Home ಜಿಲ್ಲೆ ಮಾದಕ ವಸ್ತುಗಳ ಸೇವನೆಯಿಂದ ದೂರವಿರಿ : ಪನ್ನಾಳೆ

ಮಾದಕ ವಸ್ತುಗಳ ಸೇವನೆಯಿಂದ ದೂರವಿರಿ : ಪನ್ನಾಳೆ

ಔರಾದ್ :ಜು.1: ಅಮಲು ಬರಿಸುವ ಮಾದಕ ವಸ್ತುಗಳ ಸೇವನೆಯಿಂದ ಮನುಷ್ಯರು ದೂರವಿರಬೇಕು ಎಂದು ಮುಖಂಡ ರಾಮಶೆಟ್ಟಿ ಪನ್ನಾಳೆ ನುಡಿದರು.

ತಾಲ್ಲೂಕಿನ ಠಾಣಕುಶನೂರು ಕೆಪಿಎಸ್ ಪ್ರೌಢ ಶಾಲೆಯಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಹಮ್ಮಿಕೊಂಡ ಅಂತರಾಷ್ಟ್ರೀಯ ಮಾದಕ ವಸ್ತು ವಿರೋಧಿ ದಿನ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಅವರು, ಇಂದಿನ ದಿನಗಳಲ್ಲಿ ಅನೇಕರು ದೈಹಿಕ ಹಾಗೂ ಮಾನಸಿಕ ಕಾಯಿಲೆಗೆ ಒಳಗಾಗಿ ತನ್ನ ಜೀವವನ್ನೆ? ಕಳೆದುಕೊಳ್ಳುತ್ತಿದ್ದಾರೆ.ಹಾಗೂ ಆರ್ಥಿಕವಾಗಿ ದಿವಾಳಿ ಕೂಡ ಆಗುತ್ತಿದ್ದಾರೆ. ಇದರಿಂದ ಕುಟುಂಬ ಹಾಗೂ ಸಮಾಜದ ಮೇಲೆ ಕೆಟ್ಟ ಪರಿಣಾಮ ಉಂಟಾಗುತ್ತದೆ. ಸಮಾಜ ಮಾದವ ವಸ್ತುಗಳಿಂದ ಮುಕ್ತವಾಗಿರಬೇಕು. ಮಾದಕ ವಸ್ತುಗಳ ಬಳಕೆ ಹಾಗೂ ಅಕ್ರಮ ಸಾಗಣೆಯಿಂದ ಉಂಟಾಗುವ ಸಮಸ್ಯೆಗಳ ಬಗ್ಗೆ ಜಾಗತಿಕವಾಗಿ ಅರಿವು ಮೂಡಿಸುವ ಸಲುವಾಗಿ ಪ್ರತಿವರ್ಷ ಅಂತಾರಾಷ್ಟ್ರೀಯ ಮಾದಕ ವಸ್ತುಗಳ ದುರುಪಯೋಗ ಮತ್ತು ಕಾನೂನು ಬಾಹಿರ ಸಾಗಾಟ ವಿರೋಧಿ ದಿನವನ್ನು ಆಚರಿಸಲಾಗುತ್ತದೆ ಎಂದರು.

ಈ ಸಂಧರ್ಭದಲ್ಲಿ ಜಿಲ್ಲಾ ಜನ ಜಾಗ್ರತಿ ಸದಸ್ಯೆ ಸಪ್ನಾ ಖಂಡೆ, ಮುಖ್ಯ ಗುರು ಸಂಜು ಕದಂ,ಸತೀಶ ಜಿರ್ಗೆ, ಡಾ. ಸಂಜುಕುಮಾರ್ ಜುಮ್ಮಾ, ವಲಯ ಮೇಲ್ವಿಚಾರಕ ವಿಲಾಸ್, ಸಂಜುಕುಮಾರ್ ಇದ್ದರು.