
ಯಡ್ರಾಮಿ:ಅ.11: ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ
ಸಂಸ್ಥೆಯ ಬಸ್ ಪಲ್ಟಿಯಾಗಿ ಪಕ್ಕದ ಜಮೀನಿಗೆ ಉರುಳಿದ ಘಟನೆ ಕರಕಿಹಳ್ಳಿ ಮತ್ತು ಯಲಗೋಡ ಗ್ರಾಮಗಳ ಮಧ್ಯೆ ಶುಕ್ರವಾರ ಸಂಜೆ ನಡೆದಿದೆ.
ಕೆಎ 32 ಎಫ್ 1767 ನಂಬರಿನ ಬಸ್ ಯಡ್ರಾಮಿನಿಂದ ಶಹಾಪುರ ಪಟ್ಟಣಕ್ಕೆ ತೆರಳುತ್ತಿತ್ತು. ಬಸ್‍ನಲ್ಲಿ ಸುಮಾರು 50 ಜನ ಪ್ರಯಾಣಿಕರಿದ್ದರು.
ಬಸ್ ಸ್ಟೇರಿಂಗ್ ಆಕ್ಸಲ್ ಕಟ್ ಆಗಿ ನಿಯಂತ್ರಣ ತಪ್ಪಿದ್ದರಿಂದ ಬಸ್ ಪಲ್ಟಿಯಾಗಿದೆ ಎನ್ನಲಾಗುತ್ತಿದೆ ಬಸ್‍ನಲ್ಲಿದ್ದ ನಾಲ್ಕು ಜನ ಪ್ರಯಾಣಿಕರಿಗೆ ಗಂಭೀರ ಗಾಯಗಳಾಗಿದ್ದು,
ಕಲಬುರಗಿಯ ಖಾಸಗಿ ಆಸ್ಪತ್ರೆಗಳಲ್ಲಿ ದಾಖಲಿಸಲಾಗಿದೆ.ಉಳಿದ ಕೆಲ ಪ್ರಯಾಣಿಕರಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು, ಅವರಿಗೆ ಯಡ್ರಾಮಿ ಸರ್ಕಾರಿ ಸಮುದಾಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ.
ಪ್ರಯಾಣಿಕರ ಚೀರಾಟ ಕೇಳಿ ಗ್ರಾಮಸ್ಥರು ಸ್ಥಳಕ್ಕೆ ಆಗಮಿಸಿ ಪ್ರಯಾಣಿಕರನ್ನು ರಕ್ಷಣೆ ಮಾಡಿರುವುದು ತಿಳಿದುಬಂದಿದೆ.ಈ ಕುರಿತು ಯಡ್ರಾಮಿ ಠಾಣೆಯಲ್ಲಿ ಪ್ರಕರಣ ದಾಖಲೆಯಾಗಿದೆ.

































