
ಕಲಬುರಗಿ,ನ.6-ನಗರದ ಶಹಾಬಾದ್ ರಸ್ತೆಯಲ್ಲಿರುವ ಡಾ.ಬಿ.ಆರ್.ಅಂಬೇಡ್ಕರ್ ವಸತಿ ನಿಲಯದ ಮೇಲಿಂದ ಬಿದ್ದು ವಿದ್ಯಾರ್ಥಿಯೊಬ್ಬ ಮೃತಪಟ್ಟಿರುವ ಘಟನೆ ನಡೆದಿದೆ.
ನಗರದ ಖಾಸಗಿ ಕಾಲೇಜಿನಲ್ಲಿ ಬಿಎಸ್‍ಸಿ ನರ್ಸಿಂಗ್ ಓದುತ್ತಿದ್ದ ಬೆಣ್ಣೂರ್ ಗ್ರಾಮದ ಮುಜಾಹಿದ್ ಪಟೇಲ್ ತಂದೆ ಮಶಾಕ್ ಪಟೇಲ್ (20) ಮೃತಪಟ್ಟ ವಿದ್ಯಾರ್ಥಿ ಎಂದು ತಿಳಿದುಬಂದಿದೆ.
ಸುದ್ದಿ ತಿಳಿದು ಬ್ರಹ್ಮಪುರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬ್ರಹ್ಮಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆದಿದೆ.





















