Home ಮುಖಪುಟ ಸುದ್ದಿ ಜ್ಞಾನೇಶ್ ರಾಜೀನಾಮೆಗೆ ಆಗ್ರಹಿಸಿ ನಾಳೆ ರಾಜ್ಯಾದ್ಯಂತ ಕೈ ಪ್ರತಿಭಟನೆ

ಜ್ಞಾನೇಶ್ ರಾಜೀನಾಮೆಗೆ ಆಗ್ರಹಿಸಿ ನಾಳೆ ರಾಜ್ಯಾದ್ಯಂತ ಕೈ ಪ್ರತಿಭಟನೆ

ಬೆಂಗಳೂರು, ಜು. ೨೫- ಕೇಂದ್ರ ಚುನಾವಣಾ ಆಯೋಗದ ಮುಖ್ಯ ಆಯುಕ್ತ ಜ್ಞಾನೇಶ್‌ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ ಕಾಂಗ್ರೆಸ್ ಪಕ್ಷ ನಾಳೆ ರಾಜ್ಯಾದ್ಯಂತ ಪ್ರತಿಭಟನೆ ನಡೆಸಲಿದೆ.


ಕೆಪಿಸಿಸಿ ಕಚೇರಿಯಲ್ಲಿಂದು ಸುದ್ದಿಗೋಷ್ಠಿಯಲ್ಲಿ ಈ ಬಗ್ಗೆ ಮಾಹಿತಿ ನೀಡಿದ ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಅವರು, ಕೇಂದ್ರ ಚುನಾವಣಾ ಆಯುಕ್ತ ಜ್ಞಾನೇಶ್‌ಕುಮಾರ್ ಅವರನ್ನು ತಕ್ಷಣ ಬಂಧಿಸಿ ಅವರ ರಾಜೀನಾಮೆ ಪಡೆಯಬೇಕು. ಹಾಗೆಯೇ ಚುನಾವಣಾ ಆಯೋಗ ನಡೆಸಿರುವ ಎಲ್ಲ ಎಸ್‌ಐಆರ್ ಪ್ರತಿ ರದ್ದುಗೊಳಿಸಬೇಕು ಎಂದು ಆಗ್ರಹಿಸಿದರು.


ಕೇಂದ್ರ ಚುನಾವಣಾ ಆಯೋಗದ ಮುಖ್ಯ ಆಯುಕ್ತ ಜ್ಞಾನೇಶ್ ರಾಜೀನಾಮೆ ನೀಡುವವರೆಗೂ ಕಾಂಗ್ರೆಸ್ ಹೋರಾಟ ನಡೆಸಲಿದೆ. ನಾಳೆ ಬೆಂಗಳೂರಿನ ಸ್ವತಂತ್ರ ಉದ್ಯಾನವನದಲ್ಲಿ ಪ್ರತಿಭಟನೆ ನಡೆಯಲಿದ್ದು, ಜತೆಗೆ ಎಲ್ಲ ಜಿಲ್ಲೆಗಳಲ್ಲೂ ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರು ಪ್ರತಿಭಟನೆ ನಡೆಸಲಿದ್ದಾರೆ ಎಂದರು.
ಕೇಂದ್ರ ಚುನಾವಣಾ ಆಯುಕ್ತ ಜ್ಞಾನೇಶ್‌ಕುಮಾರ್, ಪ್ರಧಾನಿ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಇವರೆಲ್ಲಾ ದೇಶ ದ್ರೋಹಿಗಳು ಎಂದು ಆರೋಪಿಸಿದ ಅವರು, ಇವರ್ಯಾರು ಕ್ಷಮೆಗೆ ಅರ್ಹರಲ್ಲ ಎಂದು ಹೇಳಿದರು.


ಪ್ರಧಾನಿ ಮೋದಿ, ಅಮಿತ್ ಶಾ ಇವರೆಲ್ಲಾ ಕ್ಷಮೆ ಕೇಳದಂತಹ ತಪ್ಪು ಮಾಡಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ ಅವರು, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್‌ಕುಮಾರ್ ಅಕ್ರಮ ಎಸಗಿದ್ದಾರೆ. ಅವರು ತಕ್ಷಣವೇ ರಾಜೀನಾಮೆ ನೀಡಬೇಕು. ಇಲ್ಲದಿದ್ದರೆ ಅವರನ್ನು ಬಂಧಿಸಬೇಕು ಎಂದು ಹರಿಪ್ರಸಾದ್ ಒತ್ತಾಯಿಸಿದರು.
ಮುಖ್ಯ ಆಯುಕ್ತರ ನಡೆಯ ಬಗ್ಗೆ ಕಾಂಗ್ರೆಸ್‌ನ ರಾಹುಲ್‌ಗಾಂಧಿ ಅವರು ಫೆಬ್ರವರಿ ೨೫ ರಂದೇ ಪತ್ರ ಬರೆದಿದ್ದರು. ಆದರೆ ಆಯೋಗ ಆ ಪತ್ರಕ್ಕ ಗೌರವ ಕೊಟ್ಟಿರಲಿಲ್ಲ. ಪ್ರಜಾಪ್ರಭುತ್ವ ಸಂವಿದಾನ ವಿರೋಧವಾಗಿ ಇವರು ನಡೆದುಕೊಂಡಿದ್ದಾರೆ. ಇದನ್ನು ನಾವು ದೇಶ ದ್ರೋಹ ಎಂದು ಕರೆಯಲೇಬೇಕು ಎಂದರು.


ಬಿಜೆಪಿಗೆ ಅನುಕೂಲ ಮಾಡಿಕೊಡುವ ಉದ್ದೇಶದಿಂದ ಎಸ್‌ಐಆರ್ ನಡೆಸಲಾಗಿದೆ. ಈ ಎಸ್‌ಐಆರ್ ಪ್ರಕ್ರಿಯೆಯನ್ನು ರದ್ದುಪಡಿಸಬೇಕು ಎಂದು ಒತ್ತಾಯಿಸಿದರು.
ಇದೇ ಸಂದರ್ಭದಲ್ಲಿ ಮಾತನಾಡಿದ ಎಐಸಿಸಿ ಕಾರ್ಯದರ್ಶಿ ಗೋಪಿನಾಥ್ ಪಳಿಯಪ್ಪನವರ್, ಕೇಂದ್ರ ಚುನಾವಣಾ ಆಯೋಗ ಅಕ್ರಮ ಎಸಗಿದೆ. ಮುಖ್ಯ ಆಯುಕ್ತರ ನಡೆಯ ವಿರುದ್ಧ ಇನ್ನಿಬ್ಬರು ಆಯುಕ್ತರು ದ್ವನಿ ಎತ್ತಿದ್ದಾರೆ. ಎಸ್‌ಐಆರ್‌ನ್ನು ರದ್ದುಪಡಿಸಬೇಕು ಎಂದು ಅವರು ಒತ್ತಾಯಿಸಿದರು
ರಾಜ್ಯದಲ್ಲೂ ಎಸ್‌ಐಆರ್ ಅಕ್ರಮ ನಡೆದಿದೆ. ಈ ಎಸ್‌ಐಆರ್‌ನ್ನು ರದ್ದುಪಡಿಸುವಂತೆ ಅವರು ಒತ್ತಾಯಿಸಿದರು