ಸಮರ್ಪಕ ಸಾರಿಗೆ ಬಸ್ ವ್ಯವಸ್ಥೆ ಕಲ್ಪಿಸಲು ಆಗ್ರಹಿಸಿ ವಿದ್ಯಾರ್ಥಿಗಳಿಂದ ರಸ್ತೆ ತಡೆದು ಪ್ರತಿಭಟನೆ

ಜಮಖಂಡಿ:ಅ.10: ಸಮರ್ಪಕವಾಗಿ ಸಾರಿಗೆ ಬಸ್ ಕಲ್ಪಿಸಲು ಆಗ್ರಹಿಸಿ ಆಲಗೂರ ಗ್ರಾಮದ ಶಾಲಾ ವಿದ್ಯಾರ್ಥಿಗಳು ಬೆಳಗ್ಗೆ ರಸ್ತೆ ತಡೆ ನಡೆಸಿ ಪ್ರತಿಭಟಿಸಿದರು.

ಆಲಗೂರ ಗ್ರಾಮದಿಂದ ಜಮಖಂಡಿ ನಗರಕ್ಕೆ ಶಾಲಾ- ಕಾಲೇಜುಗಳಿಗೆ ತೆರಳುವ ವಿದ್ಯಾರ್ಥಿಗಳು ಸಮರ್ಪಕವಾಗಿ ಬಸ್ ಸೌಲಭ್ಯ ಇಲ್ಲದ ಕಾರಣ ಪರದಾಡುವಂತಾಗಿದೆ. ಶಾಲಾ ಕಾಲೇಜುಗಳಿಗೆ ತೆರಳಲು ಸಾರಿಗೆ ಸಂಸ್ಥೆಯ ಬಸ್‍ಗಳನ್ನೆ? ಅವಲಂಬಿಸಿರುವ ವಿದ್ಯಾರ್ಥಿಗಳು ಸರಿಯಾಗಿ ಬಸ್ ಇಲ್ಲದೆ ಪ್ರತಿದಿನ ಗೋಳಾಡುವಂತಾಗಿದೆ ಎಂದು ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಜಮಖಂಡಿ ಸಾರಿಗೆ ಘಟಕದ ಅಧಿಕಾರಿಗಳ ವಿರುದ್ಧ ಆಕ್ರೊ?ಶ ವ್ಯಕ್ತಪಡಿಸಿದರು.

ವಿಜಯಪುರ ಹೆದ್ದಾರಿಯಲ್ಲಿ ನೂರಾರು ಬಸ್ಸುಗಳು ತೆರಳಿದರು ಯಾವುದೇ ಬಸ್ ಗಳು ಸರಿಯಾಗಿ ನಿಲುಗಡೆಯಾಗದೆ ಶಾಲಾಕಾಲೇಜುಗಳಿಗೆ ಸರಿಯಾದ ಸಮಯಕ್ಕೆ ತೆರಳಲು ಸಾದ್ಯವಾಗುತ್ತಿಲ್ಲ ಎಂದು ವಿದ್ಯಾರ್ಥಿಗಳು ಆಕ್ರೋಶಗೊಂಡ ರಸ್ತೆ ತಡೆ ನಡೆಸಿ ಪ್ರತಿಭಟನೆ ನಡೆಸಿ ಸಮರ್ಪಕವಾಗಿ ಸಾರಿಗೆ ಬಸ್ ವ್ಯವಸ್ಥೆ ಕಲ್ಪಿಸಲು ಒತ್ತಾಯಿಸಿದರು.

ಸ್ಥಳಕ್ಕೆ ಸಾರಿಗೆ ಘಟಕದ ವ್ಯವಸ್ಥಾಪಕ ಗಸ್ತಿ ಆಗಮಿಸಿ, ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗಾಗುತ್ತಿರುವ ತೊಂದರೆ ಆಲಿಸಿ ಸಮರ್ಪಕವಾಗಿ ಬಸ್ ಸೌಲಭ್ಯ ಒದಗಿಸುವದಾಗಿ ಭರವಸೆ ನೀಡಿದರು. ಜಮಖಂಡಿ ಗ್ರಾಮೀಣ ಪೆÇೀಲಿಸ ಠಾಣೆ ಅಪರಾಧ ವಿಭಾಗದ ಪಿಎಸ್‍ಐ ಹೊಸಮನಿ ಮಧ್ಯಸ್ಥಿಕೆಯಲ್ಲಿ ಅಧಿಕಾರಿಗಳು ಲಿಖಿತ ಭರವಸೆ ನೀಡಿದ ಬಳಿಕ ವಿದ್ಯಾರ್ಥಿಗಳು ಪ್ರತಿಭಟನೆ ಹಿಂಪಡೆದುಕೊಂಡರು.