Home ಮುಖಪುಟ ಸುದ್ದಿ ಜನಿವಾರ ತೆಗೆಸಿದ್ದರೆ ಕಠಿಣ ಕ್ರಮ

ಜನಿವಾರ ತೆಗೆಸಿದ್ದರೆ ಕಠಿಣ ಕ್ರಮ

ಬೆಂಗಳೂರು,ಏ.೨೪-ಸಿಇಟಿ ಪರೀಕ್ಷೆ ಬರೆಯಲು ಬಂದಿದ್ದ ವಿದ್ಯಾರ್ಥಿಯ ಜನಿವಾರ ತೆಗೆಯಿಸಿ ಪರೀಕ್ಷೆ ಬರೆಯಲು ಅವಕಾಶ ನೀಡಲಾಗಿದೆ ಎಂಬ ಆರೋಪದ ಕುರಿತು ಉನ್ನತ ಶಿಕ್ಷಣ ಸಚಿವ ಎಂ.ಸಿ. ಸುಧಾಕರ್ ಪ್ರತಿಕ್ರಿಯಿಸಿದ್ದು, ಈ ವಿಷಯ ಇನ್ನೂ ಕೆಇಎ ಅಧಿಕಾರಿಗಳ ಗಮನಕ್ಕೆ ಬಂದಿಲ್ಲ. ಇಂತಹದ್ದೇನಾದರೂ ಸಂಭವಿಸಿದರೆ ಸಂಬಂಧಪಟ್ಟ ಅಧಿಕಾರಿಗಳು ಮತ್ತು ನೌಕರರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ಸ್ಪಷ್ಟಪಡಿಸಿದ್ದಾರೆ.


ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸಿಇಟಿ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಡ್ರೆಸ್ ಕೋಡ್ ನಿಯಮವಿದ್ದು, ಈ ನಿಯಮದ ಬಗ್ಗೆ ಅಧಿಕಾರಿಗಳೇ ನಿರ್ಧಾರ ತೆಗೆದುಕೊಳ್ಳುತ್ತಾರೆ.

ಆದರೆ, ಇಂದು ನಡೆದ ಸಿಇಟಿ ಪರೀಕ್ಷೆಯ ಸಮಯದಲ್ಲಿ, ವಿದ್ಯಾರ್ಥಿಗಳ ಜನಿವಾರ ತೆಗೆಯಿಸಿ ಪರೀಕ್ಷೆ ಬರೆಯಲು ಅವಕಾಶ ನೀಡಲಾಗಿದೆ ಎಂಬ ವಿಚಾರ ನನ್ನ ಗಮನಕ್ಕೆ ಬಂದಿಲ್ಲ. ಇದು ಸಂಭವಿಸಿದಲ್ಲಿ, ಜನವರಿಯಲ್ಲಿ ಮಾಹಿತಿ ನೀಡಿದ ಅಧಿಕಾರಿಗಳು ಮತ್ತು ನೌಕರರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಉನ್ನತ ಶಿಕ್ಷಣ ಸಚಿವ ಎಂ.ಸಿ. ಸುಧಾಕರ್ ಹೇಳಿದ್ದಾರೆ.