
ಕಲಬುರಗಿ :ಡಿ. 23: ಗುಲಬರ್ಗಾ ವಿಶ್ವವಿದ್ಯಾಲಯದ 2025-26ನೇ ಸಾಲಿನ ಅಂತರ ಮಹಾವಿದ್ಯಾ¯ಯಗಳ ಯುವಜನೋತ್ಸವ ಕಲಬುರಗಿ ವಿಭಾಗದ ಪ್ರಾದೇಶಿಕ ಆಯುಕ್ತರಾದ ಜಹೀರಾ ನಸಿಮ್ ಅವರು ಮುಖ್ಯ ಅತಿಥಿಗಳಾಗಿ ಮಾತನಾಡಿ ಕಲ್ಯಾಣ ಕರ್ನಾಟಕ ಭಾಗವು ಕಲೆ, ಸಂಸ್ಕೃತಿ, ಸಾಹಿತ್ಯ ಮತ್ತು ಐತಿಹಾಸಿಕ ಪರಂಪರೆಯನ್ನು ಹೊಂದಿದೆ. ವಿದ್ಯಾರ್ಥಿಗಳು ಪಠ್ಯದ ಜೊತೆಗೆ ಸಾಂಸ್ಕೃತಿಕ ಚಟುವಟಿಕೆಗಲ್ಲಿ ಕ್ರಿಯಾಶೀಲತೆಯಿಂದ ಭಾಗವಹಿಸಬೇಕು. ಯಾವುದೇ ಸ್ಪರ್ಧೆಯಿರಲಿ ಪ್ರತಿಯೊಬ್ಬ ಸ್ಪರ್ದಿಯು ತಾಳ್ಮೆಯಿಂದ ಪಾಲ್ಗೊಳ್ಳಿ. ಸೋಲು ಮತ್ತು ಗೆಲುವನ್ನು ಸಮಾನವಾಗಿ ಸ್ವೀಕರಿಸುವ ಮನೋಭಾವವನ್ನು ಬೆಳಸಿಕೊಳ್ಳ ಬೇಕು ಎಂದರು.
ಉನ್ನತ ಮಟ್ಟದ ಸಾಧನೆಯನ್ನು ಮಾಡಲು ಸಹನೆ, ತಾಳ್ಮೆ, ಅತೀವ ಆಸಕ್ತಿ ಅಗತ್ಯವಿದೆ. ಸಾಮಾಜಿಕ ಜಾಲತಾಣಗಳಲ್ಲಿ ಕಾಲಹರಣ ಮಾಡಬೇಡಿ. ದೇಶಕ್ಕೆ ಮತ್ತು ಸಮಾಜಕ್ಕೆ ಏನಾದರು ಕೊಡುಗೆಯನ್ನು ನೀಡಲು ನಿರ್ಧರಿಸಿ ಧೃಡ ಸಂಕಲ್ಪವನ್ನು ಮಾಡಬೇಕು ಎಂದು ಸಲಹೆ ನೀಡಿದರು.
ತಾವು ಕೂಡ ಗುಲ್ಬರ್ಗಾ ವಿಶ್ವ ವಿದ್ಯಾಲಯದಲ್ಲಿ ಓದಿದ್ದೇನೆ ಎಂದು ನೆನಪಿಸಿಕೊಂಡ ಅವರು ಇಂದು ಕಲಬುರಗಿಯಲ್ಲಿ ಪ್ರಾದೇಶಿಕ ಆಯುಕ್ತರಾಗಿ ಈ ಭಾಗದ ಸಮಗ್ರ ಅಭಿವೃದ್ಧಿಗೆ ಪ್ರಾಮಾಣಿಕವಾಗಿ ಸೇವೆಯನ್ನು ಸಲ್ಲಿಸುತ್ತಿದ್ದೇನೆ.ಈ ಭಾಗದ ವಿದ್ಯಾರ್ಥಿಗಳು ಕೂಡ ಸಿವಿಲ್ ಸರ್ವಿಸ್ ಪರೀಕ್ಷೆಗಳನ್ನು ಬರೆದ ಹೆಚ್ಚಿನ ಸಾಧನೆಯನ್ನು ಮಾಡಬೇಕು ಎಂದು ಆಶಿಸಿದರು.
ಗುಲಬರ್ಗಾ ವಿಶ್ವವಿದ್ಯಾಲಯದ ಕುಲಪತಿ ಶಶಿಕಾಂತ ಉಡಿಕೇರಿ ಅಧ್ಯಕ್ಷತೆ ವಹಿಸಿ ಮಾತನಾಡಿ ಈ ವರ್ಷದ ಯುವಜನೋತ್ಸವದಲ್ಲಿ 25 ಕ್ಕಿಂತ ಹೆಚ್ಚಿನ ಕಾಲೇಜಿನ ಸುಮಾರು 500 ಸ್ಪರ್ಧಿಗಳು ಭಾಗವಹಿಸಿದ್ದು ತಮ್ಮೆಲ್ಲರ ಸಹಕಾರದಿಂದ ಗುಲಬರ್ಗಾ ವಿಶ್ವವಿದ್ಯಾಲಯ ಯುವಜನೋತ್ಸವ ಇಂಡಿಯಾ ಬುಕ್ ಆಪ್ ರೆಕಾರ್ಡ್ ನಲ್ಲಿ ದಾಖಲೆ ಮಾಡಿದೆ. ಕಲ್ಯಾಣ ಕರ್ನಾಟಕ ಭಾಗದ ಕಲೆ ಸಾಹಿತ್ಯ, ಮತ್ತು ಐತಿಹಾಸಸಿಕ ಪರಂಪರೆ ಯನ್ನು ಉಳಿಸಿ ಬೆಳೆಸುವ ಜವಾಬ್ದಾರಿ ಪ್ರತಿಯೊಬ್ಬರ ಮೇಲಿದೆ ಎಂದು ಹೇಳಿದರು.
ಕುಲಸಚಿವ ಪೆÇ್ರ. ರಮೇಶ್ ಲಂಡನಕರ್ ಯುವಜನೋತ್ಸವ ವರದಿ ಮಂಡಿಸಿದರು. ಗ್ರಂಥಾಲಯದ ಗ್ರಂಥಪಾಲಕ ಡಾ. ಸುರೇಶ್ ಜಂಗೆ ಅತಿಥಿಗಳನ್ನು ಸ್ವಾಗತಿಸಿದರು. ಜೊತೆಗೆ ಗುಲಬರ್ಗಾ ವಿಶ್ವವಿದ್ಯಾಲಯ 2025-26ನೇ ಸಾಲಿನ ಅಂತರ ಮಹಾವಿದ್ಯಾಲಯಗಳ ಯುವಜನೋತ್ಸವ ಇಂಡಿಯನ್ ಬುಕ್ ಅಪ್ ರೆಕಾರ್ಡಗೆ ಸೇರಲ್ಪಟ್ಟಿರುವ ಪ್ರತಿಯನ್ನು ಮಂಡಿಸಿದರು.
ಕಾರ್ಯಕ್ರಮದಲ್ಲಿ ಗುಲಬರ್ಗಾ ವಿಶ್ವವಿದ್ಯಾಲಯ ಕುಲಸಚಿವ ರಮೇಶ ಲಂqನಕರ್, ಮೌಲ್ಯಮಾಪನ ವಿಭಾಗದ ಕುಲಸಚಿವ ಡಾ.ಎನ್.ಜಿ. ಕಣ್ಣೂರು, ವಿತ್ರ ಅಧಿಕಾರಿಗಳಾದ ಜಯಂಬಿಕಾ, ಸಂಶೋಧನ ವಿದ್ಯಾರ್ಥಿ ಒಕ್ಕೂಟದ ಅಧ್ಯಕ್ಷ ಆನಂದ ಮೇತ್ರಿ, ಸಿಂಡಿಕೇಟ್ ಸದಸ್ಯರು ಎಲ್ಲ ವಿಭಾಗದ ಡೀನರುಗಳು, ಪ್ರಾಧ್ಯಾಪಕರುಗಳು ಬೋಧಕ ಮತ್ತು ಭೋಧಕೇತರ ಶಾಲಾ ಕಾಲೇಜುಗಳು ವಿದ್ಯಾರ್ಥಿಗಳು ಸಿಬ್ಬಂಧಿಗಳು ವಿದ್ಯಾರ್ಥಿಗಳು ಭಾಗವಹಿಸಿದ್ದರು























