Home ಜಿಲ್ಲೆ ಕಲಬುರಗಿ ವಿದ್ಯಾರ್ಥಿ ಸಂಘದ ಚುನಾವಣೆ

ವಿದ್ಯಾರ್ಥಿ ಸಂಘದ ಚುನಾವಣೆ

ಕಲಬುರಗಿ:ಹೈದರಾಬಾದ್ ಕರ್ನಾಟಕ ಶಿಕ್ಷಣ ಸಂಸ್ಥೆಯ, ಶ್ರೀಮತಿ ವೀರಮ್ಮ ಗಂಗಸಿರಿ ಮಹಿಳಾ ಮಹಾ ವಿದ್ಯಾಲಯದಲ್ಲಿ 2026 – 27 ನೇ ಸಾಲಿನ ವಿದ್ಯಾರ್ಥಿ ಸಂಘದ ಚುನಾವಣೆ ಉತ್ಸವಭರಿತ ಮತ್ತು ಪ್ರಜಾಸತ್ತಾತ್ಮಕ ವಾತಾವರಣದಲ್ಲಿ ನಡೆಯಿತು. ಚುನಾವಣೆಯಲ್ಲಿ ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ತಮ್ಮ ಮತವನ್ನು ಚಲಾಯಿಸಿದರು. ಬಿ ಎ, ಬಿ ಎಸ್ ಸಿ ಮತ್ತು ಬಿ ಕಾಂ ಪ್ರಥಮ, ದ್ವಿತೀಯ ಹಾಗೂ ಅಂತಿಮ ವರ್ಗದ ವಿದ್ಯಾರ್ಥಿನಿಯರು ವರ್ಗ ಪ್ರತಿನಿಧಿಗಾಗಿ ನಾಮಪತ್ರ ಸಲ್ಲಿಸಿ, ಪ್ರಚಾರ ಕೈಗೊಂಡು ಅಭ್ಯರ್ಥಿಗಳನ್ನು ಮತದಾನದ ಮೂಲಕ ವರ್ಗ ಪ್ರತಿನಿಧಿಗಳನ್ನು ಆಯ್ಕೆ ಮಾಡಿದರು. ಈ ಬಾರಿ ಚುನಾವಣೆಯಲ್ಲಿ ಎಲ್ಲಾ ವರ್ಗ ಪ್ರತಿನಿಧಿ ಹುದ್ದೆಗೂ ಬಿರುಸಿನ ಪೈಪೆÇೀಟಿ ನಡೆದಿದ್ದು ಗಮನ ಸೆಳೆಯಿತು. ವಿದ್ಯಾರ್ಥಿಗಳು ಅಭ್ಯರ್ಥಿಗಳ ನಾಯಕತ್ವದ ಗುಣ, ಜವಾಬ್ದಾರಿತನ, ಪ್ರಾಮಾಣಿಕತೆ ಹಾಗೂ ವಿದ್ಯಾರ್ಥಿಗಳ ಹಿತದೃಷ್ಟಿಯನ್ನು ಪರಿಗಣಿಸಿ ತಮ್ಮ ಮತವನ್ನು ಚಲಾಯಿಸಿದರು. ನಂತರ ಮಧ್ಯಾಹ್ನ 2 ಗಂಟೆಗೆ 2026-27ನೇ ಸಾಲಿನ ವಿದ್ಯಾರ್ಥಿ ಸಂಘದ ಉಪಾಧ್ಯಕ್ಷರಾಗಿ ಬಿ ಎಸ್ ಸಿ ಅಂತಿಮ ವರ್ಷದ ವಿದ್ಯಾರ್ಥಿ ಅಕ್ಷತಾ, ಪ್ರಧಾನ ಕಾರ್ಯದರ್ಶಿಯಾಗಿ ಬಿ ಎಸ್ ಸಿ ಅಂತಿಮ ವರ್ಷದ ವಿದ್ಯಾರ್ಥಿನಿ ಪ್ರಿಯಾ, ಸಹ ಕಾರ್ಯದರ್ಶಿಯಾಗಿ ಬಿ ಎ ಅಂತಿಮ ವರ್ಷದ ವಿದ್ಯಾರ್ಥಿನಿಯಾದ ಉಮೈಮಾ ಶಿರಿನ , ಕ್ರೀಡಾ ಮತ್ತು ಸಂಸ್ಕøತಿಕ ಕಾರ್ಯದರ್ಶಿ ಹುದ್ದೆಗೆ ಶ್ರದ್ದಾ ಮತ್ತು ಶ್ವೇತಾ ಎಸ್ ಕೆ ಆಯ್ಕೆ ಪ್ರಕ್ರಿಯೆ ನಡೆಯಿತು. ಒಟ್ಟಾರೆ 2026- 27ನೇ ಸಾಲಿನ ವಿದ್ಯಾರ್ಥಿ ಸಂಘದ ಚುನಾವಣೆಯಲ್ಲಿ ವಿದ್ಯಾರ್ಥಿನಿಯರ ನಾಮಪತ್ರ ಸಲ್ಲಿಕೆ,ನಾಮಪತ್ರ ಹಿಂಪಡೆಯುವುದು,ಠೇವಣಿ ಇಡುವುದು,ಪ್ರಚಾರ, ಮತದಾನ ನಂತರ ಮತ ಎಣಿಕೆ,ಫಲಿತಾಂಶ ಪ್ರಕಟಣೆ,ವಿಜೇತರ ಸಂಭ್ರಮ ಇತ್ಯಾದಿ ಎಲ್ಲಾ ಚಟುವಟಿಕೆಗಳು ಕೂಡ ಅರ್ಥಪೂರ್ಣವಾಗಿ ನಡೆದವು. ಈ ಸಂದರ್ಭದಲ್ಲಿ ಕಾಲೇಜಿನ ಪ್ರಾಚಾರ್ಯರು ಡಾ. ರಾಜೇಂದ್ರ ಕೊಂಡಾ ಸರ್ ಅವರು ವಿದ್ಯಾರ್ಥಿಗಳನ್ನು ಉದ್ದೇಶಿಸಿ ಪ್ರಜಾಪ್ರಭುತ್ವ ಮತ್ತು ಚುನಾವಣೆ ಕುರಿತು ಮಾತನಾಡಿ ವಿದ್ಯಾರ್ಥಿಗಳಿಗೆ ಪೆÇ್ರೀತ್ಸಾಹಿಸಿದರು.
ಕಾಲೇಜಿನ ಚುನಾವಣಾ ಸಂಘದ ಕಾರ್ಯದರ್ಶಿ ಶ್ರೀಮತಿ ಗೀತಾ ಪಾಟೀಲ್ ಹಾಗೂ ಸಂಘದ ಸದಸ್ಯರು ಗಳಾದ ಡಾ. ನಾಗರತ್ನ ಎಸ್, ಶ್ರೀಮತಿ ರೀಟಾ ಕುಲಕರ್ಣಿ, ಮತ್ತು ಶ್ರೀಮತಿ ಅಂಬಿಕಾ ಪಾಟೀಲ್ ಚುನಾವಣೆ ಪ್ರಕ್ರಿಯೆಯನ್ನು ಯಶಸ್ವಿಗೊಳಿಸಿದರು.
ಈ ಚುನಾವಣೆಯಲ್ಲಿ ಕಾಲೇಜಿನ ಎಲ್ಲಾ ಸಿಬ್ಬಂದಿ ವರ್ಗದವರು ಉತ್ಸಾಹದಿಂದ ಪಾಲ್ಗೊಂಡರು ಎಂದು ಕಾಲೇಜಿನ ನ್ಯಾಕ್ ಸಂಯೋಜಕರಾದ ಡಾ.ಮೋಹನರಾಜ ಪತ್ತಾರ ಅವರು ಪತ್ರಿಕಾ ಪ್ರಕಟಣೆಗಾಗಿ ತಿಳಿಸಿದ್ದಾರೆ.