
ಯಾದಗಿರಿ:ಫೆ.೪:ಬೀದಿಬದಿ ವ್ಯಾಪಾರಿಗಳು ತಮ್ಮ ಡಿಜಿಟಲ್ ವ್ಯವಹಾರಗಳಾದ ಫೋನ್ ಪೇ, ಗೂಗಲ್ ಪೇ, ಸ್ಕ್ಯಾನರ್ ಗಳಿಂದ ವ್ಯವಹಾರ ಮಾಡುತ್ತಾ ಬ್ಯಾಂಕ್ ನಿಂದ ಪಡೆದ ಸಾಲ ಅವಧಿಯೊಳಗೆ ಮರುಪಾವತಿಸಿದಲ್ಲಿ ಮುಂದಿನ ಹಂತದ ಸಾಲ ಸೌಲಭ್ಯಕ್ಕೆ ಅರ್ಹತೆ ಪಡೆಯುತ್ತೀರಿ. ಜೊತೆಗೆ ಸಾಮಾಜಿಕ ಭದ್ರತೆ ಯೋಜನೆಗಳ ಸದುಪಯೋಗ ಪಡೆದುಕೊಳ್ಳಬೇಕು ಎಂದು ಪೌರಾಯುಕ್ತ ಜೀವನ ಕೆ. ರವರು ಬೀದಿ ವ್ಯಾಪಾರಿಗಳಿಗೆ ಕರೆ ನೀಡಿದರು.
ಜಿಲ್ಲಾ ಆಡಳಿತ, ನಗರ ಅಭಿವೃದ್ಧಿ ಕೋಶ, ಜಿಲ್ಲಾ ಕೌಶಲ್ಯ ಮಿಷನ್, ಭಾರತಾಂಬೆ ಸಂಸ್ಥೆ ಮತ್ತು ಶಹಾಪುರ ನಗರಸಭೆ ಸಹಯೋಗದೊಂದಿಗೆ ಡೇ ನಲ್ಮ್ ಯೋಜನೆಯ ಬೀದಿ ಬದಿ ವ್ಯಾಪಾರಿಗಳಿಗೆ ಸ್ವ ನಿಧಿ ಸಮೃದ್ಧಿ ಕಾರ್ಯಕ್ರಮದಡಿ ಪ್ರಧಾನ ಮಂತ್ರಿ ಶ್ರಮಯೋಗಿ ಯೋಜನೆಯ ಫಲಾನುಭವಿಗಳಿಗೆ ವಿಶೇಷ ನೊಂದಣಿ ಮೇಳ ಮತ್ತು ಆಹಾರ ಸುರಕ್ಷತೆ ಗುಣಮಟ್ಟ ಮತ್ತು ಸ್ವಚ್ಛತೆ ಕುರಿತು ಆರೋಗ್ಯ ಇಲಾಖೆಗಳೊಂದಿಗೆ ಬೀದಿಬದಿ ವ್ಯಾಪಾರಿಗಳಿಗೆ ತಿಳುವಳಿಕೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಮುಖ್ಯ ಅತಿಥಿಗಳಾಗಿ ಭಾಗವಹಿಸಿದ ನಗರ ಅಭಿಯಾನ ವ್ಯವಸ್ಥಾಪಕರಾದ ಗುರುಪಾದ ತಳವಾರ್ ಪ್ರಾಸ್ತಾವಿಕ ಮಾತನಾಡಿ ಸಮಗ್ರ ಯೋಜನೆಯ ಬಗ್ಗೆ ವಿವರಿಸಿದರು.
ಕಾರ್ಯಕ್ರಮದ ಆಯೋಜಕರಾದ ಭಾರತಾಂಬೆ ಸಂಸ್ಥೆಯ ಕಾರ್ಯದರ್ಶಿಗಳಾದ ಭೀಮಶಂಕರ್ ಬೆನಕನಹಳ್ಳಿ ಮಾತನಾಡುತ್ತಾ ಸಾಮಾಜಿಕ ಭದ್ರತೆ ಯೋಜನೆಗಳಾದ Pಒಎಎಃ, PಒSಃಙ, PಒಂPಙ, ಮತ್ತು PಒSಙಒ ಬಗ್ಗೆ ಸವಿಸ್ತಾರವಾಗಿ ಉಪನ್ಯಾಸ ನೀಡಿದರು.
ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಆರೋಗ್ಯ ನಿರೀಕ್ಷಕರಾದ ಸಂತೋಷ ಪಾಟೀಲ್ ಮತ್ತು ಮಹೀಬೂಬಿ ರವರು ನೈರ್ಮಲಿಕರಣದಿಂದ ಆಗುವ ಪರಿಣಾಮಗಳನ್ನು ವಿವರಿಸಿದರು. ಮತ್ತು ಹೊಸದಾಗಿ ಸೇರ್ಪಡೆಯಾದ ಬೀದಿ ಬದಿ ವ್ಯಾಪಾರಿಗಳಿಗೆ ಗುರುತಿನ ಚೀಟಿ ಮತ್ತು ಮಾರಾಟ ಪ್ರಮಾಣ ಪತ್ರ ವಿತರಿಸಲಾಯಿತು.
ಕಾರ್ಯಕ್ರಮದಲ್ಲಿ ವಿವಿಧ ಬ್ಯಾಂಕ್ ಗಳ ವ್ಯವಸ್ಥಾಪಕರು ಮತ್ತು ಆರೋಗ್ಯ ಇಲಾಖೆಯ ಅಧಿಕಾರಿಗಳು ಬೀದಿ ಬದಿ ವ್ಯಾಪಾರಿಗಳು, ಭಾರತಾಂಬೆ ಸಂಸ್ಥೆಯ ಸ್ವಯಂ ಸೇವಕರಾದ ಮಲ್ಲಪ್ಪ, ಮಲ್ಲಿಕಾರ್ಜುನ್ ಭಾಗವಹಿಸಿ ಸಿಆರ್‌ಪಿಗಳಾದ ಸುಧಾ ಸ್ವಾಗತಿಸಿ ಸಂಗೀತಾ ರವರು ವಂದಿಸಿ ಕವಿತಾ ರವರು ನಿರೂಪಿಸಿದರು.
























