
ಕನಕಪುರ: ನಗರದ ಪ್ರತಿಷ್ಠಿತ ಶಾಲೆಗಳಲ್ಲಿ ಒಂದಾದ ಸೆಂಟ್ ಮೈಕಲ್ಸ್ ಇಂಗ್ಲೀಷ್ ಶಾಲೆಯ ವಿದ್ಯಾರ್ಥಿಗಳು ವಿವಿಧ ಜಿಲ್ಲಾಮಟ್ಟದ ಕ್ರೀಡಾ ಕೂಟಗಳ ಸ್ಪರ್ಧೆಗಳಲ್ಲಿ ಪಾಲ್ಗೊಂಡು ಅತ್ಯುತ್ತಮ ಸಾಧನೆ ಮಾಡಿ ಮುಂದಿನ ಹಂತದ ಸ್ಪರ್ಧೆಗಳಿಗೆ ಆಯ್ಕೆಯಾಗಿದ್ದಾರೆ.
೧೭ ವರ್ಷದೊಳಗಿನ ಬಾಲಕರ ಜಿಲ್ಲಾಮಟ್ಟದ ಕ್ರಿಕೆಟ್ ಪಂದ್ಯಾವಳಿಯಲ್ಲಿ ಪ್ರಥಮಸ್ಥಾನವನ್ನು ಪಡೆದು ವಿಭಾಗ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ.
ಚನ್ನಪಟ್ಟಣದಲ್ಲಿ ನಡೆದ ೧೪ ವರ್ಷದೊಳಗಿನ ಬಾಲಕಿಯರ ಚೆಸ್ ವಿಭಾಗದಲ್ಲಿ ೮ನೇ ತರಗತಿಯ ಸಿಂಚನಾ ಡಿ ಅವರು ಜಿಲ್ಲಾಮಟ್ಟದ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನವನ್ನು ಪಡೆದು ರಾಜ್ಯ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ.
ಚನ್ನಪಟ್ಟಣದಲ್ಲಿ ನಡೆದ ಟೆಬಲ್ ಟೆನ್ನಿಸ್ ೧೭ ವರ್ಷದ ಬಾಲಕಿಯರ ವಿಭಾಗದಲ್ಲಿ ೯ನೇ ತರಗತಿಯ ಹೃದ್ಯ ಎಸ್. ಅವರು ಜಿಲ್ಲಾಮಟ್ಟದ ಟೆಬಲ್ ಟೆನ್ನಿಸ್ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನವನ್ನು ಪಡೆದು ರಾಜ್ಯ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ.
೧೪ ವರ್ಷದ ಬಾಲಕರ ಕರಾಟೆ ವಿಭಾಗದಲ್ಲಿ ೬ನೇ ತರಗತಿಯ ಅಕ್ಷಯ್ ಮತ್ತು ೮ನೇ ತರಗತಿಯ ಪೂರ್ಣಿತ್ ಗೌಡ ಅವರು ಜಿಲ್ಲಾಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನವನ್ನು ಪಡೆದು ರಾಜ್ಯ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ.
ವಿದ್ಯಾರ್ಥಿಗಳ ಗಮನಾರ್ಹ ಸಾಧನೆಗೆ ಶಾಲಾ ಆಡಳಿತ ಮಂಡಳಿ, ಕಾರ್ಯದರ್ಶಿ ಭಾಸ್ಕರ್, ಮುಖ್ಯ ಶಿಕ್ಷಕಿ ವಸಂತಮ್ಮ, ದೈಹಿಕ ಶಿಕ್ಷಣ ಶಿಕ್ಷಕರಾದ ದಯಾನಂದ್ ಎನ್. ಮತ್ತು ಸುಚಿತ್ರಾ ಹೆಚ್.ಕೆ. ಎಲ್ಲಾ ಶಿಕ್ಷಕ ವೃಂದ ಮತ್ತು ವಿದ್ಯಾರ್ಥಿಗಳು ಅಭಿನಂದನೆ ಸಲ್ಲಿಸಿದ್ದಾರೆ.




























