
ಬೀದರ, ನ ೭ : ಜಿಲ್ಲೆಯಲ್ಲಿ ಯಾವುದೇ ತರಹದ ಕುಡಿಯುವ ನೀರಿನ ಸಮಸ್ಯೆಯಾದರೆ ೨೪ ಗಂಟೆಯೊಳಗೆ ನೀರಿನ ವ್ಯವಸ್ಥೆ ಕಲ್ಪಿಸಬೇಕು ಹಾಗೂ ಬರಗಾಲವನ್ನು ಎದುರಿಸಲು ನಮ್ಮ ಜಿಲ್ಲೆಗೆ ಈಗಾಗಲೇ ₹೧೦ ಕೋಟಿ ಅನುದಾನ ನೀಡಲಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಹಾಗೂ ಬೀದರ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.
ಅವರು ಶುಕ್ರವಾರ ಜಿಲ್ಲಾ ಪಂಚಾಯತ್ ಕಚೇರಿ ಸಭಾಂಗಣದಲ್ಲಿ ನಡೆದ ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ ತ್ರೈಮಾಸಿಕ (ಕೆಡಿಪಿ) ಸಭೆಯ ಅಧ್ಯಕ್ಷತೆವಹಿಸಿ ವಿವಿಧ ಇಲಾಖೆಯ ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳ ಪ್ರಗತಿ ಪರಿಶೀಲನೆ ನಡೆಸಿ ಮಾತನಾಡಿದರು.
ಗ್ರಾಮ ಹಾಗೂ ನಗರಗಳಲ್ಲಿ ನೀರಿನ ತೊಂದರೆ ಕಂಡುಬAದ ತಕ್ಷಣ ಟ್ಯಾಂಕರ್ಗಳ ಮೂಲಕ, ಬೋರ್ವೆಲ್ಗಳನ್ನು ಬಾಡಿಗೆಗೆ ಪಡೆದು ಅಥವಾ ಹೊಸ ಬೋರ್ವೆಲ್ಗಳನ್ನು ಕೊರೆಸುವ ಮೂಲಕ ಸಾರ್ವಜನಿಕರಿಗೆ ತಕ್ಷಣವೇ ನೀರು ಪೂರೈಸಲು ಕ್ರಮಕೈಗೊಳ್ಳಬೇಕೆಂದರು. ಮುಂಗಾರು ಮಳೆಯ ವೈಫಲ್ಯದಿಂದ ಎದುರಾಗಿರುವ ಸವಾಲುಗಳನ್ನು ಸಮರ್ಥವಾಗಿ ಎದುರಿಸಲು ಸರ್ಕಾರ ಸಂಪೂರ್ಣ ಬದ್ಧವಾಗಿದೆ ಎಂದು ಅವರು ಹೇಳಿದರು.
ಜಿಲ್ಲೆಯ ರೈತರಿಗೆ ೭ ಗಂಟೆಗಳ ಕಾಲ ಸಮರ್ಪಕವಾಗಿ ವಿದ್ಯುತ್ ಒದಗಿಸಬೇಕು, ಯಾವುದೇ ಲೈನ್ ಮ್ಯಾನ್ ಮೆರೆಯವರಿಗೆ ಕಂಬ ಹತ್ತಿಸದಂತೆ ನಿಗಾವಹಿಸಬೇಕು, ಬಾಗಿದ ಕಂಬಗಳನ್ನು ಹಾಗೂ ಜೋತು ಬಿದ್ದ ತಂತಿಗಳನ್ನು ಸರಿಪಡಿಸಲು ಕ್ರಮವಹಿಸಬೇಕು, ವಿದ್ಯುತ್ ತಗುಲಿ ಸಾವನ್ನಪ್ಪಿದ ಕುಟುಂಬಗಳಿಗೆ ಪರಿಹಾರ ಒದಗಿಸಬೇಕೆಂದು ಅಧಿಕಾರಿಗಳಿಗೆ ನಿರ್ದೇಶ ನೀಡಿದರು.
ಜಿಲ್ಲೆಯಲ್ಲಿ ಎದುರಾಗಿರುವ ತೀವ್ರ ಬರಗಾಲದಿಂದಾಗಿ ಹೆಸರು, ಉದ್ದು, ಸೋಯಾಬೀನ್ ಹಾಗೂ ತೊಗರಿ ಬೆಳೆಗಳು ಸಂಪೂರ್ಣ ಹಾನಿಗೊಳಗಾಗಿದ್ದು, ಸಂಕಷ್ಟದಲ್ಲಿರುವ ಅರ್ಹ ರೈತರಿಗೆ ತಕ್ಷಣವೇ ಬೆಳೆ ವಿಮೆ ಪರಿಹಾರ ಜಮೆ ಮಾಡುವಂತೆ ವಿಮಾ ಕಂಪನಿಗಳಿಗೆ ಕಟ್ಟುನಿಟ್ಟಿನ ಎಚ್ಚರಿಕೆ ನೀಡಲಾಗಿದೆ. ರೈತರ ಹಿತಾಸಕ್ತಿ ರಕ್ಷಣೆಯಲ್ಲಿ ಯಾವುದೇ ರಾಜಿ ಇಲ್ಲ, ಪರಿಹಾರ ನೀಡಲು ವಿಳಂಬ ಅಥವಾ ನಿರ್ಲಕ್ಷ್ಯ ವಹಿಸಿದರೆ ಸಂಬAಧಪಟ್ಟ ಕಂಪನಿಗಳ ವಿರುದ್ಧ ಕಾನೂನು ಪ್ರಕಾರ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.
ಸಭೆಯಲ್ಲಿ ಹಾಜರಿದ್ದ ಬೀದರ ದಕ್ಷಿಣ ಕ್ಷೇತ್ರದ ಶಾಸಕ ಶೈಲೇಂದ್ರ ಬೆಲ್ದಾಳೆ ಮಾತನಾಡಿ, ನಮ್ಮ ಕ್ಷೇತ್ರದ ರೈತರು ಬೇವಿನ ಕೊರತೆ ಎದುರಿಸುತ್ತಿದ್ದಾರೆ, ಪಶುವೈದ್ಯಕಿಯ ಆಸ್ಪತ್ರೆಗಳಲ್ಲಿ ಔಷದಿ ಸಿಗುತ್ತಿಲ್ಲ, ನನ್ನ ಕ್ಷೇತ್ರದ ೯ ಹಳ್ಳಿಗಳು ಮಹಾನಗರ ಪಾಲಿಕೆ ವ್ಯಾಪ್ತಿಗೆ ಬಂದಿವೆ ಆದರೆ ಅಲ್ಲಿ ಯಾವುದೇ ಅಭಿವೃದ್ಧಿ ಕೆಲಸಗಳು ಆಗುತ್ತಿಲ್ಲ, ಬಗದಲ್ ಬ್ರಿಡ್ಜ್ ಶೀಥಿಲಗೊಂಡಿದೆ, ಮಾಂಜಾ ದಾರದಿಂದ ಮೃತಪಟ್ಟ ಮೃತನ ಕುಟುಂಬಕ್ಕೆ ಹೆಚ್ಚಿನ ಪರಿಹಾರ ನೀಡಬೇಕು, ಬ್ರಿಮ್ಸ್ ನಲ್ಲಿರುವ ಕ್ಯಾತ್ ಲ್ಯಾಬ್ ಆರಂಭಿಸಬೇಕು, ಬಸ್ ಸಮಸ್ಯೆ ಸೇರಿದಂತೆ ಹಲವು ಸಮಸ್ಯೆಗಳ ಬಗ್ಗೆ ಸಚಿವರ ಗಮನಕ್ಕೆ ತಂದರು, ಇದನ್ನು ಆಲಿಸಿದ ಸಚಿವರು, ಈ ಎಲ್ಲಾ ಸಮಸ್ಯೆಗಳಿಗೆ ಪರಿಹಾರ ಒದಗಿಸುವಂತೆ ಸಂಬAದಿಸಿದ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ವಿಧಾನ ಪರಿಷತ್ ಸದಸ್ಯ ಚಂದ್ರಶೇಖರ ಪಾಟೀಲ್ ಮಾತನಾಡಿ, ರೈತರ ಜೀವನಾಡಿಯಾದ ಬಿಎಸ್ಎಸ್ ಕೆ ಕಾರ್ಖಾನೆ ಪುನಾರಂಭಿಸಿಬೇಕು, ಹುಮನಾಬಾದನಲ್ಲಿರುವ ಅನೇಕ ಕೆಮಿಕಲ್ ಕಾರ್ಖಾನೆಗಳಿಂದ ಜನರ ಆರೋಗ್ಯದ ಮೇಲೆ ಗಂಭೀರ ಪರಿಣಾಮ ಬಿರುತ್ತಿದೆ ಆದ್ದರಿಂದ ಇವುಗಳ ಮೇಲೆ ಕ್ರಮ ತೆಗೆದುಕೊಳ್ಳಬೇಕು ಹಾಗೆ ನಮ್ಮ ತಾಲೂಕಿನಲ್ಲಿ ಒಬ್ಬ ಗುತ್ತಿಗೆದಾರನಿಗೆ ೧೫೦ ಕೋಟಿ ರೂ.ಕಾಮಗಾರಿ ಟೆಂಡರ್ ನೀಡಲಾಗಿದೆ ಆದರೆ ಆ ಗುತ್ತಿಗೆದಾರ ಎಲ್ಲಿಯೂ ಕೆಲಸ ಪೂರ್ತಿ ಮಾಡಿಲ್ಲ, ಆದರೂ ಇನ್ನು ಆತನಿಗೆ ಟೆಂಡರ್ ನೀಡಲಾಗುತ್ತಿದೆ. ಇತ್ತೀಚಿಗೆ ಪಿಜಿಆರ್ ಕಂಪನಿಯಲ್ಲಿ ಬೈಲರ್ ಬ್ಲಾಸ್ಟ್ ಆಗಿ ಓರ್ವ ಕಾರ್ಮಿಕನ ಸಂಪೂರ್ಣ ಮೈ ಸುಟ್ಟು ಹೋಗಿದೆ ಆದರೂ ಎಫ್ ಐ ಆರ್ ಆಗಿಲ್ಲ, ಜೆಜೆಎಂ ಕಾಮಗಾರಿಯಲ್ಲಿ ಅಕ್ರಮ ನಡೆದಿದೆ ಎಂದು ಸಚಿವರ ಗಮನಕ್ಕೆ ತಂದರು ಇದಕ್ಕೆ ಪ್ರತಿಕ್ರಿಯೆ ನೀಡಿದ ಸಚಿವರು, ಕೆಮಿಕಲ್ ಕಂಪನಿಗಳ ವಿರುದ್ಧ ಕ್ರಮ ತೆಗೆದುಕೊಳ್ಳುವಂತೆ, ಪಿಜಿ ಆರ್ ಕಂಪನಿ ಎಂ.ಡಿ ವಿರುದ್ಧ ಎಫ್ ಐ ಆರ್ ದಾಖಲಿಸುವಂತೆ ಹಾಗೂ ಕೆಲಸ ಪೂರ್ಣವಾಗುವವರೆಗೆ ಗುತ್ತಿಗೆದಾರನ ಬಿಲ್ಲು ನಿಲ್ಲುಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ ಅವರು ಜೆಜೆಎಂ ಕಾಮಗಾರಿ ಅಕ್ರಮದ ಬಗ್ಗೆ ತನಿಖೆ ನಡೆಸಿ ಕ್ರಮವಹಿಸುವುದಾಗಿ ಹಾಗೂ ಬಿಎಸ್,ಎಸ್.ಕೆ ಕಾರ್ಖಾನೆ ಪುನಾರಂಭಕ್ಕೆ ಪ್ರಯತ್ನಿಸಲಾಗುವುದು ಎಂದು ತಿಳಿಸಿದರು.
ಸಂಸದ ಸಾಗರ ಖಂಡ್ರೆ ಮಾತನಾಡಿ, ಹೈವೇಯಲ್ಲಿರುವ ಬ್ರಿಡ್ಜ್ ಗಳ ಬಳಿ ಲೈಟ್ ವ್ಯವಸ್ಥೆ ಇಲ್ಲ ಇದರಿಂದ ಅಪಘಾತ ಸಂಭವಿಸುತ್ತಿವೆ, ಮನ್ನಾಖೇಳಿಯಲ್ಲಿ ಸ್ಥಳೀಯ ಸಂಸ್ಥೆಯಿAದ ನಿರ್ಮಿಸಲಾದ ಅಂಗಡಿಗಳನ್ನು ಸರಿಯಾದ ರೀತಿಯಲ್ಲಿ ಹಂಚಿಕೆ ಮಾಡಿಲ್ಲ ಸೇರಿದಂತೆ ಹಲವು ಸಮಸ್ಯೆಗಳನ್ನು ಸಚಿವರ ಗಮನಕ್ಕೆ ತಂದರು, ಇದಕ್ಕೆ ಪ್ರತಿಕ್ರಿಯೆ ನೀಡಿದ ಸಚಿವರು ಎಲ್ಲಾ ಸಮಸ್ಯೆಗಳ ಪರಿಹಾರಕ್ಕೆ ಕ್ರಮವಹಿಸುವಂತೆ ಹಾಗೂ ಎಸ್ಪಿಯವರಿಗೆ ಅಪಘಾತ ತಡೆಗೆ ವಹಿಸಬಹುದಾದ ಕ್ರಮಗಳ ಬಗ್ಗೆ ವರದಿ ನೀಡುವಂತೆ, ಮನ್ನಾಖೇಳಿ ಅಕ್ರಮದ ಬಗ್ಗೆ ತನಿಖೆ ಮಾಡುವಂತೆ ಅಧಿಕಾರಿಗಳು ಸೂಚನೆ ನೀಡಿದರು.
ಔರಾದ ಶಾಸಕ ಪ್ರಭು ಚೌವ್ಹಾಣ ಮಾತನಾಡಿ, ಔರಾದ ಪುರಸಭೆಯಲ್ಲಿ ಖಾಯಂ ಅಧಿಕಾರಿ ಇಲ್ಲಾ ಇದರಿಂದ ಕೆಲಸ ಕಾರ್ಯಗಳು ಮಂದಗತಿಯಲ್ಲಿ ಸಾಗುತ್ತಿವೆ, ನಮ್ಮ ಕ್ಷೇತ್ರದಲ್ಲಿ ಕುಡಿಯುವ ನೀರಿನ ಸಮಸ್ಯೆ ಕಾಡುತ್ತಿದೆ, ಕಾರಂಜಾದಿAದ ಕೆರೆ ತುಂಬುವ ಯೋಜನೆ ಆಮೇಗತಿಯಲ್ಲಿ ಸಾಗುತ್ತಿದೆ ಎಂದು ಸಚಿವರಿಗೆ ತಿಳಿಸಿದರು, ಇದಕ್ಕೆ ಉತ್ತರ ನೀಡಿದ ಸಚಿವರು ಪರಿಹಾರಕ್ಕೆ ಕ್ರಮವಹಿಸಲಾಗುವುದು ಎಂದು ಭರವಸೆ ನೀಡಿದರು.
ಬೀದರ ಉತ್ತರ ಕ್ಷೇತ್ರದ ಶಾಸಕ ರಹೀಮ್ ಖಾನ್ ಮಾತನಾಡಿ, ಬೀದರ ನಗರದ ಹಲವು ಬದಲಾವಣೆಗಳಲ್ಲಿ ಕುಡಿಯುವ ನೀರಿನ ಅಭಾವ ಕಾಡುತ್ತಿದೆ ಹಾಗೂ ಹಲವೆಡೆ ಪೈಪ್ ಲೈನ್ ಒಡೆದಿರುವುದರಿಂದ ನೀರು ಪೋಲಾಗುತ್ತಿದೆ, ಇವುಗಳ ನಿರ್ವಹಣೆಗೂ ಯಾರು ಇಲ್ಲಾ. ಸಾಕಷ್ಟು ಕಡೆಗಳಲ್ಲಿ ಬೀದಿ ದೀಪ ಸಹ ಇಲ್ಲಾ ಎಂದು ಸಚಿವರಿಗೆ ತಿಳಿಸಿದರು, ಇದಕ್ಕೆ ಪ್ರತ್ಯುತ್ತರ ನೀಡಿದ ಸಚಿವರು, ನಿರ್ವಹಣೆಯನ್ನು ಯಾರಿಗಾದರೂ ವಹಿಸಲು ಅಗತ್ಯ ಕ್ರಮ ತೆಗೆದುಕೊಳ್ಳಬೇಕು. ಎಲ್ಲೆಲ್ಲಿ ಬೀದಿ ದೀಪಗಳ ಅವಶ್ಯಕತೆ ಇದೆಯೋ ಅಲ್ಲಿ ಅಳವಡಿಸಬೇಕು ಎಂದು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಸಭೆಯಲ್ಲಿ ಡಿಸಿಸಿ ಬ್ಯಾಂಕ್ ಅಧ್ಯಕ್ಷರಾದ ಅಮರ್ ಖಂಡ್ರೆ, ಬೀದರ ಉಸ್ತುವಾರಿ ಕಾರ್ಯದರ್ಶಿ ರಂದೀಪ ಡಿ, ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಗಿತ್ತೆ ಮಾಧವ್ ವಿಠ್ಠಲರಾವ್ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪ್ರದೀಪ್ ಗುಂಟಿ, ಪ್ರಾದೇಶಿಕ ಅರಣ್ಯ ಸಂರಕ್ಷಣಾಧಿಕಾರಿ ಆಶಿಶ್ ರೆಡ್ಡಿ, ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.





















