Home ಜಿಲ್ಲೆ ಕಲಬುರಗಿ ಪಂಚ ಗ್ಯಾರಂಟಿ ಸಮಿತಿ ಸದಸ್ಯರು ಪ್ರಿಯಾಂಕ್ ಖರ್ಗೆ ಅವರ ಕೈ ಬಲ ಪಡಿಸಿ; ಸಾಲಿ

ಪಂಚ ಗ್ಯಾರಂಟಿ ಸಮಿತಿ ಸದಸ್ಯರು ಪ್ರಿಯಾಂಕ್ ಖರ್ಗೆ ಅವರ ಕೈ ಬಲ ಪಡಿಸಿ; ಸಾಲಿ

ಚಿತ್ತಾಪುರ; ನೂತನವಾಗಿ ಆಯ್ಕೆಯಾದ ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಸದಸ್ಯರು ಗೃಹ ಮಂತ್ರಿ ಪ್ರಿಯಾಂಕ್ ಖರ್ಗೆ ಅವರ ಕೈ ಬಲಪಡಿಸಬೇಕು ಎಂದು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಭೀಮಣ್ಣ ಸಾಲಿ ಹೇಳಿದರು.
ಪಟ್ಟಣದ ಕಾಂಗ್ರೆಸ್ ಕಚೇರಿಯಲ್ಲಿ ಬ್ಲಾಕ್ ಕಾಂಗ್ರೆಸ್ ವತಿಯಿಂದ ನಡೆದ ಪಂಚ ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ನೂತನ ಸದಸ್ಯರಿಗೆ ಸನ್ಮಾನ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಮುಂಬರುವ ಕೆಲವೇ ತಿಂಗಳುಗಳಲ್ಲಿ ಜಿಪಂ ಹಾಗೂ ತಾಪಂ ಚುನಾವಣೆಗಳು ಬರುತ್ತಿವೆ. ಹೀಗಾಗಿ ನೂತನವಾಗಿ ಆಯ್ಕೆಯಾದ ಸದಸ್ಯರು ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳನ್ನು ಗೆಲ್ಲಿಸುವ ಮೂಲಕ ಪ್ರಿಯಾಂಕ್ ಖರ್ಗೆ ಅವರ ಕೈ ಬಲಪಡಿಸಬೇಕು ಎಂದು ಅವರು ಹೇಳಿದರು.
ಸಚಿವ ಪ್ರಿಯಾಂಕ್ ಖರ್ಗೆ 12ನೇ ಶತಮಾನದ ಬಸವಣ್ಣನವರ ತತ್ವಾರ್ದಶದಂತೆ ಪಂಚ ಗ್ಯಾರಂಟಿ ಸಮಿತಿಯಲ್ಲಿ ಪ್ರತಿಯೊಂದು ಜಾತಿಗಳಿಗೆ ಪಾತ್ಯನಿಧ್ಯ ನೀಡುವುದರ ಮೂಲಕ 14 ಜನರನ್ನು ನಾಮನಿರ್ದೇಶನ ಮಾಡುವ ಮೂಲಕ ಸಮಾನತೆ ನೀಡಿದ್ದಾರೆ. ಹೀಗಾಗಿ ನೂತನವಾಗಿ ಆಯ್ಕೆಯಾದ ಸದಸ್ಯರು ಪಟ್ಟಣ ಸೇರಿದಂತೆ ಪ್ರತಿಯೊಂದು ಗ್ರಾಮಗಳಿಗೆ ತೆರಳಿ ಗ್ಯಾರಂಟಿ ಯೋಜನೆಗಳು ಮನೆ ಮನೆಗೆ ತಲುಪತ್ತಿದೆಯೋ ಅಥವಾ ಇಲ್ಲವೋ ಎನ್ನುವುದನ್ನು ಮನವರಿಕೆ ಮಾಡಿಕೊಂಡು, ಯಾರಿಗೆ ತಲುಪುತ್ತಿಲ್ಲ ಅವರಿಗೆ ತಲುಪಿಸುವ ಕೆಲಸ ಪ್ರಾಮಾಣಿಕವಾಗಿ ಮಾಡಬೇಕು ಎಂದರು.
ಪಂಚ ಗ್ಯಾರಂಟಿ ಯೋಜನೆಗಳು ಜನಸಾಮಾನ್ಯರಿಗೆ, ಮಹಿಳೆಯರಿಗೆ ಹಾಗೂ ಯುವಕರಿಗೆ ತುಂಬಾ ಉಪಯುಕ್ತವಾಗಿದೆ. ಪಕ್ಷಕ್ಕೆ ಯಾವಾಗಲೂ ನಿಷ್ಠರಾಗಿರಬೇಕು ಆಗ ಉತ್ತಮ ಸ್ಥಾನಮಾನಗಳು ಸಿಗಲಿವೆ. ಈ ನಿಟ್ಟಿನಲ್ಲಿ ಎಲ್ಲರನ್ನೂ ಜೊತೆಯಾಗಿ ತೆಗೆದುಕೊಂಡು ಹೋಗುವಂತಹ ಏಕೈಕ ಪಕ್ಷ ಕಾಂಗ್ರೆಸ್ ಪಕ್ಷವಾಗಿದೆ ಎಂದು ಹೇಳಿದರು.
ಪಂಚ ಗ್ಯಾರಂಟಿ ಸಮಿತಿ ಅಧ್ಯಕ್ಷ ಮಲ್ಲಿಕಾರ್ಜುನ ಬೊಮ್ಮನಳ್ಳಿ ಮಾತನಾಡಿ, ಚಿತ್ತಾಪುರ ತಾಲೂಕು ರಾಜ್ಯದಲ್ಲಿಯೇ ತೀರಾ ಹಿಂದುಳಿದ ತಾಲೂಕು ಎನ್ನುವ ಹಣೆಪಟ್ಟಿಯಲ್ಲಿತ್ತು. ಅದನ್ನು ಹೋಗಲಾಡಿಸಲು ಸಚಿವ ಪ್ರಿಯಾಂಕ್ ಖರ್ಗೆ ಅವರು ಚಿತ್ತಾಪುರ ತಾಲೂಕಿಗೆ ಸಾವಿರಾರು ಕೋಟಿ ರೂ. ಅನುದಾನ ತಂದು ಅಭಿವೃದ್ಧಿ ಪಡಿಸಿದ ರಾಜ್ಯದ ಏಕೈಕ ನಾಯಕರಾಗಿದ್ದಾರೆ. ಸಚಿವ ಪ್ರಿಯಾಂಕ್ ಖರ್ಗೆ ಅವರ ಹತ್ತಿರ ಆ ಜಾತಿ ಈ ಜಾತಿ ಎನ್ನುವ ಭೇದ ಭಾವವಿಲ್ಲ ಹೀಗಾಗಿಯೇ ಪಂಚ ಗ್ಯಾರಂಟಿ ಸಮಿತಿಗೆ ಜಾತಿವಾರು 14 ಜನರನ್ನು ನಾಮನಿರ್ದೇಶನ ಮಾಡುವ ಮೂಲಕ ಸಣ್ಣ ಸಣ್ಣ ಸಮಾಜಗಳಿಗೆ ಅವಕಾಶ ನೀಡಿದ್ದಾರೆ ಎಂದು ಮೆಚ್ಚುಗೆ ವ್ಯಕ್ತ ಪಡಿಸಿದರು.
ಕೆಪಿಸಿಸಿ ಸದಸ್ಯ ನಾಗರೆಡ್ಡಿ ಪಾಟೀಲ್ ಕರದಾಳ, ಗ್ಯಾರಂಟಿ ಸಮಿತಿ ಸದಸ್ಯ ರಮೇಶ ಹಡಪದ ಕೊಲ್ಲೂರ್ ಮಾತನಾಡಿದರು.
ಇದೇ ವೆಳೆ ಪಂಚ ಗ್ಯಾರಂಟಿ ಸಮಿತಿಗೆ ಆಯ್ಕೆಯಾದ 14 ಜನರನ್ನು ಸನ್ಮಾನಿಸಿ ಗೌರವಿಸಲಾಯಿತು.
ಈ ಸಂದರ್ಭದಲ್ಲಿ ಜಿಪಂ ಮಾಜಿ ಸದಸ್ಯ ಶಿವರುದ್ರ ಭೀಣಿ, ತಾಪಂ ಮಾಜಿ ಅಧ್ಯಕ್ಷ ಜಗಣ್ಣಗೌಡ ರಾಮತೀರ್ಥ, ಇಸ್ಮಾಯಿಲ್ ಸಾಬ್ ಕಮರವಾಡಿ, ರಮೇಶ ಕಟ್ಟಿಮನಿ, ಯುವ ಕಾಂಗ್ರೆಸ್ ತಾಲೂಕು ಅಧ್ಯಕ್ಷ ದೇವು ಯಾಬಾಳ, ಸಂಜಯ ಬುಳಕರ್, ವೆಂಕಟೇಶ ಕುಲಕರ್ಣಿ, ಸುರೇಶ ಗುತ್ತೇದಾರ, ವಿನ್ನುಕುಮಾರ್ ಜೆ.ಡಿ, ಆರ್.ಡಿ ಪಾಟೀಲ್, ಸುಭಾಷ ಪವಾರ್, ಶರಣು ಅಣಕಲ್, ಸೋಮು ಟೋಕಾಪುರ್, ಶಿವಯೋಗಿ ರಾವೂರ್, ಪ್ರಭು ಹಲಕಟ್ಟಿ ಸೇರಿದಂತೆ ಕಾಂಗ್ರೆಸ್ ಪಕ್ಷದ ಅನೇಕ ಮುಖಂಡರು, ಕಾರ್ಯಕರ್ತರು ಹಾಗೂ ನೂತನ ಸದಸ್ಯರು ಇದ್ದರು.
ವಿಠ್ಠಲ್ ಕಟ್ಟಿಮನಿ ನಿರೂಪಿಸಿ, ವಂದಿಸಿದರು.