Home ಜಿಲ್ಲೆ ಕಲಬುರಗಿ ನೇಣು ಹಾಕಿಕೊಂಡು ವಿದ್ಯಾರ್ಥಿನಿ ಆತ್ಮಹತ್ಯೆ

ನೇಣು ಹಾಕಿಕೊಂಡು ವಿದ್ಯಾರ್ಥಿನಿ ಆತ್ಮಹತ್ಯೆ

ಕಲಬುರಗಿ,ಜೂ.24-ಹೊಟ್ಟೆ ನೋವು ತಾಳದೆ ನೇಣು ಹಾಕಿಕೊಂಡು ಪಿಯುಸಿ ಪ್ರಥಮ ವರ್ಷದಲ್ಲಿ ಓದುತ್ತಿದ್ದ ವಿದ್ಯಾರ್ಥಿನಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶ್ರೀನಿವಾಸ ಸರಡಗಿ ಗ್ರಾಮದಲ್ಲಿ ನಡೆದಿದೆ.
ಕುಮಾರಿ ನಾಗಮ್ಮ ಅಲಿಯಾಸ್ ಲಕ್ಷ್ಮಿ ತಂದೆ ಲಕ್ಷ್ಮಿಕಾಂತ ಶ್ರೀಮನಿ (17) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ.
ನಾಗಮ್ಮ ಸುಮಾರು ವರ್ಷಗಳಿಂದ ಪಿರಿಯಡ್ಸ್ ಸಮಯದಲ್ಲಿ ಹೊಟ್ಟೆ ನೋವಿನಿಂದ ಬಳಲುತ್ತಿದ್ದಳು. ಆಸ್ಪತ್ರೆಗೆ ತೋರಿಸಿದ್ದರೂ ಸಮಸ್ಯೆ ಕಡಿಮೆಯಾಗಿರಲಿಲ್ಲ. ಇದೇ ಕಾರಣಕ್ಕೆ ಜಿಗುಪ್ಸೆಗೊಂಡು ಮನೆಯ ಪತ್ರಾ ಶೆಡ್ಡಿನ ಪೈಪಿಗೆ ಸೀರೆಯಿಂದ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ತಿಳಿದುಬಂದಿದೆ. ವಿಶ್ವವಿದ್ಯಾಲಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.