Home ಜಿಲ್ಲೆ ಕಲಬುರಗಿ ಬಾವಿಯಲ್ಲಿ ಬಿದ್ದು ವಿದ್ಯಾರ್ಥಿ ಸಾವು

ಬಾವಿಯಲ್ಲಿ ಬಿದ್ದು ವಿದ್ಯಾರ್ಥಿ ಸಾವು

ಕಲಬುರಗಿ,ಫೆ.18-ತಾಲ್ಲೂಕಿನ ಬಬಲಾದ (ಎಸ್) ಗ್ರಾಮದ ಖಾಸಗಿ ಶಾಲೆಯಲ್ಲಿ ಓದುತ್ತಿದ್ದ ವಿದ್ಯಾರ್ಥಿಯೊಬ್ಬ ಶಾಲೆ ಆವರಣದಲ್ಲಿರುವ ಬಾವಿಯಲ್ಲಿ ಬಿದ್ದು ಮೃತಪಟ್ಟಿದ್ದಾನೆ.
ಗುರು ಮೃತಪಟ್ಟ ವಿದ್ಯಾರ್ಥಿ.
ವಿದ್ಯಾರ್ಥಿ ಸಾವಿಗೆ ನಿಖರ ಕಾರಣ ತಿಳಿದುಬಂದಿಲ್ಲ. ಯಾವುದೋ ಕಾರಣಕ್ಕೆ ಮನಸ್ಸಿನ ಮೇಲೆ ಬೇಜಾರು ಮಾಡಿಕೊಂಡು ಬಾವಿಯಲ್ಲಿ ಬಿದ್ದು ಮೃತಪಟ್ಟಿದ್ದಾನೆ ಎಂದು ಬಾಲಕನ ಸಹೋದರಿ ಸುರೇಖಾ ರವಿಚಂದ್ರ ಹಡಪದ ಅವರು ಸಬ್-ಅರ್ಬನ್ ಪೊಲೀಸ್ ಠಾಣೆಯಲ್ಲಿ ಸಲ್ಲಿಸಿರುವ ದೂರಿನಲ್ಲಿ ತಿಳಿಸಿದ್ದಾರೆ. ಸಬ್-ಅರ್ಬನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.