈಸೂರು, ಬಾಲಕರ ವಿಭಾಗದಲ್ಲಿ ಕೊಡಗು ತಂಡ ರಾಷ್ಟ್ರಮಟ್ಟಕ್ಕೆ ಅರ್ಹತೆ

ಜಮಖಂಡಿ:ನಗರದ ತಾಲೂಕು ಕ್ರೀಡಾಂಗಣದಲ್ಲಿ ತುಂಗಳ ಶಿಕ್ಷಣ ಸಂಸ್ಥೆಯ ಆಶ್ರಯದಲ್ಲಿ ಆಯೋಜಿಸಿದ್ದ ಪದವಿ ಪೂರ್ವ ಕಾಲೇಜುಗಳ ರಾಜ್ಯಮಟ್ಟದ ಹಾಕಿ ಕ್ರೀಡಾಕೂಟವು ಯಶಸ್ವಿಯಾಗಿ ಸಮಾರೂಪಗೊಂಡಿತ್ತು, ಬಾಲಕಿಯರ ವಿಭಾಗದಲ್ಲಿ ಮೈಸೂರು ಹಾಗೂ ಬಾಲಕರ ವಿಭಾಗದಲ್ಲಿ ಕೊಡಗು ತಂಡಗಳು ಚಾಂಪಿಯನ್ ಆಗಿ ಹೊರಹೊಮ್ಮಿದವು. ಎರಡೂ ತಂಡಗಳು ರಾಷ್ಟ್ರಮಟ್ಟದ ಕ್ರೀಡಾಕೂಟಕ್ಕೆ ಅರ್ಹತೆ ಪಡೆದುಕೊಂಡಿವೆ.

ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ), ಬೆಂಗಳೂರು, ಬಾಗಲಕೋಟೆ ಹಾಗೂ ತುಂಗಳ ವಿಜ್ಞಾನ ಸಂಯುಕ್ತ ಪದವಿ ಪೂರ್ವ ಮಹಾವಿದ್ಯಾಲಯ, ಜಮಖಂಡಿ ಇವರ ಸಹಯೋಗದಲ್ಲಿ 2026ನೇ ಸಾಲಿನ ರಾಜ್ಯಮಟ್ಟದ ಹಾಕಿ ಕ್ರೀಡಾಕೂಟ ನಡೆಯಿತು.

ಸಮಾರೋಪ ಸಮಾರಂಭದಲ್ಲಿ ಮಾತನಾಡಿದ ತುಂಗಳ ಶಿಕ್ಷಣ ಸಮೂಹ ಸಂಸ್ಥೆಗಳ ಸಂಸ್ಥಾಪಕ ಅಶೋಕ ತುಂಗಳ, ಬಾಗಲಕೋಟೆ ಜಿಲ್ಲೆಯಲ್ಲಿ ಹಾಕಿ ಕ್ರೀಡೆಗೆ ಹೆಚ್ಚಿನ ಪ್ರಚಾರ ಹಾಗೂ ಜನಪ್ರಿಯತೆ ಇಲ್ಲದಿದ್ದರೂ, ಈ ರಾಜ್ಯಮಟ್ಟದ ಪಂದ್ಯಾವಳಿ ಕ್ರೀಡಾಭಿಮಾನಿಗಳ ಗಮನ ಸೆಳೆದಿದೆ. ತುಂಗಳ ಶಾಲೆಯ ಬೆಳ್ಳಿ ಸಂಭ್ರಮದ ಅಂಗವಾಗಿ ಮುಂದಿನ ವರ್ಷವೂ ರಾಜ್ಯಮಟ್ಟದ ಕ್ರೀಡಾಕೂಟವೊಂದನ್ನು ಆಯೋಜಿಸಲು ಉದ್ದೇಶಿಸಿದ್ದು, ವಿದ್ಯಾರ್ಥಿಗಳ ಕ್ರೀಡಾ ಪ್ರತಿಭೆಗಳಿಗೆ ಸಂಸ್ಥೆ ಸದಾ ಪೆÇ್ರೀತ್ಸಾಹ ನೀಡಲಿದೆ ಎಂದರು.

ಸಮಾರೋಪ ಸಮಾರಂಭದಲ್ಲಿ ವಿಜೇತ ತಂಡಗಳಿಗೆ ಪ್ರಶಸ್ತಿಗಳನ್ನು ಹಾಗೂ ಬಹುಮಾನಗಳನ್ನು ವಿತರಿಸಲಾಯಿತು.

ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಬಾಗಲಕೋಟೆ ಸಹಾಯಕ ನಿರ್ದೇಶಕ ಗುರುಪಾದ ದೂಗನ್ನವರ, ಜಿಲ್ಲಾ ದೈಹಿಕ ಶಿಕ್ಷಣ ಉಪನ್ಯಾಸಕರ ಸಂಘದ ಅಧ್ಯಕ್ಷ ಎಂ.ಕೆ. ಮುರುಗೋಡ, ತುಂಗಳ ಪದವಿ ಪೂರ್ವ ಮಹಾವಿದ್ಯಾಲಯ, ಹುಲ್ಯಾಳದ ಪ್ರಾಚಾರ್ಯ ವಿಜಯ ಎಸ್. ಕುಲಕರ್ಣಿ ಉಪಸ್ಥಿತರಿದ್ದರು.

ಶಿಕ್ಷಕ ಶ್ರೀಕಾಂತ ಪಢತರೆ ಕಾರ್ಯಕ್ರಮ ನಿರೂಪಿಸಿದರು. ದೈಹಿಕ ಶಿಕ್ಷಣ ಉಪನ್ಯಾಸಕ ಗುರು ಜನವಾಡ ವಂದಿಸಿದರು.