
ಕಲಬುರಗಿ,ಸೆ.17-ಕಲ್ಯಾಣ ಕರ್ನಾಟಕ ಉತ್ಸವದ ಹಿನ್ನೆಲೆಯಲ್ಲಿ ಸಿಎಂ ಡಿ.ಕೆ.ಶಿವಕುಮಾರ್ ನಗರದಲ್ಲಿ ವಾಸ್ತವ್ಯ ಹೂಡಿದ್ದ ವೇಳೆಯಲ್ಲೇ ಹೈಕೋರ್ಟ್ ವೃತ್ತದಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಅವರ 9 ಅಡಿ ಎತ್ತರದ ಮೂರ್ತಿಯನ್ನು ಅಭಿಮಾನಿಗಳು ರಾತ್ರೋರಾತ್ರಿ ಪ್ರತಿಷ್ಠಾಪಿಸಿದ್ದರು. ಯಾವುದೇ ಕಾನೂನುಬದ್ಧ ಅನುಮತಿ ಪಡೆಯದೆ ಈ ಪ್ರತಿಮೆ ಸ್ಥಾಪಿಸಲಾಗಿತ್ತು. ವಿಷಯ ತಿಳಿಯುತ್ತಿದ್ದಂತೆ ಎಚ್ಚೆತ್ತ ಮಹಾನಗರ ಪಾಲಿಕೆ ಅಧಿಕಾರಿಗಳು, ಬಿಗಿ ಪೆÇಲೀಸ್ ಬಂದೋಬಸ್ತ್ನೊಂದಿಗೆ ತೆರವು ಕಾರ್ಯಾಚರಣೆ ನಡೆಸಿದ್ದಾರೆ. ಅನುಮತಿ ಇಲ್ಲದೆ ಮೂರ್ತಿ ಪ್ರತಿಷ್ಠಾಪನೆ ಮಾಡಿದ ಹಿನ್ನೆಲೆಯಲ್ಲಿ ಪಾಲಿಕೆ ಈ ಕ್ರಮ ಕೈಗೊಂಡಿದೆ ಎಂದು ತಿಳಿದುಬಂದಿದೆ.




























