Home ಜಿಲ್ಲೆ ಕೃತಕ ಅಭಾವ ಸೃಷ್ಟಿಸಿದರೆ ಕಠಿಣ ಕ್ರಮ

ಕೃತಕ ಅಭಾವ ಸೃಷ್ಟಿಸಿದರೆ ಕಠಿಣ ಕ್ರಮ

ಗದಗ, ಜೂ. 5: ಜಿಲ್ಲೆಯಲ್ಲಿ ಪೆಟ್ರೋಲ್ ಹಾಗೂ ಡೀಸೆಲ್ ಪೂರೈಕೆಯಲ್ಲಾಗುವ ವ್ಯತ್ಯೆಯವನ್ನು ಸಂಬAದಿಸಿದವರು ಸಮರ್ಪಕವಾಗಿ ನಿರ್ವಹಿಸಬೇಕು. ಸಾರ್ವಜನಿಕರು ವದಂತಿಗಳಿಗೆ ಕಿವಿಗೊಟ್ಟು ಆತಂಕದಿAದ ಇಂಧನ ಸಂಗ್ರಹಿಸುವ ಅಗತ್ಯವಿಲ್ಲ ಎಂದು ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ ಹೇಳಿದರು.

ಜಿಲ್ಲಾಡಳಿತ ಭವನದ ಕೋರ್ಟ್ ಹಾಲ್‌ನಲ್ಲಿ ಜರುಗಿದ ಪೆಟ್ರೋಲ್ ಬಂಕ್ ಮಾಲೀಕರು, ತೈಲ ಕಂಪನಿಗಳ ಪ್ರತಿನಿಧಿಗಳು ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಇತ್ತೀಚೆಗೆ ಇಂಧನ ಕೊರತೆ ಕುರಿತು ಸಾರ್ವಜನಿಕರಲ್ಲಿ ಗೊಂದಲ ಉಂಟಾಗಿರುವುದು ಹಾಗೂ ಕೆಲವು ಬಂಕ್‌ಗಳಲ್ಲಿ ಜನದಟ್ಟಣೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಸಭೆ ಕರೆಯಲಾಗಿತ್ತು.

ತೈಲ ಕಂಪನಿಗಳು ಸಮಯಕ್ಕೆ ಸರಿಯಾಗಿ ಇಂಧನ ಪೂರೈಸುವಂತೆ ಕ್ರಮವಹಿಸಬೇಕು. ಪೆಟ್ರೋಲ್ ಬಂಕ್‌ಗಳಲ್ಲಿ ಸಾಕಷ್ಟು ದಾಸ್ತಾನು ಇದ್ದರೂ ಸಾರ್ವಜನಿಕರಿಗೆ ಇಂಧನ ನೀಡದೆ ಬಂಕ್ ಮುಚ್ಚುವುದು ಅಥವಾ “ಇಂಧನ ಲಭ್ಯವಿಲ್ಲ” ಎಂಬ ಫಲಕ ಹಾಕಿ ಕೃತಕ ಅಭಾವ ಸೃಷ್ಟಿಸುವುದನ್ನು ಯಾವುದೇ ಕಾರಣಕ್ಕೂ ಸಹಿಸಲಾಗುವುದಿಲ್ಲ ಎಂದು ಜಿಲ್ಲಾಧಿಕಾರಿಗಳು ಎಚ್ಚರಿಕೆ ನೀಡಿದರು.

ಇಲಾಖೆಯ ಆಟೋಮೇಷನ್ ವ್ಯವಸ್ಥೆಯ ಮೂಲಕ ಬಂಕ್‌ಗಳ ದಾಸ್ತಾನು ಸ್ಥಿತಿಯನ್ನು ಆನ್‌ಲೈನ್‌ನಲ್ಲೇ ಪರಿಶೀಲಿಸಲು ಅವಕಾಶವಿದ್ದು, ನಿಯಮ ಉಲ್ಲಂಘಿಸುವ ಡೀಲರ್‌ಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದರು.

ಜಿಲ್ಲಾಡಳಿತ ಪೆಟ್ರೋಲ್ ಬಂಕ್‌ಗಳಿಗೆ ಇಂಧನ ಸರಬರಾಜಿನಲ್ಲಿ ಅಗತ್ಯ ಸಹಕಾರ ನೀಡಲು ಸಿದ್ಧವಿದ್ದು, ಬಂಕ್ ಮಾಲೀಕರು ಸಹ ಸರ್ಕಾರದೊಂದಿಗೆ ಸಮನ್ವಯದಿಂದ ಕಾರ್ಯನಿರ್ವಹಿಸಿ ಸಾರ್ವಜನಿಕರಿಗೆ ಯಾವುದೇ ತೊಂದರೆ ಆಗದಂತೆ ಇಂಧನ ವಿತರಣೆಯನ್ನು ಸಮರ್ಪಕವಾಗಿ ನಿರ್ವಹಿಸಬೇಕು ಎಂದು ಸೂಚಿಸಿದರು.

ಇಂಧನ ಕೊರತೆಯಂತಹ ಪರಿಸ್ಥಿತಿಯನ್ನು ಸಮರ್ಥವಾಗಿ ನಿಭಾಯಿಸುವುದು ಎಲ್ಲರ ಜವಾಬ್ದಾರಿಯಾಗಿದ್ದು, ಇಂಡೆAಟ್ ಆಧಾರದ ಮೇಲೆ ಆದ್ಯತೆಯ ಕ್ರಮದಲ್ಲಿ ಇಂಧನ ಪೂರೈಕೆ ಆಗಬೇಕು. ಎಲ್ಲರಿಗೂ ಸಮಾನ ಅವಕಾಶ ದೊರೆಯುವಂತೆ ವಿತರಣಾ ವ್ಯವಸ್ಥೆ ಇರಬೇಕು ಎಂದು ಹೇಳಿದರು.

ದೈನಂದಿನ ವಾಹನ ಸವಾರರಿಗೆ ಎಂದಿನAತೆ ಯಾವುದೇ ಅಡೆತಡೆಯಿಲ್ಲದೆ ಇಂಧನ ಪೂರೈಸಬೇಕು. ಬಂಕ್‌ಗಳಲ್ಲಿ ಜನಸಂದಣಿ ಹೆಚ್ಚಾದ ಸಂದರ್ಭದಲ್ಲೂ ಸುರಕ್ಷತಾ ಕ್ರಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಿ ಯಾವುದೇ ಅವಘಡ ಸಂಭವಿಸದAತೆ ಮುನ್ನೆಚ್ಚರಿಕೆ ವಹಿಸಬೇಕು ಎಂದು ಡಿಸಿ ಸೂಚಿಸಿದರು.

ಕ್ಯಾನ್ ಹಾಗೂ ಬ್ಯಾರೆಲ್‌ಗಳಲ್ಲಿ ಇಂಧನ ಮಾರಾಟ ಮಾಡುವುದನ್ನು ನಿರ್ಬಂಧಿಸಲಾಗಿದೆ ಎಂದು ಸ್ಪಷ್ಟಪಡಿಸಿದ ಜಿಲ್ಲಾಧಿಕಾರಿಗಳು, ಆಸ್ಪತ್ರೆಗಳು, ಎಟಿಎಂ ಕೇಂದ್ರಗಳು, ಮೊಬೈಲ್ ಟವರ್‌ಗಳು ಹಾಗೂ ಇತರೆ ಅಗತ್ಯ ಸೇವೆಗಳ ಜನರೇಟರ್‌ಗಳಿಗೆ ಡೀಸೆಲ್ ಅನಿವಾರ್ಯವಾಗಿದ್ದಲ್ಲಿ ಮಾತ್ರ ಸಂಬAಧಪಟ್ಟವರು ಸ್ಥಳೀಯ ತಹಶೀಲ್ದಾರ್ ಅಥವಾ ಜಿಲ್ಲಾಡಳಿತದಿಂದ ಅನುಮತಿ ಪತ್ರ ಪಡೆದುಕೊಳ್ಳಬೇಕು. ಆಹಾರ ಇಲಾಖೆ ಅಥವಾ ಕಂದಾಯ ಇಲಾಖೆಯ ಅನುಮೋದನೆ ಪಡೆದವರಿಗೆ ಮಾತ್ರ ಕ್ಯಾನ್ ಅಥವಾ ಬ್ಯಾರೆಲ್ ಮೂಲಕ ಇಂಧನ ವಿತರಿಸಬೇಕು ಎಂದು ತಿಳಿಸಿದರು.

ಸರ್ಕಾರದ ನಿಯಮಾವಳಿಗಳ ಅನುಸಾರವೇ ಇಂಧನ ವಿತರಣೆ ನಡೆಯಬೇಕು. ಪರಿಸ್ಥಿತಿಯನ್ನು ಅರ್ಥೈಸಿಕೊಂಡು ಬಂಕ್ ಮಾಲೀಕರು ಜವಾಬ್ದಾರಿಯುತವಾಗಿ ಕಾರ್ಯನಿರ್ವಹಿಸಬೇಕು. ನಿಯಮಗಳನ್ನು ಪಾಲಿಸದೆ ಸಾರ್ವಜನಿಕರಿಗೆ ತೊಂದರೆ ಉಂಟುಮಾಡುವ ಬಂಕ್‌ಗಳ ವಿರುದ್ಧ ಸರ್ಕಾರ ಅಗತ್ಯ ಕ್ರಮ ಕೈಗೊಳ್ಳುವ ಸಾಧ್ಯತೆಯಿದೆ ಎಂದು ಅವರು ಎಚ್ಚರಿಕೆ ನೀಡಿದರು.

ಸಭೆಯಲ್ಲಿ ಭಾಗವಹಿಸಿದ್ದ ಪೆಟ್ರೋಲ್ ಬಂಕ್ ಮಾಲೀಕರು ಮತ್ತು ಪ್ರತಿನಿಧಿಗಳು ತಮ್ಮ ಸಮಸ್ಯೆಗಳು ಹಾಗೂ ಬೇಡಿಕೆಗಳನ್ನು ಜಿಲ್ಲಾಧಿಕಾರಿಗಳ ಗಮನಕ್ಕೆ ತಂದರು. ವಿಶೇಷವಾಗಿ ಹುಬ್ಬಳ್ಳಿಯಿಂದ ಇಂಧನ ಟ್ಯಾಂಕರ್‌ಗಳು ಬರುವಾಗ ಸಂಚಾರ ದಟ್ಟಣೆಯಿಂದ ಉಂಟಾಗುವ ತೊಂದರೆಗಳನ್ನು ನಿವಾರಿಸಲು ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದರು.

ಸಭೆಯಲ್ಲಿ ಆಹಾರ ಇಲಾಖೆ ಉಪನಿರ್ದೇಶಕರು, ತೈಲ ಕಂಪನಿಗಳ ಸೇಲ್ಸ್ ಅಧಿಕಾರಿಗಳು, ಪೆಟ್ರೋಲ್ ಬಂಕ್ ಮಾಲೀಕರು, ಆಹಾರ ಇಲಾಖೆ ಸೇರಿದಂಯೆ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು.