
ಅಫಜಲಪುರ ;ಮಾ.6: ಯಾರೇ ಆಗಿರಲಿ ಕಾನೂನು ಕೈಗೆತ್ತಿಕೊಳ್ಳಲು ಅವಕಾಶ ಇಲ್ಲ. ಯಾವುದೇ ಅಕ್ರಮ ಚಟುವಟಿಕೆಯಲ್ಲಿ ತೊಡಗಿಸಿಕೊಂಡರೆ ಅಂಥವರ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕಾನೂನಿನ ಪ್ರಕಾರ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಸಿಪಿಐ ಲಖನ್ ಮಸಗುಪ್ಪಿ ರೌಡಿಗಳಿಗೆ ಖಡಕ್ ಎಚ್ಚರಿಕೆ ನೀಡಿದರು.
ಶುಕ್ರವಾರ ಪಟ್ಟಣದ ಪೆÇಲೀಸ್ ಠಾಣೆಯಲ್ಲಿ ರೌಡಿಶೀಟರ್‍ಗಳ ಪರೇಡ್ ನಡೆಸಿ ಮಾತನಾಡಿದ ಅವರು, ಕಾನೂನು ಸುವ್ಯವಸ್ಥೆ ಕಾಪಾಡುವುದು ಅಗತ್ಯವಾಗಿದೆ. ಕಾನೂನು ವಿರೋಧಿ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವ ರೌಡಿಶೀಟರ್‍ಗಳನ್ನು ಪೆÇಲೀಸ್ ಠಾಣೆಗೆ ಕರೆಯಿಸಿ ಪರೇಡ್ ಮಾಡಿ ಬಾಲ ಬಿಚ್ಚದಂತೆ ಎಚ್ಚರಿಕೆ ನೀಡಿದರು.
ಪಟ್ಟಣದಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡಲು ಪೆÇಲೀಸ್ ಇಲಾಖೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುತ್ತಿದೆ. ಜನರಲ್ಲಿ ಭಯ ಹುಟ್ಟಿಸುವುದು, ಜಗಳ ಗಲಾಟೆ, ಅಕ್ರಮ ಚಟುವಟಿಕೆ ನಡೆಸುವವರ ಮೇಲೆ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಸಿಪಿಐ ಮಸಗುಪ್ಪಿ ಹೇಳಿದರು.
ಈ ಸಂದರ್ಭದಲ್ಲಿ ಪಿಎಸ್‍ಐ ಸೋಮಲಿಂಗ ಒಡೆಯರ್, ದೇ. ಗಾಣಗಾಪೂರ ಸ್ಟೇಷನ್ ಪಿಎಸ್‍ಐ ಸಂಗೀತಾ ಶೀಂಧೆ, ರೇವೂರ ಪಿಎಸ್‍ಐ ವಾತ್ಸಲ್ಯ ಬಿರಾದಾರ, ಪೆÇಲೀಸ್ ಸಿಬ್ಬಂದಿ ಉಪಸ್ಥಿತರಿದ್ದರು.






















