Home ಜಿಲ್ಲೆ ಮಕ್ಕಳ ಮೇಲೆ ಬೀದಿ ನಾಯಿಗಳ ದಾಳಿ; ನಾಲ್ವರಿಗೆ ಗಾಯ

ಮಕ್ಕಳ ಮೇಲೆ ಬೀದಿ ನಾಯಿಗಳ ದಾಳಿ; ನಾಲ್ವರಿಗೆ ಗಾಯ

ಜಮಖಂಡಿ: ಏ.13: ನಗರದ ಶಿಕ್ಕಲಗಾರ ಗಲ್ಲಿಯಲ್ಲಿ ಮಕ್ಕಳು ಆಟವಾಡುತ್ತಿದ್ದ ವೇಳೆ ಬೀದಿ ನಾಯಿ ಏಕಾಏಕಿ ದಾಳಿ ನಡೆಸಿದ ಪರಿಣಾಮ ನಾಲ್ವರು ಮಕ್ಕಳು ಸಣ್ಣಪುಟ್ಟ ಗಾಯಗಳಿಗೆ ಒಳಗಾದ ಘಟನೆ ನಡೆದಿದೆ.
ಗಾಯಾಳು ಮಕ್ಕಳನ್ನು ಮಾನಂದಾ ಸಂಜು ಬಜಂತ್ರಿ (6 ವರ್ಷ), ಅರವಿಂದ ರಾಜನಾ ಶಿಕ್ಕಲಗಾರ (2.5 ವರ್ಷ), ಶಕ್ತಿ ಲಕ್ಷ್ಮಣ ಪೂಜಾರಿ (4 ವರ್ಷ) ಹಾಗೂ ಚೌಡಯ್ಯ ನಗರದ ಆತಿಫಾ ಅಪರಾದ್ (3 ವರ್ಷ) ಎಂದು ಗುರುತಿಸಲಾಗಿದೆ.
ಗಾಯಗೊಂಡ ಮಕ್ಕಳನ್ನು ತಕ್ಷಣವೇ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ಮಕ್ಕಳ ಆರೋಗ್ಯ ಸ್ಥಿತಿ ಸ್ಥಿರವಾಗಿದೆ ಎಂದು ತಿಳಿದು ಬಂದಿದೆ.
ನಗರದಲ್ಲಿ ಇತ್ತೀಚೆಗೆ ಬೀದಿ ನಾಯಿಗಳ ದಾಳಿ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಸಾರ್ವಜನಿಕರಲ್ಲಿ ಆತಂಕ ಮನೆಮಾಡಿದೆ. ಸಂಬಂಧಪಟ್ಟ ಅಧಿಕಾರಿಗಳು ತಕ್ಷಣ ಕ್ರಮ ಕೈಗೊಂಡು ಬೀದಿ ನಾಯಿಗಳ ಸಮಸ್ಯೆಗೆ ಶಾಶ್ವತ ಪರಿಹಾರ ಒದಗಿಸಬೇಕೆಂದು ಸ್ಥಳೀಯರು ಒತ್ತಾಯಿಸಿದ್ದಾರೆ.