
ಕೊರಟಗೆರೆ, ಆ. ೧೫-ಕೊರಟಗೆರೆ ವಿಧಾನಸಭಾ ಕ್ಷೇತ್ರದಲ್ಲಿ ೨೦೨೮ರ ವಿಧಾನಸಭಾ ಚುನಾವಣೆ ಸೇರಿದಂತೆ ಸ್ಥಳೀಯ ಎಲ್ಲ ಚುನಾವಣೆಯಲ್ಲಿ ಜೆಡಿಎಸ್ ಪಕ್ಷದ ಅಭ್ಯರ್ಥಿಗಳನ್ನು ಗೆಲ್ಲಿಸುವ ಹಿನ್ನೆಲೆಯಲ್ಲಿ ಪಕ್ಷ ಸಂಘಟನೆ ಮಾಡುವುದಾಗಿ ಜಿಲ್ಲಾ ಪಂಚಾಯ್ತಿ ಮಾಜಿ ಸದಸ್ಯ ಪಿ.ಎನ್.ಕೃಷ್ನಮೂರ್ತಿ ಹೇಳಿದರು.
ಪಟ್ಟಣದ ಪ್ರವಾಸಿ ಮಂದಿರದಲ್ಲಿ ಜೆಡಿಎಸ್ ಪಕ್ಷದ ಕಾರ್ಯಕರ್ತರು ಏರ್ಪಡಿಸಿದ್ದ ಪ್ರತಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ನಾನು ಕಳೆದ ೨೦ ವರ್ಷಗಳಿಂದ ಕಾಂಗ್ರೆಸ್ ಪಕ್ಷದಲ್ಲಿ ಸಕ್ರಿಯ ರಾಜಕಾರಣಿಯಾಗಿ ಕಾರ್ಯನಿರ್ವಹಿಸಿದ್ದು ಕಾಂಗ್ರೆಸ್ ಪಕ್ಷದಿಂದ ಹೊರಬಂದು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ರವರ ನೇತೃತ್ವದಲ್ಲಿ ಬೆಂಗಳೂರಿನ ಜೆ.ಪಿ.ಭವನದಲ್ಲಿ ಅಧಿಕೃತವಾಗಿ ಜೆಡಿಎಸ್ ಪಕ್ಷ ಸೇರ್ಪಡೆಗೊಂಡಿದ್ದೇನೆ ಎಂದರು.
ಕೊರಟಗೆರೆ ವಿಧಾನಸಭಾ ಕ್ಷೇತ್ರದಲ್ಲಿ ಜೆಡಿಎಸ್ ಪಕ್ಷ ಹಿಂದಿನಿಂದಲೂ ಸದೃಢವಾಗಿದ್ದು ಸಂಘಟನೆ ಕೊರತೆಯಿಂದ ಕಳೆದ ೨-೩ ವಿಧಾನಸಭಾ ಚುನಾವಣೆಯಲ್ಲಿ ಪರಾವಭವಗೊಂಡಿದ್ದು ಕ್ಷೇತ್ರದಲ್ಲಿ ಸಂಘಟನೆ ಮಾಡುವ ಮೂಲಕ ಮುಂದಿನ ೨೮ ವಿಧಾನಸಭಾ ಚುನಾವಣೆ ಸೇರಿದಂತೆ ಎಲ್ಲ ಸ್ಥಳೀಯ ಚುನಾವಣೆಗಳಲ್ಲಿ ಜೆಡಿಎಸ್ ಪಕ್ಷದ ಅಭ್ಯರ್ಥಿಗಳನ್ನು ಆಯ್ಕೆಯಾಗುವಂತೆ ಪಕ್ಷವನ್ನು ಸಂಘಟಿಸುವುದಾಗಿ ತಿಳಿಸಿದರು.
ರಾಜ್ಯದಲ್ಲಿ ಜನತಗೆ ಕಾಂಗ್ರೆಸ್ ಪಕ್ಷದ ಆಡಳಿತದಲ್ಲಿ ಬೇಸರ ವ್ಯಕ್ತವಾಗಿದ್ದು ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ರಾಜ್ಯದಲ್ಲಿ ಜೆಡಿಎಸ್ ಪಕ್ಷ ಹೆಚ್ಚಿನ ಸ್ಥಾನಗಳಿಸುವ ಮೂಲಕ ಮತ್ತೆ ಹೆಚ್.ಡಿ.ಕುಮಾರಸ್ವಾಮಿ ರವರು ಮುಖ್ಯಮಂತ್ರಿಯಾಗುವದು ಖಚಿತ. ಇದನ್ನು ತಪ್ಪಿಸಲು ಯಾರಿಂದಲೂ ಸಾಧ್ಯವಿಲ್ಲ ಎಂದರು.
ಕೊರಟಗೆರೆ ತಾಲ್ಲೂಕು ಜೆಡಿಎಸ್ ಅಧ್ಯಕ್ಷ ಕಾಮರಾಜು ಮಾತನಾಡಿ, ಕ್ಷೇತ್ರದಲ್ಲಿ ಜೆಡಿಎಸ್ ಪಕ್ಷದಲ್ಲಿ ನಾಯಕರ ಕೊರತೆ ಇದ್ದು, ಜಿ.ಪಂ. ಮಾಜಿ ಸದಸ್ಯ ಪಿ.ಎನ್.ಕೃಷ್ಣಮೂರ್ತಿ ರವರು ಕಾಂಗ್ರೆಸ್ ಪಕ್ಷವನ್ನು ತೊರೆದು ಮಾಜಿ ಮುಖ್ಯಮಂತ್ರಿ ಹಾಗೂ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ರವರ ಮಾರ್ಗದರ್ಶನದಂತೆ ಜೆಡಿಎಸ್ ಪಕ್ಷಕ್ಕೆ ಸೇರ್ಪಡೆಯಾಗಿರುವುದರಿಂದ ಕ್ಷೇತ್ರದಲ್ಲಿ ಸಂಘಟನೆಗೆ ಬಲ ಬಂದಿದ್ದು ಕ್ಷೇತ್ರದ ಎಲ್ಲ ಕಾರ್ಯಕರ್ತರು ಪಿ.ಎನ್.ಕೃಷ್ಣಮೂರ್ತಿ ರವರ ನೇತೃತ್ವದಲ್ಲಿ ಪಕ್ಷದ ಸಂಘಟನೆಗೆ ಮುಂದಾಗಿದ್ದು ಅವರ ಮಾರ್ಗದರ್ಶನದಲ್ಲಿ ಮುಂದಿನೆ ವಿಧಾನಸಭಾ ಕ್ಷೇತ್ರ ಸೇರಿದಂತೆ ಎಲ್ಲ ಸ್ಥಳೀಯ ಚುನಾವಣೆಗಳಲ್ಲಿ ಜೆಡಿಎಸ್ ಪಕ್ಷದ ಅಭ್ಯರ್ಥಿಗಳನ್ನು ಗೆಲ್ಲಿಸುವುದಾಗಿ ತಿಳಿಸಿದರು.
ಮಾಜಿ ಅಧ್ಯಕ್ಷ ಜೆ.ಎನ್.ನರಸಿಂಹರಾಜು ಮಾತನಾಡಿ, ಕೊರಟಗೆರೆ ಕ್ಷೇತ್ರದಲ್ಲಿ ಜೆಡಿಎಸ್ ಪಕ್ಷ ಸದೃಡವಾಗಿದೆ ಎನ್ನುವುದಕ್ಕೆ ತಾಲ್ಲೂಕಿನ ೨೪ ಗ್ರಾ.ಪಂ.ಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಜೆಡಿಎಸ್ ಪಕ್ಷದ ಬೆಂಬಲಿತ ಅಭ್ಯರ್ಥಿಗಳೇ ಅಧ್ಯಕ್ಷರಾಗಿರುವುದು ಹಾಗೂ ಕೊರಟಗೆರೆ ಪಟ್ಟಣ ಪಂಚಾಯ್ತಿಯಲ್ಲೂ ಜೆಡಿಎಸ್ ಪಕ್ಷದ ಅಭ್ಯರ್ಥಿಗಳೇ ಅಯ್ಕೆಯಾಗಿರುವುದರೊಂದಿಗೆ ಕಳೆದ ಹಾಲು ಒಕ್ಕೂಟದ ಚುನಾವಣೆಯಲ್ಲಿ ಜೆಡಿಎಸ್ ಪಕ್ಷದ ಅಭ್ಯರ್ಥಿ ಜಯಗಳಿಸಿರುವುದು ಸಾಕ್ಷಿಯಾಗಿದ್ದು ಪಿ.ಎನ್.ಕೃಷ್ಣಮೂರ್ತಿ ರವರು ಪಕ್ಷಕ್ಕೆ ಬಂದಿರುವುದು ಪಕ್ಷಕ್ಕೆ ಇನ್ನು ಹೆಚ್ಚಿನ ಬಲ ಬಂದಿದ್ದು ಮುಂದಿನ ದಿನಗಳಲ್ಲಿ ಪಕ್ಷದ ಸಂಘಟನೆ ಮಾಡಲಾಗುವುದು ಎಂದು ತಿಳಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಜೆಡಿಎಸ್ ಕಾರ್ಯಾದ್ಯಕ್ಷ ಲಕ್ಷ್ಮೀಶ್, ಪಿ.ಎಲ್.ಡಿ.ಬ್ಯಾಂಕ್ ಅಧ್ಯಕ್ಷ ಚಿಕ್ಕರಂಗಯ್ಯ, ರಮೇಶ್, ಮಾವತ್ತೂರು ಮಂಜುನಾಥ್, ರಂಗಯ್ಯ, ಆಶ್ವತ್ಥ್‌ನಾರಾಯಣರಾಜು, ಕೆ.ಎನ್.ಲಕ್ಷ್ಮಿನಾರಾಯಣ್, ಪುಟ್ಟನರಸಪ್ಪ, ವಿದ್ಯಾರ್ಥಿ ಘಟಕದ ಅಧ್ಯಕ್ಷ ಸಂತೋಷ್, ದೊಡ್ಡಯ್ಯ, ಕುರುಬರಹಳ್ಳಿ ಜಗದೀಶ್, ನಾಗರಾಜು, ಗುಂಡಿನಪಾಳ್ಯ ರಮೇಶ್, ಕಾಂತರಾಜು, ಹುಲಿಕುಂಟೆ ಶ್ರೀಧರ್, ಮರುಡಯ್ಯ, ಕಾಕಿಮಲ್ಲಯ್ಯ ಮತ್ತಿತರರು ಉಪಸ್ಥಿತರಿದ್ದರು.


































