ವಿದ್ಯಾರ್ಥಿಗಳು ನಾಯಕತ್ವ ಗುಣಗಳನ್ನು ಬೆಳಸಿಕೊಳ್ಳಿ

ಗುಳೇದಗುಡ್ಡ,ಜು4: ವಿದ್ಯಾರ್ಥಿಗಳಲ್ಲಿ ನಾಯಕತ್ವದ ಗುಣಗಳನ್ನು ಬೆಳೆಸುವಲ್ಲಿ ಶಾಲಾ ಸಂಸತ್ತು ಮತ್ತು ಚುನಾವಣೆಗಳು ತನ್ನದೇ ಆದ ಪ್ರಮುಖ ಪಾತ್ರವನ್ನು ವಹಿಸುತ್ತವೆ. ಮಕ್ಕಳಲ್ಲಿ ನಾಯಕತ್ವದ ಗುಣಗಳನ್ನು ಬೆಳೆಸುಕೊಳ್ಳಲು ಶಾಲಾ ಸಂಸತ್ತು ಸಹಕಾರಿಯಾಗುತ್ತದೆ ಎಂದು ಬಾಗಲಕೋಟದ ಬಸವೇಶ್ವರ ಪ್ರೌಢಶಾಲೆಯ ಪ್ರಾಚಾರ್ಯ ಪ್ರವೀಣ ಗುಂಡಗಾವಿ ಹೇಳಿದರು.


ಸಮೀಪದ ತೋಗುಣಶಿಯಲ್ಲಿನ ಬಸವೇಶ್ವರ ಅಂತಾರಾಷ್ಟ್ರೀಯ ಪಬ್ಲಿಕ್ ಶಾಲೆಯಲ್ಲಿ ಹಮ್ಮಿಕೊಂಡಿದ್ದ ಕ್ರೀಡಾ ಮತ್ತು ಸಾಂಸ್ಕøತಿಕ ಚಟುವಟಿಕೆಗಳ ಉದ್ಘಾಟನೆ, ಹಾಗೂ ಶಾಲಾ ಸಂಸತ್ತಿಗೆ ಆಯ್ಕೆಯಾದ ವಿದ್ಯಾರ್ಥಿಗಳ ಅಧಿಕಾರ ಪ್ರಧಾನ ಸಮಾರಂಭದಲ್ಲಿ ಅವರು ಮಾತನಾಡಿ, ಕ್ರೀಡೆ ಹಾಗೂ ಸಾಂಸ್ಕೃತಿಕ ಚಟುವಟಿಕೆಗಳು ಶಿಕ್ಷಣದ ಪ್ರಮುಖ ಅಂಗಗಳಾಗಿವೆ. ವಿದ್ಯಾರ್ಥಿಗಳು ಪಠ್ಯದ ಜೊತೆಗೆ ಸಾಂಸ್ಕೃತಿಕ ಹಾಗೂ ಕ್ರೀಡಾ ಚಟುವಟಿಕೆಗಳಲ್ಲಿ ಭಾಗವಹಿಸಬೇಕು ಎಂದು ಹೇಳಿದರು.


ಶಾಲಾ ಸಂಸತ್ತಿಗೆ ಆಯ್ಕೆಯಾದ ವಿದ್ಯಾರ್ಥಿಗಳಿಗೆ ಬಸವೇಶ್ವರ ಅಂತಾರಾಷ್ಟ್ರೀಯ ಪಬ್ಲಿಕ್ ಶಾಲೆ ಪ್ರಾಚಾರ್ಯ ರಾಜಶೇಖರ ಬೆಂಗೊಲಿ ಅವರು ಪ್ರತಿಜ್ಞಾವಿಧಿಯನ್ನು ಬೋಧಿಸಿದರು. ಸಮಾರಂಭದಲ್ಲಿ ಮಾಜಿ ಸೈನಿಕ ಗಂಗಾಧರ ಲಮಾಣಿ, ಶಾಲಾ ಶಿಕ್ಷಕರು ಹಾಗೂ ವಿದ್ಯಾರ್ಥಿಗಳು, ಸಿಬ್ಬಂದಿ ಇದ್ದರು.